newsics.com
ಬೆಂಗಳೂರು: ಮಾನಹಾನಿಕರ ಹೇಳಿಕೆ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ವಕೀಲ ಜಗದೀಶ್ ಮಹದೇವ್ ವಿರುದ್ದವೂ ನಿರ್ಬಂಧಕಾಜ್ಞೆ ಕೋರಿದ್ದು, ಈ ಸಂಬಂಧ ಕೋರ್ಟ್, ನಾಳೆ(ಆಗಸ್ಟ್ 28) ಆದೇಶ ಪ್ರಕಟಿಸಲಿದೆ. ಆದ್ರೆ, ಬಸವರಾಜ ಬೊಮ್ಮಾಯಿ ಅವರು ಏಕೆ ನಿರ್ಬಂಧಕಾಜ್ಞೆ ತರಲು ಹೊರಟ್ಟಿದ್ದಾರೆ ಎನ್ನುವುದು ಅಚ್ಚರಿ ಮೂಡಿಸಿದೆ.
ಸಿಎಂ ವಿರುದ್ಧ ಮುಡಾ ಹಗರಣ ಆರೋಪದ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ವಿಪಕ್ಷ ನಾಯಕರುಗಳ ಹಳೇ ಕೇಸ್ಗಳನ್ನು ರೀಓಪನ್ ಮಾಡುತ್ತಿದೆ. ಅಲ್ಲದೇ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣ ಬಗ್ಗೆ ಗಂಭೀರವಾಗಿ ತನಿಖೆ ನಡೆಸಲು ಮುಂದಾಗಿದೆ. ಇದೆಲ್ಲದರ ಮಧ್ಯ ಬಸವರಾಜ ಬೊಮ್ಮಾಯಿ ಕೋರ್ಟ್ ಮೊರೆ ಹೋಗಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.
ಅಲ್ಲದೆ ಬೊಮ್ಮಾಯಿ ವಿರುದ್ಧ ಏನಾದರೂ ಆರೋಪಗಳು ಇದ್ದಾವೆಯೇ? ಯಾರಾದರೂ ಅವುಗಳನ್ನು ಬಹಿರಂಗಪಡಿಸಲು ಮುಂದಾಗಿದ್ದಾರಾ? ಹೀಗೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