Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಯಾವ ಸಮಯದಲ್ಲಿ ಕಾಫಿ ಕುಡಿಯುವುದು ಉತ್ತಮ?
ಲೈಫ್‌ಸ್ಟೈಲ್

ಯಾವ ಸಮಯದಲ್ಲಿ ಕಾಫಿ ಕುಡಿಯುವುದು ಉತ್ತಮ?

Share
2 Min Read
SHARE

newsics.com/ನ್ಯೂಸಿಕ್ಸ್

ಕಾಫಿಯ ಮಿತವಾದ ಸೇವನೆ ಆರೋಗ್ಯಕ್ಕೆ ಒಳ್ಳೆಯದು, ಆದರೆ ಆದರೆ ಕಾಫಿ ಕುಡಿಯಲು ಸಮಯದ ಮಿತಿಯೂ ಇದೆ, ಹೊತ್ತಲ್ಲದ ಹೊತ್ತಲ್ಲಿ ಕಾಫಿ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರಕವಂತೆ. ಹಾಗಿದ್ದರೆ ಯಾವ ಸಮಯದಲ್ಲಿ ಕಾಫಿ ಕುಡಿದರೆ ಒಳ್ಳೆಯದು ಎಂಬುದನ್ನು ನೋಡೋಣ ಬನ್ನಿ.


ಕಾಫಿ ಕುಡಿಯಲು ಸರಿಯಾದ ಸಮಯ ಯಾವುದು?

ಕಾಫಿ ಕುಡಿಯಲು ಉತ್ತಮ ಸಮಯ ಬೆಳಿಗ್ಗೆ 9:30 ರಿಂದ 11:30 ರ ನಡುವೆ. ಈ ಸಮಯದಲ್ಲಿ ದೇಹದ ಕಾರ್ಟಿಸೋಲ್ ಮಟ್ಟಗಳು ಕಡಿಮೆಯಾಗಿರುತ್ತವೆ. ಕಾರ್ಟಿಸೋಲ್ ಅನ್ನು ಒತ್ತಡದ ಹಾರ್ಮೋನ್ ಎಂದು ಕರೆಯಲಾಗುತ್ತದೆ. ಕಾರ್ಟಿಸೋಲ್ ಮಟ್ಟಗಳು ಕಡಿಮೆಯಾದಾಗ, ಕಾಫಿ ಕುಡಿಯುವುದು ಹೆಚ್ಚು ಪ್ರಯೋಜನಕಾರಿ. ಇದು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ ಮತ್ತು ಮೆದುಳನ್ನು ಚುರುಕುಗೊಳಿಸುತ್ತದೆ. ಒತ್ತಡದಲ್ಲಿದ್ದಾಗ ಕಾಫಿ ಕುಡಿದರೆ ಕಾರ್ಟಿಸೋಲ್‌ ಮಟ್ಟ ಇನ್ನಷ್ಟು ಹೆಚ್ಚಾಗುತ್ತದೆ. ಮಧ್ಯಾಹ್ನ 2 ರಿಂದ 4 ಗಂಟೆಯ ನಡುವೆ ಕಾಫಿ ಕುಡಿಯುವುದು ಒಳ್ಳೆಯದು. ಇದು ಆಲಸ್ಯವನ್ನು ಕಡಿಮೆ ಮಾಡಲು ಹಾಗೂ ಶಕ್ತಿಯನ್ನು ಹೆಚ್ಚಿಸಲು ಸಹಕಾರಿ.

ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯಬೇಡಿ: ಅನೇಕ ಜನರು ಬೆಳಗ್ಗೆ ಎದ್ದ ತಕ್ಷಣ ಕಾಫಿ ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಇದು ದೇಹದಲ್ಲಿ ಹಾರ್ಮೋನ್ ಕಾರ್ಟಿಸೋಲ್ ಮಟ್ಟವನ್ನು ಹೆಚ್ಚಿಸುತ್ತದೆ, ಇದು ನಿಮ್ಮ ರೋಗನಿರೋಧಕ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯುವುದರಿಂದ ಆಮ್ಲೀಯತೆ, ಆಮ್ಲತೆ, ಮಲಬದ್ಧತೆ ಮತ್ತು ಇತರ ಹೊಟ್ಟೆ ಸಂಬಂಧಿತ ಸಮಸ್ಯೆಗಳಿಗೆ ಕಾರಣವಾಗಬಹುದು.

