Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕತಾರ್ ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ : 54 ಜನರಿಗೆ ಗಾಯ, 18 ಮಂದಿ ನಾಪತ್ತೆ
ಪ್ರಮುಖವಿದೇಶ

ಕತಾರ್ ಅನಿಲ ಸ್ಥಾವರದಲ್ಲಿ ಭಾರಿ ಸ್ಫೋಟ : 54 ಜನರಿಗೆ ಗಾಯ, 18 ಮಂದಿ ನಾಪತ್ತೆ

Share
1 Min Read
SHARE

ವಿಶ್ವದ ಪ್ರಮುಖ ನೈಸರ್ಗಿಕ ಅನಿಲ ರಫ್ತು ರಾಷ್ಟ್ರವಾದ ಕತಾರ್‌ನ ರಾಸ್ ಲಫಾನ್ ಕೈಗಾರಿಕಾ ನಗರದಲ್ಲಿರುವ ಬರ್ಜಾನ್ ಅನಿಲ ಸ್ಥಾವರ(Gas Plant)ದಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಸ್ಥಾವರದಲ್ಲಿ ಹೊಸ ಕಾರ್ಯಾಚರಣೆ ಆರಂಭವಾಗುವ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ಕನಿಷ್ಠ 54 ಜನರು ಗಾಯಗೊಂಡಿದ್ದಾರೆ ಹಾಗೂ 18 ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಘಟನೆ ನಡೆದ ತಕ್ಷಣವೇ ಉನ್ನತ ಮಟ್ಟದ ತುರ್ತು ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ಸದ್ಯ ಬೆಂಕಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿವೆ. ದೇಶದ ಇಂಧನ ಅಗತ್ಯಗಳನ್ನು ಪೂರೈಸುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುವ ಬರ್ಜಾನ್ ಕಾರ್ಖಾನೆಯಲ್ಲಿ ಕೆಲಸ ಆರಂಭವಾಗುತ್ತಿದ್ದಂತೆಯೇ ಈ ಸ್ಫೋಟ ಸಂಭವಿಸಿದೆ ಎಂದು ಸರ್ಕಾರಿ ಸ್ವಾಮ್ಯದ ‘ಕತಾರ್ ಎನರ್ಜಿ’ ಸಂಸ್ಥೆ ಅಧಿಕೃತವಾಗಿ ದೃಢಪಡಿಸಿದೆ.

ಸ್ಫೋಟದ ತೀವ್ರತೆಗೆ ಸಿಲುಕಿ ನಾಪತ್ತೆಯಾಗಿರುವ 18 ಜನರಿಗಾಗಿ ಅವಶೇಷಗಳ ನಡುವೆ ತೀವ್ರ ಹುಡುಕಾಟ ಮುಂದುವರೆದಿದೆ. ಸ್ಫೋಟಕ್ಕೆ ನಿಖರವಾದ ಕಾರಣವೇನೆಂಬುದನ್ನು ಅಧಿಕಾರಿಗಳು ಇನ್ನೂ ಬಹಿರಂಗಪಡಿಸಿಲ್ಲ. ತಾಂತ್ರಿಕ ದೋಷವೇ ಅಥವಾ ಬೇರೆನಾದರೂ ಕಾರಣವಿದೆಯೇ ಎಂಬ ಕುರಿತು ಉನ್ನತ ಮಟ್ಟದ ತನಿಖೆ ಆರಂಭವಾಗಿದೆ.

ಜಾಗತಿಕ ಇಂಧನ ಮಾರುಕಟ್ಟೆಗೆ ಹೊಸ ಆತಂಕ?
ಪೆಟ್ರೋಲ್, ಗ್ಯಾಸ್ ಬೆಲೆ ಏರಿಕೆ ಭೀತಿ: ಹಾರ್ಮುಜ್ ಜಲಸಂಧಿಯ ರಾಜತಾಂತ್ರಿಕ ಬಿಕ್ಕಟ್ಟಿನಿಂದಾಗಿ ಇತ್ತೀಚೆಗಷ್ಟೇ ಕತಾರ್ ತನ್ನ ಗ್ಯಾಸ್ ಉತ್ಪಾದನೆಯನ್ನು ಕಡಿತಗೊಳಿಸಿತ್ತು. ಈಗ ಪರಿಸ್ಥಿತಿ ತಿಳಿಯಾಗಿ ಮರಳಿ ಸಹಜ ಸ್ಥಿತಿಗೆ ಬರುತ್ತಿರುವಾಗಲೇ ಈ ದುರಂತ ಸಂಭವಿಸಿದೆ. ವಿಶ್ವದ ಅತಿ ದೊಡ್ಡ ಅನಿಲ ಪೂರೈಕೆದಾರ ರಾಷ್ಟ್ರವಾಗಿರುವ ಕತಾರ್‌ನ ಈ ಪ್ರಮುಖ ಸ್ಥಾವರ ದೀರ್ಘಕಾಲದವರೆಗೆ ಬಂದ್ ಆದರೆ, ಜಾಗತಿಕವಾಗಿ ಇಂಧನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಗ್ಯಾಸ್ ಮತ್ತು ತೈಲ ಬೆಲೆಗಳು ಮತ್ತಷ್ಟು ಹೆಚ್ಚಾಗಬಹುದು ಎಂದು ಆರ್ಥಿಕ ವಿಶ್ಲೇಷಕರು ಕಳವಳ ವ್ಯಕ್ತಪಡಿಸಿದ್ದಾರೆ.

