Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

Share
1 Min Read
SHARE

newsics.com / ನ್ಯೂಸಿಕ್ಸ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ ಮೂಲಕ ಅನರ್ಹ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಿದೆ.

ಯೋಜನೆಯ ದುರುಪಯೋಗ ಕಂಡು ಬಂದಿರುವ ಹಿನ್ನೆಲೆ ಪರಿಷ್ಕರಣೆ ನಡೆದಿದ್ದು, ಫಲಾನುಭವಿಗಳು ಮರು ಅರ್ಜಿ ಸಲ್ಲಿಸಬೇಕೆಂದು ಸ್ವತಃ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಪರಿಷ್ಕರಣೆ ಆರಂಭವಾದ ಬೆನ್ನಲ್ಲೇ 1.30 ಕೋಟಿ ಗೃಹಲಕ್ಷ್ಮಿಯರ ಪೈಕಿ 3.89 ಲಕ್ಷ ಅನರ್ಹ ಫಲಾನುಭವಿಗಳನ್ನು ಕೈಬಿಡಲಾಗಿದೆ. ಇವರು ಗೃಹಲಕ್ಷ್ಮೀ ಯೋಜನೆಗೆ ಅನರ್ಹ ಎಂದು ಗುರುತಿಸಲಾಗಿದೆ.

ವಿವಿಧ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸಿ ಪರಿಶೀಲನೆ ನಡೆಸಿದ ಬಳಿಕ ಅನರ್ಹ ಫಲಾನುಭವಿಗಳನ್ನು ಗುರುತಿಸಿರುವ ಇಲಾಖೆ, ಅವರ ಖಾತೆಗಳಿಗೆ ಹಣ ವರ್ಗಾವಣೆ ಸ್ಥಗಿತಗೊಳಿಸಿದೆ. ಇಲಾಖೆಯ ಮಾಹಿತಿಯ ಪ್ರಕಾರ, ಆದಾಯ ತೆರಿಗೆ ಮತ್ತು GST ಪಾವತಿಸುವ 1.94 ಲಕ್ಷ ಮಂದಿಯನ್ನು ಯೋಜನೆಯಿಂದ ಹೊರಗಿಡಲಾಗಿದೆ. ಜೊತೆಗೆ, ಮೃತಪಟ್ಟ 1.95 ಲಕ್ಷ ಫಲಾನುಭವಿಗಳ ಹೆಸರಿನಲ್ಲಿದ್ದ ಖಾತೆಗಳಿಗೂ ಹಣ ಜಮೆಯಾಗುತ್ತಿರುವುದು ಪತ್ತೆಯಾಗಿದ್ದು, ಅಂತಹ ಖಾತೆಗಳಿಗೆ ಸಹ ಹಣ ವರ್ಗಾವಣೆ ಸ್ಥಗಿತಗೊಳಿಸಲಾಗಿದೆ.

ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಅನರ್ಹ ಫಲಾನುಭವಿಗಳ ಪೈಕಿ ಬೆಂಗಳೂರು ನಗರ ಜಿಲ್ಲೆ ಮೊದಲ ಸ್ಥಾನದಲ್ಲಿದ್ದು, 47,871 ಗೃಹಲಕ್ಷ್ಮಿಯರನ್ನ ಕೈಬಿಡಲಾಗಿದೆ. ತದನಂತರ ಬೆಳಗಾವಿ, ದಕ್ಷಿಣ ಕನ್ನಡ, ಮೈಸೂರು ಹಾಗೂ ತುಮಕೂರು ಜಿಲ್ಲೆ ಅನರ್ಹರ ಪರಿಷ್ಕರಣೆಯಲ್ಲಿ ಅಗ್ರ 5ರಲ್ಲಿ ಸ್ಥಾನ ಪಡೆದಿವೆ.

ಮಾರ್ಚ್ ತಿಂಗಳಲ್ಲೇ ಒಟ್ಟು 3.89 ಲಕ್ಷ ಅನರ್ಹ ಫಲಾನುಭವಿಗಳನ್ನು ಗುರುತಿಸಿರುವ ಇಲಾಖೆ, ವಿವಿಧ ಸರ್ಕಾರಿ ದತ್ತಾಂಶಗಳನ್ನು ಪರಸ್ಪರ ಹೊಂದಾಣಿಕೆ ಮಾಡಿ ಈ ಪರಿಷ್ಕರಣೆ ಕೈಗೊಂಡಿದೆ. ಅನರ್ಹರಿಗೆ ಹಣ ಪಾವತಿಯಾಗುವುದನ್ನು ತಡೆಯುವ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶೀಘ್ರದಲ್ಲೇ ಬಯೋಮೆಟ್ರಿಕ್ ದೃಢೀಕರಣ ವ್ಯವಸ್ಥೆ ಜಾರಿಗೆ ತರಲೂ ಸಿದ್ಧತೆ ನಡೆಸಿದೆ. ಈ ಕ್ರಮದಿಂದ ತಾಂತ್ರಿಕ ಲೋಪಗಳು ಮತ್ತು ನಕಲಿ ಫಲಾನುಭವಿಗಳ ಸಮಸ್ಯೆಯನ್ನು ನಿಯಂತ್ರಿಸಲು ಸಾಧ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲಾಖೆಯ ಈ ಪರಿಷ್ಕರಣೆಯಿಂದ ಸರ್ಕಾರದ ಬೊಕ್ಕಸಕ್ಕೆ ಪ್ರತಿ ತಿಂಗಳು ಸುಮಾರು 77 ಕೋಟಿ ರೂ. ಉಳಿತಾಯವಾಗಲಿದೆ.

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

TAGGED:Gruhalakshmi scheme revision begins
Share This Article
Facebook Twitter Copy Link Print
Previous Article Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ
Next Article Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?