newsics. com| ನ್ಯೂಸಿಕ್ಸ್
ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಅವರಿಗಾಗಿ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾದ ಅತ್ಯಾಧುನಿಕ ಹಾಗೂ ಐಷಾರಾಮಿ ಕ್ಯಾರವನ್ ಒಂದು ಸಿದ್ಧವಾಗಿದೆ. ಸದ್ಯ ಸ್ಯಾಂಡಲ್ವುಡ್ ಚಿತ್ರರಂಗದಲ್ಲೇ ಅತ್ಯಂತ ದುಬಾರಿ ಬೆಲೆಯ ಕ್ಯಾರವನ್ ಇದಾಗಿದೆ ಎಂದು ಹೇಳಲಾಗುತ್ತಿದೆ.
ಈ ಕ್ಯಾರವನ್ನ ಬೆಲೆ ಬರೋಬ್ಬರಿ ಸುಮಾರು 6.5 ಕೋಟಿ ರೂಪಾಯಿ. ಖ್ಯಾತ ಡಿಸೈನರ್ ದಿಲೀಪ್ ಛಾಬ್ರಿಯಾ ಅವರು ಕ್ರಿಯೇಟ್ ಮಾಡಿರುವ ‘DC2’ ಸಂಸ್ಥೆಯ ಜಿಮ್ ಮಾಡ್ಯುಲರ್ ಕ್ಯಾರವನ್ ಇದಾಗಿದ್ದು, ಸುದೀಪ್ ಅವರ ಇಷ್ಟಕ್ಕೆ ತಕ್ಕಂತೆ ಮಹಾರಾಷ್ಟ್ರದ ಪುಣೆಯಲ್ಲಿ ಈ ಕ್ಯಾರವಾನ್ ರೆಡಿ ಆಗಿದೆ.
ಈ ಐಷಾರಾಮಿ ಕ್ಯಾರವನ್ನ ಮತ್ತೊಂದು ವಿಶೇಷವೆಂದರೆ, ಇದರ ಮೇಲೆ ಕಿಚ್ಚ ಸುದೀಪ್ ಅವರ ಹೆಸರನ್ನು ಸೂಚಿಸುವ ‘K’ (ಕಿಚ್ಚ) ಎಂಬ ಸಿಂಬಲ್ ಅನ್ನು ವಿನ್ಯಾಸಗೊಳಿಸಲಾಗಿದೆ. ನಟ ಸುದೀಪ್ ಅವರು ತಮ್ಮ ಕಾರಿನ ಮೇಲೂ ಇದೇ ರೀತಿಯ ಸಿಂಬಲ್ ಹೊಂದಿದ್ದು, ಈಗ ಅದೇ ಲೋಗೋವನ್ನು ತಮ್ಮ ಹೊಸ ಕ್ಯಾರವನ್ ಮೇಲೂ ಹಾಕಿಸಿಕೊಂಡಿದ್ದಾರೆ.