Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Free Bus ವೋಟರ್ ಐಡಿ ಇರುವ ಮಹಿಳೆಯರಿಗೆ ಮಾತ್ರ ಇನ್ನು ಉಚಿತ ಬಸ್ ಪ್ರಯಾಣ ಅವಕಾಶ
ಕರ್ನಾಟಕಪ್ರಮುಖ

Free Bus ವೋಟರ್ ಐಡಿ ಇರುವ ಮಹಿಳೆಯರಿಗೆ ಮಾತ್ರ ಇನ್ನು ಉಚಿತ ಬಸ್ ಪ್ರಯಾಣ ಅವಕಾಶ

Share
2 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯದ ಮಹಿಳಾ ಪ್ರಯಾಣಿಕರಿಗಾಗಿ ಕೆಎಸ್ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ಉಚಿತವಾಗಿ ಸಂಚಾರ ಮಾಡಲು ಅವಕಾಶ ಕಲ್ಪಿಸಿರುವ ‘ಶಕ್ತಿ’ ಯೋಜನೆಗೆ ಈಗ ದೊಡ್ಡ ಮಟ್ಟದ ಪರಿಷ್ಕರಣೆ ತರಲು ಸರ್ಕಾರ ಮುಂದಾಗಿದೆ.

ಯೋಜನೆ ಜಾರಿಯಾದ ದಿನದಿಂದಲೂ ನಕಲಿ ಆಧಾರ್ ಕಾರ್ಡ್‌ಗಳನ್ನು ಸೃಷ್ಟಿಸಿ, ಬೇರೆ ರಾಜ್ಯಗಳ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿರುವ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಇದರಿಂದ ಸಾರಿಗೆ ನಿಗಮಗಳಿಗೆ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗುತ್ತಿದ್ದು, ಇದಕ್ಕೆ ಶಾಶ್ವತ ಕಡಿವಾಣ ಹಾಕಲು ಸಾರಿಗೆ ಇಲಾಖೆಯು ಸ್ಮಾರ್ಟ್ ಕಾರ್ಡ್ ವಿತರಣಾ ಪ್ರಕ್ರಿಯೆಯನ್ನು ಚುರುಕುಗೊಳಿಸಿದೆ.

ಬೇರೆ ರಾಜ್ಯಗಳ ಮಹಿಳೆಯರ ಉಚಿತ ಪ್ರಯಾಣಕ್ಕೆ ಬ್ರೇಕ್ ಹಾಕಲು ರಾಜ್ಯದ ವೋಟರ್ ಐಡಿ (ಮತದಾರರ ಗುರುತಿನ ಚೀಟಿ) ಹೊಂದಿರುವವರಿಗೆ ಮಾತ್ರ ಈ ಸ್ಮಾರ್ಟ್ ಕಾರ್ಡ್ ನೀಡಲು ಸರ್ಕಾರ ಪ್ಲಾನ್ ಮಾಡಿದೆ. ಫಲಾನುಭವಿಗಳು ತಮ್ಮ ವೋಟರ್ ಐಡಿ ಮತ್ತು ಆಧಾರ್ ಕಾರ್ಡ್ ಸಲ್ಲಿಸಿ ಸ್ಮಾರ್ಟ್ ಕಾರ್ಡ್‌ಗಳನ್ನು ಪಡೆದುಕೊಳ್ಳಬಹುದು. ಈ ಸ್ಮಾರ್ಟ್ ಕಾರ್ಡ್‌ನಲ್ಲಿ ಫಲಾನುಭವಿಯ ಹೆಸರು, ಭಾವಚಿತ್ರ, ಆಧಾರ್ ಸಂಖ್ಯೆ ಮತ್ತು ವಿಳಾಸದ ಸಂಪೂರ್ಣ ವಿವರಗಳನ್ನು ಮುದ್ರಿಸಲಾಗಿರುತ್ತದೆ. ಅತ್ಯಂತ ಪ್ರಮುಖವಾಗಿ, ಈ ಕಾರ್ಡ್ ಅನ್ನು ಇತರರಿಗೆ ವರ್ಗಾಯಿಸಲು (Transfer) ಯಾವುದೇ ಅವಕಾಶವಿರುವುದಿಲ್ಲ. ರಾಜ್ಯಾದ್ಯಂತ ಒಟ್ಟು 3 ಕೋಟಿ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಬೃಹತ್ ಗುರಿಯನ್ನು ಸರ್ಕಾರ ಹೊಂದಿದೆ.