ಸಂಜೆ ತಡವಾಗಿ ಕಾಫಿ ಕುಡಿಯುವುದು ಒಳ್ಳೆಯದಲ್ಲ: ಸಂಜೆ 4 ಗಂಟೆಯ ನಂತರ ಕಾಫಿ ಕುಡಿಯುವುದು ಅಷ್ಟು ಒಳ್ಳೆಯದಲ್ಲ. ಏಕೆಂದರೆ ಕಾಫಿಯಲ್ಲಿರುವ ಕೆಫೀನ್‌ ಅಂಶ ದೇಹದಲ್ಲಿ 6 ರಿಂದ 8 ಗಂಟೆಗಳ ಕಾಲ ಇರುವುದರಿಂದ ಇದು ನಿದ್ರೆಗೆ ಅಡ್ಡಿಪಡಿಸಬಹುದು. ಅಲ್ಲದೆ ಸಂಜೆ ತಡವಾಗಿ ಕಾಫಿ ಕುಡಿಯುವುದರಿಂದ ನಿಮ್ಮ ಹಸಿವು ಕಡಿಮೆಯಾಗುತ್ತದೆ.

ಹಿತಮಿತ ಕಾಫಿ ಸೇವನೆಯ ಪ್ರಯೋಜನಗಳೇನು?

ಕಾಫಿಯಲ್ಲಿರುವ ಕೆಫೀನ್ ಮೆದುಳನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ, ಆಯಾಸ ಕಡಿಮೆ ಮಾಡುತ್ತದೆ. ಕೆಫೀನ್ ಮನಸ್ಥಿತಿಯನ್ನು ಸುಧಾರಿಸುತ್ತದೆ.
ಮಿತವಾದ ಕಾಫಿ ಸೇವನೆ ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
ಕಾಫಿ ಕುಡಿಯುವುದರಿಂದ ಅಲ್ಝೈಮರ್‌ ಕಾಯಿಲೆಯನ್ನು ಶೇ 65ರಷ್ಟು ಕಡಿಮೆ ಮಾಡಬಹುದು ಎಂದು ಅಧ್ಯಯನಗಳು ಹೇಳಿವೆ.
ಕಾಫಿಯಲ್ಲಿ ಪ್ರಬಲ ಆಂಟಿಆಕ್ಸಿಡೆಂಟ್‌ ಅಂಶಗಳಿದ್ದು, ಇದು ದೇಹದಲ್ಲಿ ಕ್ಯಾನ್ಸರ್‌ ಜೀವಕೋಶಗಳು ಬೆಳವಣಿಗೆ ಆಗದಂತೆ ತಡೆಯುತ್ತದೆ ಎಂದು ಹೇಳಲಾಗುತ್ತದೆ.
ದೇಹಕ್ಕೆ ತ್ವರಿತ ಶಕ್ತಿಯನ್ನು ಒದಗಿಸುತ್ತದೆ.
ಮನಸ್ಥಿತಿಯನ್ನು ಸುಧಾರಿಸುತ್ತದೆ.
ಖಿನ್ನತೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಮಿತವಾದ ಕಾಫಿ ಸೇವನೆ ತೂಕ ನಿಯಂತ್ರಣಕ್ಕೆ ಸಹಕಾರಿ.
ಇದು ಟೈಪ್-2‌ ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತಂತೆ.

