Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

Share
2 Min Read
SHARE

newsics.com / ನ್ಯೂಸಿಕ್ಸ್

ಬೆಳಗಾವಿ : ಎರಡು ಕೋಟಿ ರೂಪಾಯಿ ವಿಮೆ ಹಣ ಪಡೆಯುವ ಉದ್ದೇಶದಿಂದ ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯ ಹತ್ಯೆ ಮಾಡಿಸಿರುವ ಪ್ರಕರಣದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಪ್ರಕರಣದ ತನಿಖೆಯ ವೇಳೆ ಎಫ್ಎಸ್ಎಲ್ (ಫಾರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿ) ಅಧಿಕಾರಿಗಳ ಪಾತ್ರವೂ ಬೆಳಕಿಗೆ ಬಂದಿದೆ.

ರಾಜ್ಯದಲ್ಲೇ ಮೊದಲ ಬಾರಿಗೆ ಕೊಲೆ ಪ್ರಕರಣವೊಂದರಲ್ಲಿ ಎಫ್ಎಸ್ಎಲ್ ಅಧಿಕಾರಿಗಳು ನೇರವಾಗಿ ಭಾಗಿಯಾಗಿರುವ ಆರೋಪ ಕೇಳಿಬಂದಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯ ಘಡಗೋರಿ ಗ್ರಾಮದ ಮಾಜಿ ಸೈನಿಕ ಸಂದೀಪ್ ಮಂಜರಗಿ ಅವರ ಸಾವನ್ನು ಆರಂಭಿಕ ಹಂತದಲ್ಲಿ ರಸ್ತೆ ಅಪಘಾತ ಎಂದು ಬಿಂಬಿಸಲಾಗಿತ್ತು. ಆದರೆ ಪ್ರಕರಣದ ತನಿಖೆಯನ್ನು ಆಳವಾಗಿ ನಡೆಸಿದಾಗ ಇದು ಪೂರ್ವನಿಯೋಜಿತವಾಗಿ ರೂಪಿಸಲಾದ ಕೊಲೆ ಎಂಬುದು ಬಹಿರಂಗವಾಗಿದೆ. ತನಿಖೆಯ ವೇಳೆ ಮರಣೋತ್ತರ ಪರೀಕ್ಷೆ ಹಾಗೂ ಎಫ್ಎಸ್ಎಲ್ ವರದಿಗಳನ್ನು ತಿರುಚಿ ಪ್ರಕರಣದ ದಿಕ್ಕು ತಪ್ಪಿಸಲು ಯತ್ನ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಹಲವು ಅಧಿಕಾರಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ತನಿಖೆಯ ಪ್ರಕಾರ, ಬೆಳಗಾವಿಯ ಎಫ್ಎಸ್ಎಲ್ ಕಚೇರಿಯ ಸೀನಿಯರ್ ಸೈಂಟಿಫಿಕ್ ಆಫೀಸರ್ ಪಿ.ಎನ್. ನಾಗರಾಜ್, ಲ್ಯಾಬ್ ಅಸಿಸ್ಟೆಂಟ್ ಚನ್ನಯ್ಯ, ಗುಮಾಸ್ತ ಅಪ್ಪಾಸಾಬ್ ನಾಯಿಕ್, ಆರ್ಎಂಪಿ ವೈದ್ಯ ಬಸವರಾಜ್ ಭಸ್ಮೆ ಹಾಗೂ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಫ್ಡಿಎ ಅಶೋಕ ಗುಜಾನಾಳ ಅವರನ್ನು ಬಂಧಿಸಲಾಗಿದೆ.
ಪ್ರಕರಣದಲ್ಲಿ ಪ್ರಮುಖ ಆರೋಪಿ ಸುಮಾ ಅವರಿಂದ ಹಣದ ಹಂಚಿಕೆ ನಡೆದಿರುವ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದ್ದು, ಎಫ್ಡಿಎ ಅಶೋಕ ಗುಜಾನಾಳ ಮೂಲಕ ಎಫ್ಎಸ್ಎಲ್ ಅಧಿಕಾರಿಗಳ ಸಂಪರ್ಕ ಸಾಧಿಸಲಾಗಿತ್ತು ಎನ್ನಲಾಗಿದೆ. ಈ ಮೂಲಕ ಪ್ರಕರಣವನ್ನು ಅಪಘಾತ ಎಂದು ತೋರಿಸುವ ಪ್ರಯತ್ನ ನಡೆದಿರಬಹುದೆಂಬ ಅನುಮಾನ ವ್ಯಕ್ತವಾಗಿದೆ.
ಇದುವರೆಗೆ ಪ್ರಕರಣದಲ್ಲಿ ಮೃತ ಸಂದೀಪ್ ಮಂಜರಗಿ ಅವರ ಪತ್ನಿ ಸುಮಾ, ಆಕೆಯ ಪ್ರಿಯಕರ ಪುಂಡಲೀಕ, ಸ್ನೇಹಿತ ಸಚಿನ್ ಸೇರಿದಂತೆ ಒಟ್ಟು ಒಂಬತ್ತು ಮಂದಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಬಂಧಿತರಿಂದ ಮಹತ್ವದ ಮಾಹಿತಿಗಳು ಲಭ್ಯವಾಗುತ್ತಿದ್ದು, ಪ್ರಕರಣದಲ್ಲಿ ಇನ್ನೂ ಕೆಲವರ ಪಾತ್ರ ಇರುವ ಸಾಧ್ಯತೆಗಳಿವೆ ಎಂದು ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ.
ಈ ಪ್ರಕರಣವು ರಾಜ್ಯದ ತನಿಖಾ ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಫಾರೆನ್ಸಿಕ್ ವರದಿಗಳ ದುರುಪಯೋಗ ಮತ್ತು ಅಧಿಕಾರ ದುರ್ಬಳಕೆಯ ಆರೋಪಗಳು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿವೆ. ತನಿಖೆ ಮುಂದುವರಿದಿದ್ದು, ಇನ್ನಷ್ಟು ಆರೋಪಿಗಳ ಬಂಧನ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಕರಣದ ಸಂಪೂರ್ಣ ಸತ್ಯಾಂಶ ಹೊರಬೀಳಲು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಮಹತ್ವದ ಮಾಹಿತಿಗಳು ಬಹಿರಂಗವಾಗುವ ನಿರೀಕ್ಷೆಯಿದೆ.

TAGGED:Husband murdered for insurance money: FSL officials also involved!!
Share This Article
Facebook Twitter Copy Link Print
Previous Article High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು
Next Article Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?