Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ
ಪ್ರಮುಖಪ್ರಮುಖ

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

Share
2 Min Read
SHARE

newsics.com/ನ್ಯೂಸಿಕ್ಸ್

ಮಹಿಳೆಯೊಬ್ಬರ ಮೇಲೆ ಐವರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ ಭೀಕರ ಘಟನೆ ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ನಡೆದಿದೆ. ಜೂನ್ 11 ರಂದು ಚಾಕಿಯಾ ಪೊಲೀಸ್ ಠಾಣೆ ಬಳಿ ರಾತ್ರಿಯಲ್ಲಿ ಬಯಲು ಶೌಚಕ್ಕೆ ಮಹಿಳೆ ಹೊರಗೆ ಬಂದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಯೊಬ್ಬರು, ‘ಐವರು ಆರೋಪಿಗಳು ಆಕೆಯನ್ನು ಬಲವಂತವಾಗಿ ಏಕಾಂತ ಸ್ಥಳಕ್ಕೆ ಎಳೆದುಕೊಂಡು ಹೋಗಿ, ಆಕೆಯ ಕೈಕಾಲುಗಳನ್ನು ಬಟ್ಟೆಗಳಿಂದ ಕಟ್ಟಿ, ಸರದಿಯಲ್ಲಿ ಅತ್ಯಾಚಾರ ಎಸಗಿದ್ದಾರೆ. ಆಕೆ ವಿರೋಧಿಸಿದಾಗ, ಹರಿತವಾದ ವಸ್ತುವಿನಿಂದ ಪದೇ ಪದೇ ಹೊಡೆದಿದ್ದಾರೆ’ ಎಂದು ಮಹಿಳೆಯ ದೂರನ್ನು ಉಲ್ಲೇಖಿಸಿ ತಿಳಿಸಿದ್ದಾರೆ.

ಪೊಲೀಸರು ಮತ್ತು ಆಸ್ಪತ್ರೆ ವರದಿಗಳ ಪ್ರಕಾರ, ದಾಳಿಕೋರರು ಅತ್ಯಾಚಾರ ಎಸಗಿದ ಬಳಿಕವೂ ವಿಕೃತಿ ಮರೆದಿದ್ದು, ಆಕೆ ಪ್ರಜ್ಞೆ ತಪ್ಪಿ ಬಿದ್ದ ನಂತರ ಆಕೆಯ ಖಾಸಗಿ ಭಾಗಗಳಿಗೆ ಕಾರ್ಟ್ರಿಡ್ಜ್, ಮರದ ತುಂಡು ಮತ್ತು ಬೆಣಚುಕಲ್ಲುಗಳನ್ನು ತುಂಬಿರುವ ಅಮಾನವೀಯ ಕೃತ್ಯ ಎಸಗಿದ್ದಾರೆ.

ಸಂತ್ರಸ್ತೆಯನ್ನು ಆರಂಭದಲ್ಲಿ ಆಸ್ಪತ್ರೆಗೆ ದಾಖಲಿಸಿ ಜೂನ್ 12 ರಂದು ಬಿಡುಗಡೆ ಮಾಡಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಆಕೆಯ ಸ್ಥಿತಿ ಹದಗೆಟ್ಟ ಕಾರಣ ಮತ್ತೆ ಆಸ್ಪತ್ರೆಗೆ ದಾಖಲಿಸಬೇಕಾಯಿತು. ‘ಅಲ್ಟ್ರಾಸೌಂಡ್ ಸ್ಕ್ಯಾನ್ ಸಮಯದಲ್ಲಿ ವೈದ್ಯರು ಆಕೆಯ ಖಾಸಗಿ ಭಾಗದಲ್ಲಿ ಅನೇಕ ವಸ್ತುಗಳನ್ನು ಕಂಡುಕೊಂಡರು. ಅದು ಅವಳಿಗೆ ತೀವ್ರ ನೋವನ್ನುಂಟು ಮಾಡುತ್ತಿತ್ತು ಮತ್ತು ಅದು ಸೋಂಕನ್ನು ಉಂಟುಮಾಡುವ ಸಾಮರ್ಥ್ಯವನ್ನು ಹೊಂದಿತ್ತು’ ಎಂದು ಅವರು ಹೇಳಿದರು.

