newsics.com | ನ್ಯೂಸಿಕ್ಸ್
ಬೆಂಗಳೂರು: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ ಜೂನ್ 28 ರ ಭಾನುವಾರದಂದು ‘ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ)’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ರಿತ್ವಿಕ್ ಪಾಂಡೆ ಈ ಮಾಹಿತಿ ನೀಡಿದ್ದಾರೆ.
ಕಳೆದ 14 ವರ್ಷಗಳಿಗೂ ಮೇಲ್ಪಟ್ಟು ಭಾರತ ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದರೂ, ಜಗತ್ತಿನ ಕೆಲವು ಭಾಗಗಳಲ್ಲಿ ಹಾಗೂ ಭಾರತದ ನೆರೆ ರಾಷ್ಟ್ರಗಳಲ್ಲಿ ವೈಲ್ಡ್ ಪೋಲಿಯೋ ವೈರಸ್ (Wild Polio Virus) ಹರಡುವಿಕೆ ಇನ್ನೂ ಇರುವುದರಿಂದ ಈ ಮುನ್ನೆಚ್ಚರಿಕೆ ಕ್ರಮ ಅತ್ಯಗತ್ಯವಾಗಿದೆ. ಭಾರತ ತಜ್ಞ ಸಲಹಾ ಗುಂಪಿನ ಶಿಫಾರಸ್ಸಿನ ಅನ್ವಯ ಈ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ಪಾಂಡೆ ತಿಳಿಸಿದ್ದಾರೆ.
ಭಾನುವಾರ (ಜೂ.28) ಪೋಲಿಯೋ ಬೂತ್‍ಗಳಲ್ಲಿ ಲಸಿಕೆ ನೀಡಲಾಗುವುದು. ನಂತರದ 2 ರಿಂದ 3 ದಿನಗಳಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ವಂಚಿತ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. ವಲಸಿಗ ಸಮುದಾಯದ ಮಕ್ಕಳು, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳು ಹಾಗೂ ನಗರ ಪ್ರದೇಶದ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ.
5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ಪೋಷಕರಿಗೆ ಮನವಿ ಮಾಡಿದೆ.
Adventure trip SSLC ಬಾಲಕಿ ಜತೆ 2 PUC ಹುಡುಗರು ಎಸ್ಕೇಪ್! ಕಾಡಿನ ಮಧ್ಯೆ ಟೆಂಟ್ ಹಾಕಿ ಮಾಡಿದ್ದೇನು?
Ayodhya scam ಅಯೋಧ್ಯೆ ದೇಣಿಗೆ ಹಣ ಲೂಟಿಗೆ ಚಂಪತ್‌ರಾಯ್, ಮಿಶ್ರಾ ಸಹಕಾರ! ಎಸ್ಐಟಿ ವರದಿ ಹೇಳ್ತಿರೋದೇನು?