Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Ayodhye Ramamandir ರಾಮಮಂದಿರ ದೇಣಿಗೆ ಲೂಟಿ: ಪ್ರಧಾನ ಕಾರ್ಯದರ್ಶಿ ಚಂಪತ್‌ರಾಯ್, ಟ್ರಸ್ಟಿ ಮಿಶ್ರಾ ರಾಜೀನಾಮೆ
ದೇಶಪ್ರಮುಖ

Ayodhye Ramamandir ರಾಮಮಂದಿರ ದೇಣಿಗೆ ಲೂಟಿ: ಪ್ರಧಾನ ಕಾರ್ಯದರ್ಶಿ ಚಂಪತ್‌ರಾಯ್, ಟ್ರಸ್ಟಿ ಮಿಶ್ರಾ ರಾಜೀನಾಮೆ

Share
1 Min Read
SHARE

newsics.com| ನ್ಯೂಸಿಕ್ಸ್

ಅಯೋಧ್ಯೆ: ಅಯೋಧ್ಯೆಯ ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಗುರುವಾರ ಎಫ್‌ಐಆರ್ ದಾಖಲಿಸಿದ್ದು, ಇದರ ಬೆನ್ನಲ್ಲೇ ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರು ಶುಕ್ರವಾರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ.

ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ಸ್ವೀಕರಿಸಿದ ದೇಣಿಗೆಗಳ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಈಗ ಅಧಿಕೃತವಾಗಿ ಎಫ್ಐಆರ್ ದಾಖಲಿಸುವ ಮೂಲಕ ಆರೋಪಿಗಳನ್ನು ಹೆಸರಿಸಿದೆ.

ಉತ್ತರ ಪ್ರದೇಶ ಸರ್ಕಾರದ ನಿರ್ದೇಶನದ ಮೇರೆಗೆ ಭಾರತೀಯ ನ್ಯಾಯ ಸಂಹಿತಾ(ಬಿಎನ್‌ಎಸ್) ನ ಸೆಕ್ಷನ್ 306, 316(5), 317(4), 317(5), 61 ಮತ್ತು 3(5) ಸೇರಿದಂತೆ ಹಲವು ಸೆಕ್ಷನ್ ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅನುಕಲ್ಪ್ ಮಿಶ್ರಾ, ಲವ್‌ಕುಶ್ ಮಿಶ್ರಾ, ಅವಿನಾಶ್ ಶುಕ್ಲಾ, ಟಿನ್ನು ಯಾದವ್, ಮನೀಶ್ ಯಾದವ್ ಮತ್ತು ಇತರರು ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಅಯೋಧ್ಯೆಯ ಮಾಜಿ ಎಸ್‌ಪಿ ಶಾಸಕ ಪವನ್ ಪಾಂಡೆ ಅವರು ರಾಮ ಮಂದಿರದಲ್ಲಿ 7 ಕೋಟಿಯಿಂದ 7.5 ಕೋಟಿ ರೂ.ಗಳವರೆಗೆ ದೇಣಿಗೆ ದುರುಪಯೋಗವಾಗಿದೆ ಎಂದು ಆರೋಪಿಸಿದ ನಂತರ ಪ್ರಕರಣದ ತನಿಖೆಗೆ ಉತ್ತರ ಪ್ರದೇಶ ಸರ್ಕಾರ ಎಸ್ಐಟಿ ರಚನೆ ಮಾಡಿದೆ.

ಈ ಹಗರಣದ ಕುರಿತು ಸಾರ್ವಜನಿಕವಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸನಾತನ ಮೌಲ್ಯಗಳು ಮತ್ತು ಸಾರ್ವಜನಿಕರ ಶ್ರದ್ಧೆಯೊಂದಿಗೆ ಆಟವಾಡಲು ಯತ್ನಿಸುವವರ ವಿರುದ್ಧ ನಮ್ಮ ಸರ್ಕಾರ ಶೂನ್ಯ ಸಹಿಷ್ಣುತೆ (Zero-tolerance) ನೀತಿಯನ್ನು ಅಳವಡಿಸಿಕೊಂಡಿದೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ವಿಶೇಷ ತನಿಖಾ ತಂಡ (SIT) ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ತಕ್ಷಣವೇ ಸರ್ಕಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ ಎಂದು ಯೋಗಿ ಹೇಳಿದ್ದಾರೆ.

