newsics.com
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ದ್ವಿಪಕ್ಷೀಯ ಬಾಂಧವ್ಯ ಹಾಗೂ ತಮ್ಮ ಇತ್ತೀಚಿನ ಉಕ್ರೇನ್ ಭೇಟಿಯ ಬಗ್ಗೆ ಚರ್ಚಿಸಿದ್ದಾರೆ. ಈ ಬಗ್ಗೆ ನರೇಂದ್ರ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ನಿನ್ನೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಜೊತೆಗೂ ತಮ್ಮ ಉಕ್ರೇನ್ ಪ್ರವಾಸದ ಬಗ್ಗೆ ಮೋದಿ ಫೋನ್ ನಲ್ಲಿ ಚರ್ಚಿಸಿದ್ದರು.

ರಷ್ಯಾ ಅಧ್ಯಕ್ಷ ಪುಟಿನ್ ಅವರೊಂದಿಗೆ ಇಂದು ಮಾತನಾಡಿದೆ. ಈ ವೇಳೆ ವಿಶೇಷವಾದ ಕಾರ್ಯತಂತ್ರದ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುವ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ. ರಷ್ಯಾ-ಉಕ್ರೇನ್ ಸಂಘರ್ಷದ ದೃಷ್ಟಿಕೋನಗಳು ಮತ್ತು ಇತ್ತೀಚಿನ ಉಕ್ರೇನ್ ಭೇಟಿಯ ಬಗ್ಗೆ ನನ್ನ ಒಳನೋಟಗಳನ್ನು ವಿನಿಮಯ ಮಾಡಿಕೊಂಡೆ” ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.