Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

Share
1 Min Read
SHARE

newsics.com/ನ್ಯೂಸಿಕ್ಸ್

ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಸಕಾಲದಲ್ಲಿ ಹಾಜರಾಗುವುದನ್ನು ಖಚಿತಪಡಿಸಿಕೊಳ್ಳಲು ಜಾರಿಗೆ ತರಲಾಗಿರುವ ‘ಕರ್ತವ್ಯ’ (KAAMS) ಮೊಬೈಲ್ ಅಪ್ಲಿಕೇಶನ್ ಬಳಕೆಯ ಕುರಿತು ರಾಜ್ಯ ಸರ್ಕಾರ ಈಗ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಅವರು ಇಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮಹತ್ವದ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಕಳೆದ ಜೂನ್ 4, 2026 ರಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಎಲ್ಲಾ ಕಾರ್ಯದರ್ಶಿಗಳ ಸಭೆಯಲ್ಲಿ, ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಕಡ್ಡಾಯವಾಗಿ ಸಮಯಕ್ಕೆ ಸರಿಯಾಗಿ ಕಚೇರಿಯಲ್ಲಿ ಹಾಜರಿರಬೇಕು ಎಂದು ಸೂಚಿಸಲಾಗಿತ್ತು. ಇದರ ಭಾಗವಾಗಿ ಎಲ್ಲಾ ಸಿಬ್ಬಂದಿಗಳು ‘ಕರ್ತವ್ಯ’ (KAAMS) ಮೊಬೈಲ್ ಆಪ್ನಲ್ಲಿ ನೋಂದಣಿ ಮಾಡಿಕೊಂಡು, ಪ್ರತಿದಿನ ತಮ್ಮ ಹಾಜರಾತಿಯನ್ನು ಕಡ್ಡಾಯವಾಗಿ ದಾಖಲಿಸಬೇಕಿದೆ.
ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಆದೇಶದ ಪ್ರಕಾರ, ಜೂನ್ 16, 2026 ರವರೆಗಿನ ಅಂಕಿಅಂಶಗಳನ್ನು ಪರಿಶೀಲಿಸಿದಾಗ ರಾಜ್ಯದಲ್ಲಿ ಇನ್ನೂ 2,13,925 ಅಧಿಕಾರಿಗಳು/ನೌಕರರು ‘ಕರ್ತವ್ಯ’ ಮೊಬೈಲ್ ಆಪ್ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿಲ್ಲ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಈ ಬೇಜವಾಬ್ದಾರಿತನವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯ ಕಾರ್ಯದರ್ಶಿಗಳು, ಜಿಲ್ಲಾ ಮಟ್ಟದ ಉನ್ನತ ಅಧಿಕಾರಿಗಳಿಗೆ ಈ ಕೆಳಗಿನಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಸಿಇಒಗಳು ಈ ವಿಷಯದಲ್ಲಿ ವೈಯಕ್ತಿಕವಾಗಿ ಗಮನಹರಿಸಬೇಕು.ತಮ್ಮ ಜಿಲ್ಲ ವ್ಯಾಪ್ತಿಯಲ್ಲಿ ಇದುವರೆಗೂ ಆಪ್ನಲ್ಲಿ ನೋಂದಾಯಿಸಿಕೊಳ್ಳದ ಅಧಿಕಾರಿ/ನೌಕರರನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಈ ಆದೇಶದ ಅನ್ವಯ ಕೈಗೊಂಡ ಕ್ರಮಗಳ ಕುರಿತು ಮುಂಬರುವ 7 ದಿನಗಳ ಒಳಗಾಗಿ ಕಡ್ಡಾಯವಾಗಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಡಾ. ಶಾಲಿನಿ ರಜನೀಶ್ ಅವರು ಖಡಕ್ ಆದೇಶ ನೀಡಿದ್ದಾರೆ.

ಜೂ.30ರೊಳಗೆ ಕೆವೈಸಿ ಮಾಡದಿದ್ರೆ ಗ್ಯಾಸ್ ಸಬ್ಸಿಡಿ ಕಟ್‌: ಮನೆಯಿಂದ್ಲೇ ಜಸ್ಟ್ ಈ ರೀತಿ ಮಾಡಿ

 

TAGGED:State government employees' attendance on duty is mandatory; strict order from the government
Share This Article
Facebook Twitter Copy Link Print
Previous Article ಜೂ.30ರೊಳಗೆ ಕೆವೈಸಿ ಮಾಡದಿದ್ರೆ ಗ್ಯಾಸ್ ಸಬ್ಸಿಡಿ ಕಟ್‌: ಮನೆಯಿಂದ್ಲೇ ಜಸ್ಟ್ ಈ ರೀತಿ ಮಾಡಿ
Next Article ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

Popular Posts

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

ಜೂ.30ರೊಳಗೆ ಕೆವೈಸಿ ಮಾಡದಿದ್ರೆ ಗ್ಯಾಸ್ ಸಬ್ಸಿಡಿ ಕಟ್‌: ಮನೆಯಿಂದ್ಲೇ ಜಸ್ಟ್ ಈ ರೀತಿ ಮಾಡಿ

2 Min Read

You Might Also Like

ಕರ್ನಾಟಕ

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read
ಕರ್ನಾಟಕಪ್ರಮುಖ

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read
ಪ್ರಮುಖವೈರಲ್

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read
ಪಂಚಾಂಗಈ ದಿನಜ್ಯೋತಿಷ್ಯಪ್ರಮುಖ

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?