ಈತನ್ಮಧ್ಯೆ, ಮಹಿಳೆಯ ಕುಟುಂಬವು ಸ್ಥಳೀಯ ಪೊಲೀಸರ ನಿರ್ಲಕ್ಷ್ಯದ ಬಗ್ಗೆ ಗಂಭೀರ ಆರೋಪ ಮಾಡಿದೆ. ಮೂರು ತಿಂಗಳ ಹಿಂದೆ ನಡೆದ ಅತ್ಯಾಚಾರ ಯತ್ನದ ಬಗ್ಗೆ ದೂರು ನೀಡಿದರೂ ಅವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಘಟನೆಯ ಬಗ್ಗೆ ಪೊಲೀಸರು ವಿಧಿವಿಜ್ಞಾನ ತನಿಖೆ ಆರಂಭಿಸಿದ್ದು, ಶಂಕಿತರನ್ನು ಬಂಧಿಸಲು ವಿವಿಧ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಆನಂದ್ ಕುಮಾರ್ ಪಾಂಡೆ ತ್ವರಿತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ನಿರ್ಲಕ್ಷ್ಯದ ಆರೋಪಗಳ ಬಗ್ಗೆ, ಯಾವುದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆಂದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

‘ಈ ಪ್ರಕರಣವು ಮಹಿಳೆಯರ ಸುರಕ್ಷತೆ ಮತ್ತು ಪೊಲೀಸರ ಸೂಕ್ಷ್ಮತೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ’ ಎಂದು ಪಾಂಡೆ ಹೇಳಿದರು, ಸಾರ್ವಜನಿಕರು ಸಹಕರಿಸಬೇಕೆಂದು ಒತ್ತಾಯಿಸಿದರು. ತನಿಖೆ ಮುಂದುವರೆದಂತೆ ಸಂತ್ರಸ್ತೆ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

TAGGED:mutilated with a piece of wood stuffed into her private partsWoman gang-raped by five
Share This Article
Facebook Twitter Copy Link Print
Previous Article ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?
Next Article ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

Popular Posts

Father’s Day 2026: ತಮ್ಮ ತಂದೆಯ ಹೆಜ್ಜೆಗುರುತುಗಳಲ್ಲಿ ಸಾಗುತ್ತಿರುವ ದಕ್ಷಿಣ ಭಾರತದ 7 ಸ್ಟಾರ್ ನಟರು

2 Min Read

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್‌, 15,000 ಅರೆಸೈನಿಕ ಸಿಬ್ಬಂದಿಯಿಂದ ಭದ್ರತೆ

1 Min Read

ಕುಂಭಮೇಳದಲ್ಲಿ ವೈರಲ್ ಆಗಿದ್ದ ಯುವತಿಗೆ ಕೇರಳ ಹೈಕೋರ್ಟ್ ರಕ್ಷಣೆ; ಪತಿಯ ವಿರುದ್ಧದ ಅಪಹರಣ ಪ್ರಕರಣದ ನಡುವೆಯೇ ಮಹತ್ವದ ಆದೇಶ

2 Min Read

ಐಟಿ ಷೇರುಗಳಲ್ಲಿ ಭಾರಿ ಕುಸಿತ: ಕೆಲವೇ ನಿಮಿಷಗಳಲ್ಲಿ ಹೂಡಿಕೆದಾರರಿಗೆ ₹2 ಲಕ್ಷ ಕೋಟಿ ನಷ್ಟ!

1 Min Read

You Might Also Like

ಪ್ರಮುಖಮನರಂಜನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್

2 Min Read
ಕರ್ನಾಟಕಪ್ರಮುಖ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read
ಪ್ರಮುಖಕರ್ನಾಟಕಮನರಂಜನೆ

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read
ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?