ಇಂದು ದೇವರಿಯಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಯೋಗಿ, ಅಯೋಧ್ಯೆಯ ಘನತೆಗೆ ಧಕ್ಕೆ ತರುವ ಯಾವುದೇ ವಿಷಯದಲ್ಲಿ ಸರ್ಕಾರ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪುನರುಚ್ಚರಿಸಿದರು.

 

Indian Citizen ಅಮೆರಿಕದ ಪೌರತ್ವ ತ್ಯಜಿಸಿ ಭಾರತಕ್ಕೆ ಮರಳಿದ 94ರ ವೃದ್ಧೆ

TAGGED:#ramamandir #ayodhye #resigned #champatharay#mishra #news#newsics
Share This Article
Facebook Twitter Copy Link Print
Previous Article Indian Citizen ಅಮೆರಿಕದ ಪೌರತ್ವ ತ್ಯಜಿಸಿ ಭಾರತಕ್ಕೆ ಮರಳಿದ 94ರ ವೃದ್ಧೆ
Next Article Cancer medicine ಭಾರತಕ್ಕೆ ಎಂಟ್ರಿ ಕೊಟ್ಟ ಅತ್ಯಾಧುನಿಕ ಕ್ಯಾನ್ಸರ್ ಔಷಧ

Popular Posts

Bomb blast ಕನಕಪುರ ಫಾರ್ಮ್‌ಹೌಸ್ ಬಳಿ ನಾಡಬಾಂಬ್ ಸ್ಫೋಟ: ವಕೀಲನಿಗೆ ಗಾಯ

1 Min Read

Cancer medicine ಭಾರತಕ್ಕೆ ಎಂಟ್ರಿ ಕೊಟ್ಟ ಅತ್ಯಾಧುನಿಕ ಕ್ಯಾನ್ಸರ್ ಔಷಧ

2 Min Read

Ayodhye Ramamandir ರಾಮಮಂದಿರ ದೇಣಿಗೆ ಲೂಟಿ: ಪ್ರಧಾನ ಕಾರ್ಯದರ್ಶಿ ಚಂಪತ್‌ರಾಯ್, ಟ್ರಸ್ಟಿ ಮಿಶ್ರಾ ರಾಜೀನಾಮೆ

1 Min Read

Indian Citizen ಅಮೆರಿಕದ ಪೌರತ್ವ ತ್ಯಜಿಸಿ ಭಾರತಕ್ಕೆ ಮರಳಿದ 94ರ ವೃದ್ಧೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ನಾನೇ ಸೀರೆ ಕತ್ತರಿಸಿ ವೈಶಾಕ್ ಮೃತದೇಹ ಕೆಳಗಿಳಿಸಿದ್ದೆ: ನಟಿ ಕೃಷಿ ತಾಪಂಡ ಹೇಳಿಕೆ

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actor Sharuk Khan ಮಂಗಳೂರಲ್ಲೇ ಇದ್ದಿದ್ರೆ ಶಿಕ್ಷಕನಾಗಿರ್ತಿದ್ದೆ: ಬಾಲಿವುಡ್ ನಟ ಶಾರುಕ್ ಖಾನ್, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖಮನರಂಜನೆ

Vinesh Vijayalakshmi ವಿನೀಶ್ ಕಾರು ಓಡಿಸುತ್ತಿರಲಿಲ್ಲ, ಯಾರಿಗೆ ಏನೂ ಆಗಿಲ್ಲ: ಹಾಗಾದ್ರೆ ನಡೆದಿದ್ದೇನು? ವಿಜಯಲಕ್ಷ್ಮಿ ದರ್ಶನ್ ಹೇಳಿದ್ದೇನು?

2 Min Read
ಕರ್ನಾಟಕದೇಶಪ್ರಮುಖ

LPG ಸಿಲಿಂಡರ್ ಮೇಲಿನ ಎಲ್ಲ ನಿರ್ಬಂಧ ತಕ್ಷಣದಿಂದಲೇ ತೆರವು: ಕೇಂದ್ರ ಸರ್ಕಾರ ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?