newsics.com / ನ್ಯೂಸಿಕ್ಸ್
ಬೆಂಗಳೂರು ನಗರದ ಸೀಗೇಹಳ್ಳಿ ಪ್ರದೇಶದ ಅಪಾರ್ಟ್‌ಮೆಂಟ್‌ನಲ್ಲಿ ನಡೆದ ಭೀಕರ ಟ್ರಿಪಲ್ ಮರ್ಡರ್ ಪ್ರಕರಣಕ್ಕೆ ಕುಟುಂಬ ಕಲಹ ಹಾಗೂ ₹30 ಲಕ್ಷ ಸಾಲದ ವಿವಾದ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತರಾದ ಸೋಮಸುಂದರ್, ಅವರ ಪತ್ನಿ ಮುತ್ತುಲಕ್ಷ್ಮಿ ಹಾಗೂ ಪುತ್ರಿ ಸುಪ್ರಿಯಾ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.
ಪ್ರಕರಣದಲ್ಲಿ ಹಿರಿಯ ಪುತ್ರಿ ಶ್ವೇತಾ ಮತ್ತು ಆಕೆಯ ಲಿವ್-ಇನ್ ಸಂಗಾತಿ ಕೆನ್ನೆತ್ ಪ್ರಮುಖ ಆರೋಪಿಗಳೆಂದು ಗುರುತಿಸಲಾಗಿದ್ದು, ಇಬ್ಬರಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಕುಟುಂಬ ಸದಸ್ಯರು ಶ್ವೇತಾಳ ಸಂಬಂಧ ಮತ್ತು ಆರ್ಥಿಕ ವಿಚಾರಗಳ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿದ್ದುದೇ ಕಲಹಕ್ಕೆ ಕಾರಣ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಸೋಮಸುಂದರ್ ಆಸ್ಪತ್ರೆಯಲ್ಲಿ ಮೃತಪಟ್ಟ ಮೊದಲು ಪೊಲೀಸರಿಗೆ ಘಟನೆಯ ವಿವರ ನೀಡಿದ್ದು, ತನಿಖೆಗೆ ಮಹತ್ವದ ಸುಳಿವು ಸಿಕ್ಕಿದೆ. ಸಿಸಿಟಿವಿ ದೃಶ್ಯಗಳು ಹಾಗೂ ಇತರೆ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.
ವಾಟ್ಸ್ಯಾಪ್ ಮುಖ್ಯಸ್ಥರಾಗಿ ಭಾರತದ ಕ್ರೆಡ್ ಸಂಸ್ಥಾಪಕ ಕುನಾಲ್ ಶಾ ನೇಮಕ: 8550 ಕೋಟಿ ರೂ. ಹೂಡಿಕೆ