Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Ayodhya scam ಅಯೋಧ್ಯೆ ದೇಣಿಗೆ ಹಣ ಲೂಟಿಗೆ ಚಂಪತ್‌ರಾಯ್, ಮಿಶ್ರಾ ಸಹಕಾರ! ಎಸ್ಐಟಿ ವರದಿ ಹೇಳ್ತಿರೋದೇನು?
ಪ್ರಮುಖದೇಶ

Ayodhya scam ಅಯೋಧ್ಯೆ ದೇಣಿಗೆ ಹಣ ಲೂಟಿಗೆ ಚಂಪತ್‌ರಾಯ್, ಮಿಶ್ರಾ ಸಹಕಾರ! ಎಸ್ಐಟಿ ವರದಿ ಹೇಳ್ತಿರೋದೇನು?

Share
2 Min Read
SHARE

newsics.com| ನ್ಯೂಸಿಕ್ಸ್

ಅಯೋಧ್ಯೆ: ಅಯೋಧ್ಯೆ ರಾಮ ಮಂದಿರ(Ram Mandir)ದ ದೇಣಿಗೆ ಲೂಟಿ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಸಿದ್ಧಪಡಿಸಿರುವ ವರದಿಯು ಸ್ಪೋಟಕ ಮಾಹಿತಿಗಳನ್ನು ಹೊರಹಾಕಿದೆ.

ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಶುಕ್ರವಾರ ದಿಢೀರ್ ರಾಜೀನಾಮೆ ನೀಡಿದ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ಅವರ ಪಾತ್ರದ ಬಗ್ಗೆ ಎಸ್‌ಐಟಿ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದು, ಇಡೀ ಹಗರಣದಲ್ಲಿ ಇವರ ಆಪ್ತರೇ ಭಾಗಿಯಾಗಿರುವುದು ದೃಢಪಟ್ಟಿದೆ.

40 ದಿನ, 70 ಬಾರಿ ಕಳ್ಳತನ ಚಂಪತ್ ರಾಯ್‌ಗೆ ತಿಳಿದಿತ್ತೇ?

ಎಸ್‌ಐಟಿ ಅಧಿಕಾರಿಗಳು ಏಪ್ರಿಲ್ 27 ರಿಂದ ಜೂನ್ 5 ರವರೆಗಿನ ಸಿಸಿಟಿವಿ ದೃಶ್ಯಾವಳಿಗಳನ್ನು ಜಾಲಾಡಿದಾಗ ಬೆಚ್ಚಿಬೀಳುವ ಸತ್ಯ ಬಯಲಾಗಿದೆ. ದೇಗುಲದ ಹಣ ಎಣಿಸುವ ಸಿಬ್ಬಂದಿ ಕೇವಲ 40 ದಿನಗಳ ಅವಧಿಯಲ್ಲಿ ಬರೋಬ್ಬರಿ 70 ಬಾರಿ ಕಾಣಿಕೆ ಹಣವನ್ನು ಕದ್ದಿದ್ದಾರೆ.

ಈ ಹಿಂದೆಯೇ ಹಣದ ವ್ಯತ್ಯಾಸದ ಬಗ್ಗೆ ಚಂಪತ್ ರಾಯ್ ಅವರಿಗೆ ದೂರುಗಳು ಬಂದಿದ್ದರೂ, ಅವರು ಪೊಲೀಸರಿಗೆ ದೂರು ನೀಡದೆ ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದ್ದರು ಎಂದು ವರದಿ ಹೇಳಿದೆ.

ಬಂಧಿತ ಎಂಟು ಆರೋಪಿಗಳೂ ಚಂಪತ್ ರಾಯ್ ಮತ್ತು ಅನಿಲ್ ಮಿಶ್ರಾ ಅವರ ನೇರ ಶಿಫಾರಸಿನ ಮೇರೆಗೆ ಬ್ಯಾಕ್ ಗ್ರೌಂಡ್ ವೆರಿಫಿಕೇಶನ್ ಇಲ್ಲದೆ ಕೆಲಸಕ್ಕೆ ಸೇರಿದವರಾಗಿದ್ದಾರೆ.

ಹಗರಣದ ಮುಖ್ಯ ಸೂತ್ರಧಾರಿ ಚಂಪತ್ ರಾಯ್ ಅವರ ಆಪ್ತ ಸಹಾಯಕ ರಾಮ್ ಶಂಕರ್ ಯಾದವ್ ಅಲಿಯಾಸ್ ಟಿನ್ನು ಯಾದವ್ ಎಂದು ಎಸ್‌ಐಟಿ ಹೆಸರಿಸಿದೆ.