ಬಿಎಂಟಿಸಿಯಲ್ಲಿ ಮೊದಲ ಪ್ರಯೋಗ

ಈ ಸ್ಮಾರ್ಟ್ ಕಾರ್ಡ್ ವಿತರಣಾ ಪ್ರಕ್ರಿಯೆಯು ಪ್ರಾಯೋಗಿಕವಾಗಿ ಮೊದಲು ಬೆಂಗಳೂರಿನ ಬಿಎಂಟಿಸಿ (BMTC) ವ್ಯಾಪ್ತಿಯಲ್ಲಿ ಜಾರಿಗೆ ಬರಲಿದ್ದು, ತದನಂತರ ಉಳಿದ ಮೂರು ಸಾರಿಗೆ ನಿಗಮಗಳ ಮಹಿಳಾ ಪ್ರಯಾಣಿಕರಿಗೂ ವಿಸ್ತರಿಸಲಾಗುವುದು. ಬಿಎಂಟಿಸಿ ಈಗಾಗಲೇ ಗುತ್ತಿಗೆ ಆಧಾರದ ಮೇಲೆ 11,000 ಸುಧಾರಿತ ಇಟಿಎಂ (ETM) ಯಂತ್ರಗಳನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್ ಕಾರ್ಡ್‌ಗಳಲ್ಲಿ ಅತ್ಯಾಧುನಿಕ ಎನ್‌ಎಫ್‌ಸಿ (NFC – Near Field Communication) ತಂತ್ರಜ್ಞಾನವನ್ನು ಬಳಸಲಾಗುತ್ತಿದ್ದು, ಬಸ್ಸುಗಳ ಜೊತೆಗೆ ‘ನಮ್ಮ ಮೆಟ್ರೋ’ ಸಂಚಾರಕ್ಕೂ ಇವುಗಳನ್ನು ಬಳಸಲು ಅವಕಾಶ ಕಲ್ಪಿಸಲಾಗಿದೆ.

ಉಚಿತ ವಿತರಣೆ: ಅರ್ಜಿ ಸಲ್ಲಿಕೆ ಹೇಗೆ?

ಅರ್ಹ ಮಹಿಳೆಯರಿಗೆ ಹಾಗೂ ತೃತೀಯ ಲಿಂಗಿಗಳಿಗೆ ಈ ಸ್ಮಾರ್ಟ್ ಕಾರ್ಡ್‌ಗಳನ್ನು ಸಂಪೂರ್ಣ ಉಚಿತವಾಗಿ ವಿತರಣೆ ಮಾಡಲಾಗುತ್ತದೆ. ಸಾರ್ವಜನಿಕರು ಬೆಂಗಳೂರು ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರ ಹಾಗೂ ಸೈಬರ್ ಸೆಂಟರ್‌ಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಕಾರ್ಡ್‌ಗಳನ್ನು ಪಡೆದುಕೊಳ್ಳಬಹುದು. ಇದಲ್ಲದೆ ರಾಜ್ಯದ ಎಲ್ಲಾ ಪ್ರಮುಖ ಬಸ್ ನಿಲ್ದಾಣಗಳಲ್ಲೂ ಸ್ಮಾರ್ಟ್ ಕಾರ್ಡ್ ವಿತರಣಾ ಕೌಂಟರ್‌ಗಳನ್ನು ತೆರೆಯಲಾಗುತ್ತದೆ. ಸರ್ಕಾರದ ಈ ಕಠಿಣ ಕ್ರಮವನ್ನು ಮಹಿಳಾ ಪ್ರಯಾಣಿಕರು ಸ್ವಾಗತಿಸಿದ್ದು, ನಿಜವಾದ ಫಲಾನುಭವಿಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಗ್ ಬಾಸ್ ಕನ್ನಡ 13; ವೀಕ್ಷಕರ ಬಯಕೆಯ ಸ್ಪರ್ಧಿಗಳ ಪಟ್ಟಿಯಲ್ಲಿ ಇಲ್ಲಿದೆ?

TAGGED:#freebus #shakti #voterID #news #newsics #women #karnataka
Share This Article
Facebook Twitter Copy Link Print
Previous Article BBK 13 ಬಿಗ್ ಬಾಸ್ ಕನ್ನಡ 13; ವೀಕ್ಷಕರ ಬಯಕೆಯ ಸ್ಪರ್ಧಿಗಳ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?
Next Article Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

Popular Posts

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read

You Might Also Like

ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read
ಕರ್ನಾಟಕಪ್ರಮುಖಮನರಂಜನೆ

BBK 13 ಬಿಗ್ ಬಾಸ್ ಕನ್ನಡ 13; ವೀಕ್ಷಕರ ಬಯಕೆಯ ಸ್ಪರ್ಧಿಗಳ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

2 Min Read
ಪ್ರಮುಖಮನರಂಜನೆ

ಕೊಡಗಿನಲ್ಲಿರುವ ರಶ್ಮಿಕಾ ಕನಸಿನ ಮನೆ ಒಳಗೆ ಹೇಗಿದೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rukmini Vasanth ನಟಿ ರುಕ್ಮಿಣಿ ವಸಂತ್ ಎಐ ಬಿಕಿನಿ ಫೋಟೋ ಸೃಷ್ಟಿ: ಮೂವರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?