Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Sports > ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ
Sportsಪ್ರಮುಖ

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

Share
2 Min Read
SHARE

ಭಾರತ ಮಹಿಳಾ ತಂಡದ ಸ್ಟಾರ್ ಬ್ಯಾಟರ್ ಸ್ಮೃತಿ ಮಂದಾನ ಮತ್ತೊಮ್ಮೆ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದು, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅಪರೂಪದ ವಿಶ್ವ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಮಹಿಳಾ ಟಿ20 ವಿಶ್ವಕಪ್ 2026ರಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಮಂದಾನ ಕೇವಲ 47 ಎಸೆತಗಳಲ್ಲಿ 74 ರನ್ ಗಳಿಸಿ ಮಿಂಚಿದರು. ಅವರ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ ಹಾಗೂ 1 ಸಿಕ್ಸರ್ ಸೇರಿದ್ದವು.

ಈ ಪಂದ್ಯದಲ್ಲಿ ಬಾರಿಸಿದ ಬೌಂಡರಿಗಳೊಂದಿಗೆ ಸ್ಮೃತಿ ಮಂದಾನ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 604 ಬೌಂಡರಿಗಳ ಮೈಲಿಗಲ್ಲು ತಲುಪಿದ್ದಾರೆ. ಇದರೊಂದಿಗೆ ಪುರುಷ ಮತ್ತು ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ 600ಕ್ಕೂ ಹೆಚ್ಚು ಬೌಂಡರಿಗಳನ್ನು ಸಿಡಿಸಿದ ವಿಶ್ವದ ಮೊದಲ ಹಾಗೂ ಏಕೈಕ ಕ್ರಿಕೆಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

 

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬೌಂಡರಿ:

* ಸ್ಮೃತಿ ಮಂದಾನ – 604

* ಬಾಬರ್ ಅಜಮ್ – 477

* ಪಾಲ್ ಸ್ಟಿರ್ಲಿಂಗ್ – 400+

* ರೋಹಿತ್ ಶರ್ಮಾ – 300+

ಇದಕ್ಕೂ ಮೊದಲು, ಸ್ಮೃತಿ ಮಂದಾನ ಭಾರತ ಪರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಅವರು 4,401 ರನ್ ಗಳಿಸಿ ರೋಹಿತ್ ಶರ್ಮಾ ಅವರ 4,231 ರನ್‌ಗಳ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಮಂದಾನ (74) ಮತ್ತು ಶಫಾಲಿ ವರ್ಮಾ (55) ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಭಾರತ 20 ಓವರ್‌ಗಳಲ್ಲಿ 209 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತ ದಾಖಲಿಸಿದ ಗರಿಷ್ಠ ಸ್ಕೋರ್ ಇದಾಗಿದೆ.

210 ರನ್‌ಗಳ ಗುರಿ ಬೆನ್ನತ್ತಿದ ನೆದರ್ಲ್ಯಾಂಡ್ಸ್ ತಂಡ ಭಾರತೀಯ ಬೌಲರ್‌ಗಳ ದಾಳಿಗೆ ತತ್ತರಿಸಿ 114 ರನ್‌ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಭಾರತ 95 ರನ್‌ಗಳ ಭರ್ಜರಿ ಜಯ ಸಾಧಿಸಿತು.

ಸ್ಮೃತಿ ಮಂದಾನ ಅವರ ವಿಶ್ವ ದಾಖಲೆ ಮತ್ತು ಭಾರತದ ಈ ಗೆಲುವು ಟೂರ್ನಿಯಲ್ಲಿ ತಂಡದ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದ್ದು, ಮುಂದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧವೂ ಅಭಿಮಾನಿಗಳನಿರೀಕ್ಷೆ ಹೆಚ್ಚಿಸಿದೆ.

TAGGED:@news#T20 #WorldCup #India #India#cricketnewsicst20
Share This Article
Facebook Twitter Copy Link Print
Previous Article ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?
Next Article Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?