newsics.com/ನ್ಯೂಸಿಕ್ಸ್
ಕೆಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಏರಿಕೆ ಕುರಿತಂತೆ ಸಿಎಂ ಡಿಕೆ ಶಿವಕುಮಾರ್ ಸಮರ್ಥನೆ ನೀಡಿದ್ದು , ರಾಜ್ಯದ ಜನರ ಹಿತಕ್ಕಾಗಿ ಎಂದಿದ್ದಾರೆ. ಕೆಎಸ್‌ಆರ್ ಟಿಸಿ ಸೇರಿದಂತೆ ಎಲ್ಲಾ ಸಾರಿಗೆ ನಿಗಮಗಳು ಬಸ್ ಪ್ರಯಾಣ ದರ ಏರಿಕೆ ಮಾಡಲು ಮನವಿ ಸಲ್ಲಿಸಿವೆ.
ಇದಕ್ಕೆ ಸಿಎಂ ಡಿಕೆ ಶಿವಕುಮಾರ್ ಕೂಡಾ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು ಬಸ್ ದರ ಪ್ರಯಾಣ ದರ ಏರಿಕೆಯಾಗುವುದು ಖಚಿತವಾಗಿದೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು ‘ಡೀಸೆಲ್ ಬೆಲೆ ತುಂಬಾ ಹೆಚ್ಚಳವಾಗಿದೆ. ಡೀಸೆಲ್ ದರ ನೋಡಿದರೆ ಗಾಬರಿಯಾಗುತ್ತದೆ. ಡಿಪೋದ ಬೆಲೆಗೂ ಖಾಸಗಿಯಾಗಿ ಸಿಗುವ ಡೀಸೆಲ್ ದರಕ್ಕೂ ತುಂಬಾ ವ್ಯತ್ಯಾಸವಿದೆ. ಸದ್ಯಕ್ಕೆ ಕೆಎಸ್‌ಆರ್ ಟಿಸಿಯನ್ನೂ ಉಳಿಸಬೇಕು. ಜನರಿಗೂ ಹೊರೆಯಾಗಬಾರದು. ರಾಜ್ಯದ ಹಿತಕ್ಕಾಗಿ ನಾವು ಈ ಕ್ರಮ ಕೈಗೊಳ್ಳಬೇಕಾಗುತ್ತಿದೆ’ ಎಂದು ಸಮರ್ಥನೆ ನೀಡಿದ್ದಾರೆ.
ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಆದಷ್ಟು ಬೇಗ ಬಸ್ ಪ್ರಯಾಣ ದರ ಏರಿಕೆ ಕುರಿತು ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಹೇಳಿದ್ದಾರೆ. ಹೀಗಾಗಿ ಸದ್ಯದಲ್ಲೇ ಜನರಿಗೆ ಬಸ್ ದರ ಏರಿಕೆ ಬರೆ ಗ್ಯಾರಂಟಿಯಾಗಿದೆ.