ದೇಣಿಗೆ ಪೆಟ್ಟಿಗೆಗಳ (ಹುಂಡಿ) ಕೀಲಿಗಳು ಇವರ ಬಳಿಯೇ ಇರುತ್ತಿದ್ದವು. ಯಾರನ್ನು ಕೆಲಸಕ್ಕೆ ತರಬೇಕು, ಯಾರಿಗೆ ಹಣ ಎಣಿಸುವ ಜವಾಬ್ದಾರಿ ನೀಡಬೇಕು ಮತ್ತು ದೇವಸ್ಥಾನದ ಆವರಣದಲ್ಲಿ ಪೊಲೀಸರನ್ನು ಎಲ್ಲಿ ನಿಯೋಜಿಸಬೇಕು ಎಂಬುದನ್ನು ಸ್ವತಃ ಇವರೇ ನಿರ್ಧರಿಸುವಷ್ಟು ಪ್ರಭಾವಶಾಲಿಯಾಗಿದ್ದರು.

ಸಿಸಿಟಿವಿ ಆಫ್ ಮಾಡ್ತಿದ್ದರೂ ಸಿಕ್ಕಿಬಿದ್ದದ್ದು ಹೇಗೆ?

ಆರೋಪಿಗಳಾದ ಟಿನ್ನು ಯಾದವ್, ಮನೀಶ್, ಲವ್ ಕುಶ್ ಮತ್ತು ಅನುಕಲ್ಪ್ ಅವರಿಗೆ ಎಣಿಕೆ ಕೊಠಡಿಯಲ್ಲಿದ್ದ ಸಾಮಾನ್ಯ ಸಿಸಿಟಿವಿ ಕ್ಯಾಮೆರಾಗಳು ಎಲ್ಲೆಲ್ಲಿವೆ ಮತ್ತು ಅವುಗಳ ಕಣ್ಣು ತಪ್ಪಿಸುವ ‘ಬ್ಲೈಂಡ್ ಸ್ಪಾಟ್‌ಗಳು’ ಯಾವುವು ಎಂಬುದು ಚೆನ್ನಾಗಿ ಗೊತ್ತಿತ್ತು.

ಹಣವನ್ನು ಜೇಬಿಗೆ ಇಳಿಸುವಾಗ ಇವರು ಸಿಸಿಟಿವಿ ಕ್ಯಾಮೆರಾಗಳನ್ನು ಆಫ್ ಮಾಡುತ್ತಿದ್ದರು ಅಥವಾ ಅದರ ವೀಕ್ಷಣೆಗೆ ಅಡ್ಡಿಪಡಿಸುತ್ತಿದ್ದರು. ಆದರೆ, ತನಿಖಾಧಿಕಾರಿಗಳು ಆ ಕೊಠಡಿಯೊಳಗೆ ಯಾರಿಗೂ ತಿಳಿಯದಂತೆ ಅಳವಡಿಸಿದ್ದ ‘ಗುಪ್ತ ಕಣ್ಗಾವಲು ಕ್ಯಾಮೆರಾ’ (Hidden Spy Camera) ಬಗ್ಗೆ ಆರೋಪಿಗಳಿಗೆ ಸುಳಿವಿರಲಿಲ್ಲ. ಈ ರಹಸ್ಯ ಕ್ಯಾಮೆರಾದಲ್ಲಿ ಇವರು ನಗದು ಕದಿಯುವ ದೃಶ್ಯಗಳು ಡಿಜಿಟಲ್ ಸಾಕ್ಷಿಯಾಗಿ ಸೆರೆಯಾಗಿದ್ದು, ಇಡೀ ಗ್ಯಾಂಗ್ ಜೈಲುಪಾಲಾಗುವಂತೆ ಮಾಡಿದೆ.

ಬಂಧಿತರಲ್ಲಿ ಟಿನ್ನು ಯಾದವ್ ಮತ್ತು ಸುಭಾಷ್ ಟ್ರಸ್ಟ್‌ನ ನೌಕರರಾದರೆ, ಉಳಿದ ಆರು ಜನ ಎಣಿಕೆಗೆ ಸಹಾಯ ಮಾಡಲು ಬಂದಿದ್ದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)ದ ಸಿಬ್ಬಂದಿಯಾಗಿದ್ದಾರೆ. ಸದ್ಯ ಈ ಆರೋಪಗಳ ಕುರಿತು ನ್ಯಾಯಾಲಯದಲ್ಲಿ ಅಂತಿಮ ತೀರ್ಪು ಬರಬೇಕಿದೆ.

Ketan-Siya Case ಉದ್ಯಮಿ ಪುತ್ರ ಕೇತನ್ ಅಗರ್ವಾಲ್ ಹ*ತ್ಯೆ ಕೇಸ್, ಭಾವಿ ಪತ್ನಿ ಸಿಯಾ ಹಾಗೂ ಪ್ರಿಯಕರನ ಭೀಕರ ಸ್ಕೆಚ್ ಬಯಲು!

Layoffs ಫೋಕ್ಸ್‌ವ್ಯಾಗನ್ ಕಂಪನಿಯಲ್ಲಿ 1 ಲಕ್ಷ ನೌಕರರ ವಜಾ! 4 ಪ್ರಮುಖ ಕಾರ್ಖಾನೆ ಬಂದ್?