ವಾಟ್ಸ್ಯಾಪ್ ಮುಖ್ಯಸ್ಥರಾಗಿ ಭಾರತದ ಕ್ರೆಡ್ ಸಂಸ್ಥಾಪಕ ಕುನಾಲ್ ಶಾ ನೇಮಕ: 8550 ಕೋಟಿ ರೂ. ಹೂಡಿಕೆ

 

TAGGED:When is the best time to drink coffee? What are its benefits?
Share This Article
Facebook Twitter Copy Link Print
Previous Article Pak knocked out ಸೆಲಬ್ರೇಷನ್ ಅಭ್ಯಾಸ ಮಾಡಿದ್ದ ಪಾಕ್ ಟೀಂ ಟಿ20 ವಿಶ್ವಕಪ್‌ನಿಂದಲೇ ಔಟ್! ಫುಲ್ ಟ್ರೋಲ್, ವಿಡಿಯೋ ನೋಡಿ
Next Article ಶ್ರಮವಿಲ್ಲದೆ ತಿಂಗಳಿಗೆ 20 ಲಕ್ಷ ಗಳಿಸುತ್ತಿರುವ ನಿರೂಪಕಿ: ಖ್ಯಾತ ಆ್ಯಂಕರ್‌ಗಳಿಗೂ ಇದು ಸಾಧ್ಯವಿಲ್ಲ!

Popular Posts

Metro broke down… ಕೈಕೊಟ್ಟ ಮೆಟ್ರೋ ಎಫೆಕ್ಟ್: ನಮ್ಮೂರಲ್ಲಿ ಹಂಗೇನಿಲ್ಲ… ಬಸ್ಸು, ಲಾರಿ ಏನೇ ಬರ್ಲಿ ಹತ್ಕೊಂಡ್ ಹೋಯ್ತಾರೋ… ವಿಡಿಯೋ ನೋಡಿ

2 Min Read

Love that melted in fire ಪ್ರೀತಿ ಚಿಗುರೊಡೆದ ಕಟ್ಟಡದಲ್ಲೇ ಸುಟ್ಟು ಬೂದಿಯಾಯ್ತು… ಕಮರಿಹೋಯ್ತು ನೀಲೇಶ್- ಅನಾಮಿಕಾ ಬದುಕು

2 Min Read

Strict action against cross-voting ಅಡ್ಡಮತದಾನಕ್ಕೆ ಬಿಜೆಪಿ ವರಿಷ್ಠರು ಕೆಂಡಾಮಂಡಲ: ಪ್ರಶ್ನೆಗಳ ಸುರಿಮಳೆಗೆ ರಾಜ್ಯ ನಾಯಕರು ಕಂಗಾಲು

3 Min Read

ED Raid ಸಚಿವ ಸತೀಶ್ ಜಾರಕಿಹೊಳಿ ಬಾವನಿಗೆ ಇಡಿ ಶಾಕ್, ಆರು ಕಡೆ ದಾಳಿ

1 Min Read

You Might Also Like

ಪ್ರಮುಖಕರ್ನಾಟಕದೇಶಲೈಫ್‌ಸ್ಟೈಲ್

Health care ಅತಿಯಾದ ಮೊಬೈಲ್ ಬಳಕೆಯಿಂದ ಸಾವು ಸಾಧ್ಯತೆ, ತಜ್ಞರು ಹೇಳಿದ್ದೇನು?

2 Min Read
ಕರ್ನಾಟಕದೇಶಪ್ರಮುಖಲೈಫ್‌ಸ್ಟೈಲ್

New Trend ಸ್ಮಶಾನದಲ್ಲಿ ಡೇಟಿಂಗ್! ಯುವಜನರ ಹೊಸ ಟ್ರೆಂಡ್

2 Min Read
ಆರೋಗ್ಯಪ್ರಮುಖ

ಎಲ್ ನಿನೋ ಪರಿಣಾಮ ಎದುರಿಸಲು ಮೇಘಾಲಯ ಸಜ್ಜು; ನೀರಿನ ಭದ್ರತೆ, ಕೃಷಿಗೆ ಆದ್ಯತೆ

1 Min Read
ಲೈಫ್‌ಸ್ಟೈಲ್

 ದೆಹಲಿ ಬಿಸಿಲಿನ ಮಧ್ಯೆ ಎಸಿ ಕ್ಯಾಬ್‌ಗಳ ಸಂಕಷ್ಟ: ಪ್ರಯಾಣಿಕರು-ಚಾಲಕರ ನಡುವೆ ಹೆಚ್ಚಿದ ತಕರಾರು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?