newsics.com
ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಪ್ರಮುಖ ಆರೋಪಿ ನಟ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ಸ್ಪೆಷಲ್ ಐಷಾರಾಮಿ ವ್ಯವಸ್ಥೆ ಕಲ್ಪಿಸಿರುವುದು ಸಾಬೀತಾಗುತ್ತಿದ್ದಂತೆ, ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ದರ್ಶನ್ ಅವರನ್ನು ಬುಧವಾರ (ಆ.28) ಬೆಳಗಿನ ಜಾವ ಶಿಫ್ಟ್ ಮಾಡುವುದು ಬಹುತೇಕ ಖಚಿತವಾಗಿದೆ.
ಶೌಚಾಲಯ ಹೊಂದಿದ ಪ್ರತ್ಯೇಕ ಕೋಣೆಯಲ್ಲಿ ಇರಿಸಲು ಸಿಬ್ಬಂದಿ ವ್ಯವಸ್ಥೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಕಾರಾಗೃಹ ಸುತ್ತಲೂ ಪೋಲೀಸ್ ಬಿಗಿ ಭದ್ರತೆ ಹೆಚ್ಚಿಸಲಾಗಿದೆ. ಎಸ್ಪಿ ವೃತ್ತದಿಂದ ಜೈಲಿಗೆ ತೆರಳುವ ರಸ್ತೆ, ಶ್ರೀ ಕನಕ ದುರ್ಗಮ್ಮ ದೇಗುಲದಿಂದ ತೆರಳುವ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಿ ಪೋಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ.
ದರ್ಶನ್ ಸೇರಿದಂತೆ ಅವರ ಗ್ಯಾಂಗ್ ನ
ನ್ಯಾಯಾಂಗ ಬಂಧನ ನಾಳೆಗೆ (ಆ.28) ಅಂತ್ಯ ವಾಗುತ್ತಿರುವ ಹಿನ್ನೆಲೆ ಜೈಲಿನಲ್ಲೇ ವಿಡಿಯೋ ಕಾನ್ಫೆರೆನ್ಸ್ ಮೂಲಕ ನ್ಯಾಯಾಧೀಶರ ಎದುರು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ. ಇದಕ್ಕೆ ಸಂಬಂಧಿಸಿದಂತೆ ಜೈಲು ಅಧಿಕಾರಿಗಳು ಎಲ್ಲ ರೀತಿಯ ವ್ಯವಸ್ಥೆ ಕೈಗೊಂಡಿದ್ದಾರೆ.
ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ ಮೆಟ್ಟಿಲೇರಿದ ಬೊಮ್ಮಾಯಿ