War atmosphere ಇರಾನ್‌ ದಾಳಿಗೆ ಅಮೆರಿಕ ಪ್ರತಿದಾಳಿ: ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧ ವಾತಾವರಣ

Women living alone ಮದುವೆ ಬಳಿಕವೂ ಒಂಟಿ ಜೀವನ ನಡೆಸುವ ಮಹಿಳೆಯರ ಪ್ರಮಾಣ ಗಣನೀಯ ಹೆಚ್ಚಳ! ಟಾಪ್ 3ನಲ್ಲಿ‌ ಕರ್ನಾಟಕ

Richest CEO Shankh ಈ‌ ವ್ಯಕ್ತಿಯ ದಿನ‌ದ ಸಂಬಳ‌ 21‌ ಕೋಟಿ! ಎಲ್ಲೆಲ್ಲೂ ಈಗ ಇವರದೇ ಚರ್ಚೆ… ಯಾರಿವರು?

 

TAGGED:#ayodhye #donation #ramamandir #loot #champathrai #anilmishra #SIT #news #newsics
Share This Article
Facebook Twitter Copy Link Print
Previous Article Linganamakki Dam ಲಿಂಗನಮಕ್ಕಿ ಜಲಾಶಯದಲ್ಲಿ ನೀರಿಲ್ಲ: ವಿದ್ಯುತ್ ಉತ್ಪಾದನೆ ಸ್ಥಗಿತ
Next Article Danger swimming pool ಡ್ಯಾನ್ಸ್ ಮಾಡುತ್ತಾ ರೆಸಾರ್ಟ್ ಈಜುಕೊಳಕ್ಕೆ ಧುಮುಕಿದ ಯುವಕ ಮೃತಪಟ್ಟಿದ್ದು ಹೇಗೆ? ವಿಡಿಯೋ ನೋಡಿ

Popular Posts

High court order| ಖಾತೆಯಲ್ಲಿ ಕನಿಷ್ಠ ಠೇವಣಿ ಕಾಯ್ದಿರಿಸದ ಗ್ರಾಹಕರಿಗೆ ಬ್ಯಾಂಕ್​ ವಿಧಿಸುವ ದಂಡಕ್ಕೆ ಜಿಎಸ್​ಟಿ ಅನ್ವಯವಾಗುವುದಿಲ್ಲ :​ ಹೈಕೋರ್ಟ್

2 Min Read

Adventure trip SSLC ಬಾಲಕಿ ಜತೆ 2 PUC ಹುಡುಗರು ಎಸ್ಕೇಪ್! ಕಾಡಿನ ಮಧ್ಯೆ ಟೆಂಟ್ ಹಾಕಿ ಮಾಡಿದ್ದೇನು?

3 Min Read

Danger swimming pool ಡ್ಯಾನ್ಸ್ ಮಾಡುತ್ತಾ ರೆಸಾರ್ಟ್ ಈಜುಕೊಳಕ್ಕೆ ಧುಮುಕಿದ ಯುವಕ ಮೃತಪಟ್ಟಿದ್ದು ಹೇಗೆ? ವಿಡಿಯೋ ನೋಡಿ

1 Min Read

Ayodhya scam ಅಯೋಧ್ಯೆ ದೇಣಿಗೆ ಹಣ ಲೂಟಿಗೆ ಚಂಪತ್‌ರಾಯ್, ಮಿಶ್ರಾ ಸಹಕಾರ! ಎಸ್ಐಟಿ ವರದಿ ಹೇಳ್ತಿರೋದೇನು?

2 Min Read

You Might Also Like

ಕರ್ನಾಟಕಪ್ರಮುಖ

Linganamakki Dam ಲಿಂಗನಮಕ್ಕಿ ಜಲಾಶಯದಲ್ಲಿ ನೀರಿಲ್ಲ: ವಿದ್ಯುತ್ ಉತ್ಪಾದನೆ ಸ್ಥಗಿತ

1 Min Read
filmಕರ್ನಾಟಕಪ್ರಮುಖ

Kichcha Sudeep: 6.5 ಕೋಟಿ ರೂ. ಬೆಲೆಯ ಕ್ಯಾರವನ್ ಖರೀದಿಸಿದ ಕಿಚ್ಚ ಸುದೀಪ್

1 Min Read
ಕರ್ನಾಟಕಪ್ರಮುಖ

Lover kidnapped ಪ್ರೇಯಸಿ ಕಿಡ್ನ್ಯಾಪ್ ಮಾಡಿದ್ದಾಗಲೇ ಜಗಳ! ಚಾಕು ಇರಿತ, ಕಾರು ಸ್ಫೋಟಿಸಿ ಪ್ರಿಯಕರ ಆತ್ಮ*ಹ*ತ್ಯೆ, ಬೆಂಗಳೂರು ಯುವತಿ ಪಾರು

1 Min Read
ಕರ್ನಾಟಕಪ್ರಮುಖಮನರಂಜನೆ

Heart attack ಚಿತ್ರ ನಿರ್ಮಾಪಕ‌ ಬಾ‌ ಮಾ ಹರೀಶ್ ಮಗ ಉಲ್ಲಾಸ್ ಗೌಡ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?