Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

Share
2 Min Read
SHARE

newsics.com/ನ್ಯೂಸಿಕ್ಸ್

ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿಗೆ ಕೈ ಹಾಕಿರೋ ಸಿಎಂ ಡಿಕೆಶಿ ಮೇಜರ್‌ ಸರ್ಜರಿ ಮಾಡುತ್ತಿದ್ದಾರೆ. ಅದ್ರಲ್ಲೂ ಗೃಹಲಕ್ಷ್ಮಿ ಯೋಜನೆಯಲ್ಲಿ ಲಕ್ಷಕ್ಕೂ ಹೆಚ್ಚು ಮಂದಿಯನ್ನ ಕೈ ಬಿಟ್ಟಿದ್ದಾರೆ ಅನ್ನೋ ಮಾಹಿತಿಯಿದೆ. ಅಲ್ಲದೆ ಗೃಹಲಕ್ಷ್ಮಿ ಹಣ ಸಿಗಬೇಕು ಅಂದ್ರೆ ಹೊಸದಾಗಿ ಅರ್ಜಿ ಸಲ್ಲಿಸಬೇಕು ಅನ್ನೋ ಹೊಸ ರೂಲ್ಸ್‌ ಕೂಡ ತಂದಿದ್ದಾರೆ.

 

ಗೃಹಲಕ್ಷ್ಮಿ ಯೋಜನೆಗೆ ಸರ್ಕಾರ ಕೈ ಹಾಕಿರೋದ್ರ ಹಿಂದೆಯೂ ಕಾರಣವಿದೆ. ಪಂಚ ಗ್ಯಾರಂಟಿಗಳಿಗೆ ಸರ್ಕಾರದ ಬೊಕ್ಕಸದ ಮುಕ್ಕಾಲು ಭಾಗ ಹೋಗುತ್ತಿದೆ. ಹೀಗಾಗಿಯೇ ಒಂದಿಷ್ಟು ಲೂಪ್‌ಹೋಲ್‌ಗಳನ್ನ ಬಂದ್‌ ಮಾಡುತ್ತಿದ್ದಾರೆ. ಅದಕ್ಕಾಗಿಯೇ ಹೊಸದಾಗಿ ಅರ್ಜಿ ಸಲ್ಲಿಸಬೇಕು ಅಂತಾ ಸೂಚನೆ ನೀಡಲಾಗಿದೆ. ಮರು ಪರಿಶೀಲನೆ ಅರ್ಜಿ ಸಲ್ಲಿಕೆ ನಂತರ ಫಲಾನುಭವಿಗಳ ಮನೆ ಮನೆಗೆ ತೆರಳಿ ದಾಖಲೆ ಪರಿಶೀಲನೆಗೆ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. KYC ಮಾದರಿಯಲ್ಲಿ ಮರು ಪರಿಶೀಲನೆ ನಡೆಸಲು ಚರ್ಚೆ ನಡೆದಿದ್ದು, ಯಾರು ಮನೆಗೆ ಹೋಗಿ ಪರಿಶೀಲನೆ ಮಾಡಬೇಕು ಅನ್ನೋದ್ರ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನವಾಗಲಿದೆ.

ಗ್ಯಾರಂಟಿ ಕತ್ತರಿ ವಿಚಾರ ವರದಿ ಕೇಳಿದ ಸಿಎಂ ಡಿಕೆಶಿ

ಸಿಎಂ ಡಿಕೆ ಶಿವಕುಮಾರ್​ ಅವರು ವಿಧಾನಸೌಧದಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ಸಭೆ ನಡೆಸಿದರು. ಈ ವೇಳೆ ಗ್ಯಾರಂಟಿ ಪರಿಷ್ಕರಣೆಯ ವರದಿ ಕೇಳಿದ್ದಾರಂತೆ, ಪರಿಷ್ಕರಣೆ ಅಥವಾ ಮರು ಪರಿಶೀಲನಾ ಅರ್ಜಿಯೋ, ಸಾಧಕ – ಬಾಧಕಗಳ ಬಗ್ಗೆ ಅಧ್ಯಯನ ನಡೆಸಿ ಒಂದು ವಾರದೊಳಗೆ ಯಾವುದು ಉತ್ತಮ ಎಂದು ವರದಿ ನೀಡಿ ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಿಎಂ ಡಿಕೆ ಶಿವಕುಮಾರ್​ ಸೂಚನೆ ನೀಡಿದ್ದಾರೆ. ರಾಜ್ಯದ ಮತದಾರರಲ್ಲದವರಿಗೆ ಗ್ಯಾರಂಟಿ ಕತ್ತರಿ ಹಾಕುವುದಕ್ಕೆ ಸಿಎಂ ಡಿಕೆಶಿ ತೀರ್ಮಾನಿಸಿದ್ದು, ಕರ್ನಾಟಕದ ವೋಟರ್ ಐಡಿ ಇದ್ದವರಿಗೆ ಮಾತ್ರ ಗ್ಯಾರಂಟಿ ಖಚಿತ ಎಂದು ನ್ಯೂಸ್​18ಗೆ ರಾಜ್ಯ ಗ್ಯಾರಂಟಿ ಉಪಾಧ್ಯಕ್ಷ ಎಂಎಲ್​ಸಿ ದಿನೇಶ್ ಗೂಳಿಗೌಡ ಸ್ಪಷ್ಟನೆ ನೀಡಿದ್ದಾರೆ.

ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಸೂಚನೆ

ಗ್ಯಾರಂಟಿ ಯೋಜನೆಗಳ ದುರುಪಯೋಗ ಹಿನ್ನೆಲೆ ರಾಜ್ಯ ಸರ್ಕಾರ ಗ್ಯಾರಂಟಿ ಸರ್ಜರಿಗೆ ಮುಂದಾಗಿದೆ. ಈ ಹಿನ್ನೆಲೆ ಸಿಎಂ ಡಿಕೆ ಶಿವಕುಮಾರ್​ ಇಂದು ಮಹತ್ವದ ಸಭೆ ನಡೆಸಿದ್ದಾರೆ. ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಭಾಗಿಯಾಗಿದ್ದ ಸಿಎಂ ಡಿಕೆ ಶಿವಕುಮಾರ್​​ ಕೆಲ ಸೂಚನೆಗಳನ್ನು ನೀಡಿದ್ದಾರೆ.

ಹಲವು ಫಲಾನುಭವಿಗಳು ಬ್ಯಾಂಕ್‌ ಸಾಲ ಪಡೆದಿರುತ್ತಾರೆ. ಸಾಲದ ಖಾತೆಗೆ ಗೃಹಲಕ್ಷ್ಮಿ ಹಣ ಹೋದ ತಕ್ಷಣ ಆ ಹಣ ಸಾಲದ ಮೊತ್ತಕ್ಕೆ ಜಮೆ ಆಗಿಬಿಡುತ್ತದೆ. ಆದ್ದರಿಂದ ಅಂತಹ ಫಲಾನುಭವಿಗಳು ಖಾತೆ ಬದಲಾಯಿಸಿರುತ್ತಾರೆ. ಇಂಥಾ ಫಲಾನುಭವಿಗಳಿಗೆ ತೊಂದರೆ ಆಗಬಾರದು. ನಮ್ಮ ರಾಜ್ಯದ ಯೋಜನೆಗಳು ನಮ್ಮ ರಾಜ್ಯದ ಫಲಾನುಭವಿಗಳಿಗೆ ಮಾತ್ರ ಸಿಗಬೇಕು. ಇತರೆ ರಾಜ್ಯದ ಮತದಾರರಿಗೆ ಯೋಜನೆಯ ಲಾಭ ಆಗುತ್ತಿದೆ. ಇದನ್ನು ತಡೆಯಬೇಕು ಎಂದು ಹೇಳಿದರು.

Free Bus ವೋಟರ್ ಐಡಿ ಇರುವ ಮಹಿಳೆಯರಿಗೆ ಮಾತ್ರ ಇನ್ನು ಉಚಿತ ಬಸ್ ಪ್ರಯಾಣ ಅವಕಾಶ

TAGGED:Beware if you lie and get a guarantee! They come door to door!
Share This Article
Facebook Twitter Copy Link Print
Previous Article Free Bus ವೋಟರ್ ಐಡಿ ಇರುವ ಮಹಿಳೆಯರಿಗೆ ಮಾತ್ರ ಇನ್ನು ಉಚಿತ ಬಸ್ ಪ್ರಯಾಣ ಅವಕಾಶ
Next Article ಮನೆಯ ಈ ದಿಕ್ಕಿನಲ್ಲಿ ಗಡಿಯಾರ ಇಟ್ಟರೆ ಸಂಕಷ್ಟ ತಪ್ಪಿದ್ದಲ್ಲ

Popular Posts

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read

You Might Also Like

ಕರ್ನಾಟಕಪ್ರಮುಖ

Free Bus ವೋಟರ್ ಐಡಿ ಇರುವ ಮಹಿಳೆಯರಿಗೆ ಮಾತ್ರ ಇನ್ನು ಉಚಿತ ಬಸ್ ಪ್ರಯಾಣ ಅವಕಾಶ

2 Min Read
ಕರ್ನಾಟಕಪ್ರಮುಖಮನರಂಜನೆ

BBK 13 ಬಿಗ್ ಬಾಸ್ ಕನ್ನಡ 13; ವೀಕ್ಷಕರ ಬಯಕೆಯ ಸ್ಪರ್ಧಿಗಳ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

2 Min Read
ಪ್ರಮುಖಮನರಂಜನೆ

ಕೊಡಗಿನಲ್ಲಿರುವ ರಶ್ಮಿಕಾ ಕನಸಿನ ಮನೆ ಒಳಗೆ ಹೇಗಿದೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rukmini Vasanth ನಟಿ ರುಕ್ಮಿಣಿ ವಸಂತ್ ಎಐ ಬಿಕಿನಿ ಫೋಟೋ ಸೃಷ್ಟಿ: ಮೂವರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?