Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ
ಕರ್ನಾಟಕಪ್ರಮುಖ

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

Share
2 Min Read
SHARE

newsics.com/ನ್ಯೂಸಿಕ್ಸ್

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ 2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ (Women’s T20 World Cup 2026) ಭಾರತ ವನಿತಾ ಪಡೆಗೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ಸ್ಪಿನ್ನರ್, ಕನ್ನಡತಿ ಶ್ರೇಯಾಂಕ ಪಾಟೀಲ್ (Shreyanka Patil) ಗಂಭೀರ ಗಾಯಕ್ಕೆ ತುತ್ತಾಗಿದ್ದಾರೆ.

ಶ್ರೇಯಾಂಕ ಅವರ ಗಾಯ ಎಷ್ಟು ಗಂಭೀರವಾಗಿದೆಯೆಂದರೆ ಅವರಿಗೆ ನಡೆಯಲು ಸಹ ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರನ್ನು ಸ್ಟ್ರೆಚರ್ ಮೂಲಕ ಮೈದಾನದಿಂದ ಹೊರಕ್ಕೆ ಕರೆದುಕೊಂಡು ಹೋಗಲಾಗಿದೆ. ಮೇಲ್ನೋಟಕ್ಕೆ ಶ್ರೇಯಾಂಕ ಅವರ ಗಾಯ ಗಂಭೀರವಾಗಿರುವಂತೆ ಕಾಣುತ್ತಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಕ್ಯಾನ್ನಿಂಗ್ ವರದಿ ಬಂದ ಬಳಿಕವಷ್ಟೇ ಶ್ರೇಯಾಂಕ ಅವರ ಗಾಯ ಎಷ್ಟು ಗಂಭೀರವಾಗಿದೆ ಎಂಬುದು ಖಚಿತವಾಗಿ ತಿಳಿಯಲಿದೆ.

ಶ್ರೇಯಾಂಕಾಗೆ ಗಂಭೀರ ಗಾಯ

ಟೀಂ ಇಂಡಿಯಾ ನೀಡಿದ 209 ರನ್​ಗಳ ಗುರಿ ಬೆನ್ನಟ್ಟಿದ ನೆದರ್ಲ್ಯಾಂಡ್ಸ್ ತಂಡದ ಇನ್ನಿಂಗ್ಸ್‌ನ ಆರನೇ ಓವರ್‌ನ ಮೊದಲ ಎಸೆತದಲ್ಲಿ ಈ ದುರಂತ ಸಂಭವಿಸಿತು. ಈ ಪಂದ್ಯದಲ್ಲಿ ಮೊದಲ ಓವರ್ ಬೌಲ್ ಮಾಡಲು ಬಂದ ಶ್ರೇಯಾಂಕ ಪಾಟೀಲ್ ಎಸೆದ ಮೊದಲ ಎಸೆತವನ್ನು ಸ್ಟ್ರೈಕ್‌ನಲ್ಲಿದ್ದ ಮೊಲ್ಕೆನ್‌ಬೋರ್ ಮಿಡ್-ಆನ್ ಕಡೆಗೆ ಆಡಿದರು. ಹೀಗಾಗಿ ಶ್ರೇಯಾಂಕ ಬೌಲಿಂಗ್ ಮಾಡಿದ ಬಳಿಕ ಚೆಂಡನ್ನು ಹಿಡಿಯಲು ಅದರ ಹಿಂದೆ ಓಡಿದರು. ಚೆಂಡಿನ ಬಳಿ ಹೋದ ಶ್ರೇಯಾಂಕ ಅದನ್ನು ತೆಗೆದುಕೊಳ್ಳಲು ಕೆಳಕ್ಕೆ ಬಾಗಿದರು. ಈ ಪ್ರಕ್ರಿಯೆಯಲ್ಲಿ ಶ್ರೇಯಾಂಕ ಸಮತೋಲನ ಕಳೆದುಕೊಂಡರು. ಹೀಗಾಗಿ ಅವರ ಬಲಗಾಲು ತಿರುಚಿತು.

ಇದರಿಂದ ಶ್ರೇಯಾಂಕ ತೀವ್ರ ನೋವಿನಿಂದ ಮೈದಾನದಲ್ಲೇ ಬಿದ್ದು ನರಳಲು ಶುರು ಮಾಡಿದರು. ಶ್ರೇಯಂಕಾ ನೋವಿನಿಂದ ಬಳಲುತ್ತಿರುವುದನ್ನು ನೋಡಿದ ಅಂಪೈರ್‌ಗಳು ಮತ್ತು ತಂಡದ ಸದಸ್ಯರು ತಕ್ಷಣವೇ ಫಿಸಿಯೋ ಅವರನ್ನು ಮೈದಾನಕ್ಕೆ ಕರೆಸಿದರು. ಶ್ರೇಯಾಂಕ ಅವರನ್ನು ಪರೀಕ್ಷಿಸಿದ ಫಿಸಿಯೋ ಪ್ರಥಮ ಚಿಕಿತ್ಸೆಯ ಬಳಿಕ ಅವರನ್ನು ಡಗೌಟ್​ಗೆ ಕರೆದುಕೊಂಡು ಹೋಗಲು ಪ್ರಯತ್ನಿಸಿದರು. ಆದರೆ ಶ್ರೇಯಾಂಕಗೆ ಸರಿಯಾಗಿ ನಿಲ್ಲಲು ಸಹ ಸಾಧ್ಯವಾಗಲಿಲ್ಲ.

