Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Crime > ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!
Crime

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

Share
1 Min Read
SHARE

**ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!**

 

ಬೆಂಗಳೂರು: ಪೊಲೀಸ್ ಅಧಿಕಾರಿಯೊಬ್ಬನೇ ದರೋಡೆ ಗ್ಯಾಂಗ್ ಕಟ್ಟಿಕೊಂಡು ಉದ್ಯಮಿಗಳನ್ನು ಬೆದರಿಸಿ ₹20 ಲಕ್ಷ ಲೂಟಿ ಮಾಡಿದ ಬೆಚ್ಚಿಬೀಳಿಸುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

 

ಕೇರಳ ಮೂಲದ ಕೆಲ ಉದ್ಯಮಿಗಳು ವ್ಯಾಪಾರ ಉದ್ದೇಶಕ್ಕಾಗಿ ಭಾರಿ ಮೊತ್ತದ ನಗದಿನೊಂದಿಗೆ ಬೆಂಗಳೂರಿನ ಮಡಿವಾಳದ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದರು. ಅವರ ಬಳಿ ದೊಡ್ಡ ಮೊತ್ತದ ಹಣವಿರುವ ಮಾಹಿತಿ ಪಡೆದಿದ್ದ ಸಿಐಡಿ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ, ಹಣ ಸುಲಿಗೆ ಮಾಡಲು ಸಂಚು ರೂಪಿಸಿದ್ದಾನೆ ಎನ್ನಲಾಗಿದೆ.

ಆರೋಪದ ಪ್ರಕಾರ, ಮಹೇಶ್ ತನ್ನ ಸಹಚರರಾದ ಹ್ಯಾರಿಸ್, ಕುಪೇಂದ್ರ, ಶಪಿ ಮತ್ತು ಶಾನಿ ಅವರೊಂದಿಗೆ ಸೇರಿ ದರೋಡೆಗೆ ಪ್ಲಾನ್ ಮಾಡಿದ್ದ. ಘಟನೆಯ ದಿನ ಅಧಿಕೃತ ಸಿಐಡಿ ಜೀಪ್‌ನಲ್ಲಿ ಹೋಟೆಲ್‌ಗೆ ಬಂದ ತಂಡ, ತಾವು ಕ್ರೈಂ ವಿಭಾಗದ ಪೊಲೀಸರು ಎಂದು ಹೇಳಿ ನಕಲಿ ಗುರುತಿನ ಚೀಟಿ ತೋರಿಸಿ ಉದ್ಯಮಿಗಳನ್ನು ಬೆದರಿಸಿದೆ.

“ನೀವು ಅಕ್ರಮ ಟ್ರೇಡಿಂಗ್‌ಗಾಗಿ ಹಣ ತಂದಿದ್ದೀರಿ” ಎಂದು ಬ್ಲ್ಯಾಕ್‌ಮೇಲ್ ಮಾಡಿದ ಆರೋಪಿಗಳು, ಭಯಗೊಂಡ ಉದ್ಯಮಿಗಳಿಂದ ₹20 ಲಕ್ಷ ಪಡೆದು ಅದೇ ಸಿಐಡಿ ಜೀಪ್‌ನಲ್ಲಿ ಪರಾರಿಯಾಗಿದ್ದಾರೆ.

ದೂರು ದಾಖಲಾದ ಬಳಿಕ ಹೋಟೆಲ್ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಮಡಿವಾಳ ಪೊಲೀಸರು, ದರೋಡೆಗೆ ಇಲಾಖೆಯ ಜೀಪ್ ಬಳಸಿರುವುದನ್ನು ಪತ್ತೆಹಚ್ಚಿದರು. ಬಳಿಕ ಕುಪೇಂದ್ರ ಎಂಬ ಆರೋಪಿಯನ್ನು ಬಂಧಿಸಿದಾಗ, ಈ ಪ್ರಕರಣದ ಮಾಸ್ಟರ್ ಮೈಂಡ್ ಸಿಐಡಿ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ಎಂಬುದು ಬೆಳಕಿಗೆ ಬಂದಿದೆ.

ಸಹಚರನ ಬಂಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಮಹೇಶ್ ಸೇರಿದಂತೆ ಉಳಿದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಪೊಲೀಸರು ದರೋಡೆಗೆ ಬಳಸಿದ್ದ ಸಿಐಡಿ ಜೀಪನ್ನು ವಶಪಡಿಸಿಕೊಂಡಿದ್ದು, ಪರಾರಿಯಾಗಿರುವ ಆರೋಪಿಗಳಿಗಾಗಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಸದ್ಯ ಪ್ರಕರಣ ಮಡಿವಾಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

TAGGED:@news#breaking#policestorycrimenewsics
Share This Article
Facebook Twitter Copy Link Print
Previous Article Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ
Next Article ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

Crime

“ಭಕ್ತಿ ಹೆಸರಿನಲ್ಲಿ ಭಯಾನಕ ಶೋಷಣೆ!”: ಮಹಿಳೆ ಮೇಲೆ ವರ್ಷಗಳ ಲೈಂಗಿಕ ಶೋಷಣೆ; ಮೂತ್ರ ಕುಡಿಯುವಂತೆ ಬಲವಂತ, ಸ್ವಘೋಷಿತ ‘ದೇವಮಾನವ’ ಸೇರಿ 8 ಮಂದಿ ಬಂಧನ

1 Min Read
Crime

ಚಿಕ್ಕಬಳ್ಳಾಪುರದಲ್ಲಿ ಬೆಚ್ಚಿಬೀಳಿಸಿದ ಘಟನೆ: 3 ತಿಂಗಳ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ; ಪೋಕ್ಸೋ ಪ್ರಕರಣ ದಾಖಲು

1 Min Read
Crime

ದರ್ಶನ್ ಕೇಸ್‌ಗೆ ಹೊಸ ತಿರುವು: ಹೈಕೋರ್ಟ್‌ ವಕಾಲತ್ತಿನಿಂದ ಹಿಂದೆ ಸರಿದ ದರ್ಶನ್ ಪರ ವಕೀಲ

1 Min Read
Crime

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮುಖ್ಯಶಿಕ್ಷಕ ಪ್ರಕರಣ: 5 ಶಿಕ್ಷಕರು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?