ಯುಕೆ ಪ್ರಧಾನಿ ಕೀರ್ ಶೀಘ್ರ ರಾಜೀನಾಮೆ ನೀಡಲಿದ್ದಾರೆ: ಭವಿಷ್ಯ ನುಡಿದ ಟ್ರಂಪ್

TAGGED:18 missingMassive explosion at Qatar gas plant: 54 injured
Share This Article
Facebook Twitter Copy Link Print
Previous Article ಯುಕೆ ಪ್ರಧಾನಿ ಕೀರ್ ಶೀಘ್ರ ರಾಜೀನಾಮೆ ನೀಡಲಿದ್ದಾರೆ: ಭವಿಷ್ಯ ನುಡಿದ ಟ್ರಂಪ್
Next Article HEALTH ಇಮ್ಯುನಿಟಿ ಹೆಚ್ಚಿಸಿಕೊಳ್ಳೋದು ಹೇಗೆ? ಹೀಗೆ ಮಾಡಿ ನೋಡಿ

Popular Posts

ವಿಧಾನಪರಿಷತ್‌ನಲ್ಲಿ ಅಡ್ಡಮತದಾನದ ಪರಿಣಾಮ: ಇನ್ನೊಂದು ಅವಧಿಗೆ ನಾನೇ ರಾಜ್ಯಾಧ್ಯಕ್ಷ ಎಂದುಕೊಂಡಿದ್ದ ವಿಜಯೇಂದ್ರಗೆ ಸಂಕಷ್ಟ

5 Min Read

Lifestyle 2 ನಿಮಿಷದಲ್ಲಿ ಮಾಡಿ ಈ ರೀತಿ ಕರ್ಲಿ ಹೇರ್‌ಸ್ಟೈಲ್

2 Min Read

Lifestyle ಬೆಳಗ್ಗೆ ಎದ್ದಾಕ್ಷಣ ಮೊಬೈಲ್ ನೋಡಿದ್ರೆ ಏನಾಗುತ್ತೆ?

2 Min Read

HEALTH ಇಮ್ಯುನಿಟಿ ಹೆಚ್ಚಿಸಿಕೊಳ್ಳೋದು ಹೇಗೆ? ಹೀಗೆ ಮಾಡಿ ನೋಡಿ

2 Min Read

You Might Also Like

ವಿದೇಶಪ್ರಮುಖ

ಯುಕೆ ಪ್ರಧಾನಿ ಕೀರ್ ಶೀಘ್ರ ರಾಜೀನಾಮೆ ನೀಡಲಿದ್ದಾರೆ: ಭವಿಷ್ಯ ನುಡಿದ ಟ್ರಂಪ್

1 Min Read
ಪ್ರಮುಖಮನರಂಜನೆ

ಭಾರತಕ್ಕೊಂದು, ವಿದೇಶಕ್ಕೊಂದು; ಎರಡು ಬೇರೆ ಬೇರೆ ಪ್ರಿಂಟ್​​ಗಳಲ್ಲಿ ‘ಟಾಕ್ಸಿಕ್’ ತೆರೆಗೆ?

2 Min Read
ಪ್ರಮುಖ

ಇಲ್ಲಿ ಗಂಡನ ಭಾಷೆಯೇ ಬೇರೆ, ಹೆಂಡತಿಯ ಭಾಷೆಯೇ ಬೇರೆ! ಆದ್ರೂ ಒಬ್ಬರಿಗೊಬ್ಬರ ಮಾತು ಅರ್ಥವಾಗುತ್ತೆ!

2 Min Read
ಕರ್ನಾಟಕಪ್ರಮುಖ

ಕರ್ನಾಟಕದಲ್ಲಿ ಮುಂಗಾರು ಚುರುಕು: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?