ಕಣ್ಣೀರಿಡುತ್ತ ಮೈದಾನ ತೊರೆದ ಶ್ರೇಯಾಂಕ

ಹೀಗಾಗಿ ಕಾರ್ಟ್ ಮತ್ತು ಸ್ಟ್ರೆಚರ್ ಅನ್ನು ತಕ್ಷಣವೇ ಮೈದಾನಕ್ಕೆ ತರಬೇಕಾಯಿತು. ಶ್ರೇಯಂಕಾ ಅವರನ್ನು ಸ್ಟ್ರೆಚರ್‌ ಮೇಲೆ ಮಲಗಿಸಿ ಮೈದಾನದಿಂದ ಹೊರಗೆ ಕರೆದೊಯ್ಯಲಾಯಿತು. ಶ್ರೇಯಂಕಾ ಮೈದಾನದಿಂದ ಹೊರಡುವಾಗ ಕಣ್ಣೀರಿಡುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿತ್ತು. ಹಾಗೆಯೇ ಅವರ ಮುಖದಲ್ಲಿ ನೋವು ಮತ್ತು ನಿರಾಶೆ ಸ್ಪಷ್ಟವಾಗಿ ಗೋಚರಿಸುತ್ತಿತ್ತು. ತಂಡದ ಇತರ ಆಟಗಾರ್ತಿಯರು ಕೂಡ ಶ್ರೇಯಾಂಕರನ್ನು ಬೇಸರದಲ್ಲೇ ಬೀಳ್ಕೊಟ್ಟರು.

ಈ ಹಿಂದೆಯೂ ಶ್ರೇಯಾಂಕರನ್ನು ಕಾಡಿದ್ದ ಗಾಯ

ಶ್ರೇಯಾಂಕ ಪಾಟೀಲ್ ಗಾಯಕ್ಕೆ ತುತ್ತಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಅವರು ಕಾಲು ಮತ್ತು ಬೆರಳಿನ ಗಾಯಗಳಿಂದ ಬಳಲುತ್ತಿದ್ದರು. ಇದೀಗ ಶ್ರೇಯಾಂಕ ಹೊಸ ಗಾಯಕ್ಕೆ ತುತ್ತಾಗಿರುವುದು ತಂಡವನ್ನು ಸಂಕಷ್ಟಕ್ಕೀಡು ಮಾಡಿದೆ. ಏಕೆಂದರೆ ಶ್ರೇಯಾಂಕ ತಂಡದ ಪ್ರಮುಖ ಸ್ಪಿನ್ನರ್ ಆಗಿದ್ದರು. ಇದಕ್ಕೂ ಮೊದಲು, 2024 ರ ಏಷ್ಯಾಕಪ್ ಸಮಯದಲ್ಲಿ, ಶ್ರೇಯಾಂಕಾ ಅವರ ಬೆರಳಿಗೆ ಗಂಭೀರವಾದ ಗಾಯವಾಗಿತ್ತು. ಹೀಗಾಗಿ ಅವರು 14 ತಿಂಗಳುಗಳ ಕಾಲ ಕ್ರಿಕೆಟ್‌ನಿಂದ ಹೊರಗಿದ್ದರು. ಇದರ ಜೊತೆಗೆ ಐಪಿಎಲ್ ಸಮಯದಲ್ಲೂ ಶ್ರೇಯಾಂಕ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದರು. ಇದೀಗ ಐಸಿಸಿ ಟೂರ್ನಿಯಲ್ಲಿ ಶ್ರೇಯಾಂಕ ಗಾಯಗೊಂಡಿದ್ದಾರೆ. ದೇವರ ದಯೆಯಿಂದ ಶ್ರೇಯಾಂಕಗೆ ಆಗಿರುವ ಗಾಯ ಗಂಭೀರವಾಗಿರದೆ ಅವರು ತಂಡದ ಪರ ಆದಷ್ಟು ಬೇಗ ಕಣಕ್ಕಿಳಿಯಲಿ ಎಂಬುದು ಕೋಟ್ಯಾಂತರ ಭಾರತೀಯರ ಪ್ರಾರ್ಥನೆಯಾಗಿದೆ.

 

https://x.com/BCCIWomen/status/2067278690594300365?ref_src=twsrc%5Etfw%7Ctwcamp%5Etweetembed%7Ctwterm%5E2067278690594300365%7Ctwgr%5E01c0d387bfb4d5e73bccd0abc827a78049a0ecee%7Ctwcon%5Es1_c10&ref_url=https%3A%2F%2Fapi-news.dailyhunt.in%2F

https://x.com/imrehan456/status/2067281271902912668?ref_src=twsrc%5Etfw%7Ctwcamp%5Etweetembed%7Ctwterm%5E2067281271902912668%7Ctwgr%5Eb0a0a0a863ea89c00696f6c79b34f00519c3a2e6%7Ctwcon%5Es1_c10&ref_url=https%3A%2F%2Fapi-news.dailyhunt.in%2F

 

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

TAGGED:Shrank left the field in tears
Share This Article
Facebook Twitter Copy Link Print
Previous Article 25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ
Next Article PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

Popular Posts

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

ಜೂ.30ರೊಳಗೆ ಕೆವೈಸಿ ಮಾಡದಿದ್ರೆ ಗ್ಯಾಸ್ ಸಬ್ಸಿಡಿ ಕಟ್‌: ಮನೆಯಿಂದ್ಲೇ ಜಸ್ಟ್ ಈ ರೀತಿ ಮಾಡಿ

2 Min Read

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

You Might Also Like

ಪ್ರಮುಖವೈರಲ್

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read
ಕರ್ನಾಟಕಪ್ರಮುಖಮನರಂಜನೆ

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?