newsics.com | ನ್ಯೂಸಿಕ್ಸ್
ಬೆಂಗಳೂರು: ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ವಿವಿಧ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜು.3ರವರೆಗೆ ನಿರಂತರ ಮಳೆಯಾಗಲಿದ್ದು, ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಜೂ.30ರವರೆಗೆ ಭಾರಿ ಮಳೆಯಾಗಲಿದ್ದು, ಇದರೊಂದಿಗೆ ಭೀಕರ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಜೊತೆಗೆ ತೀವ್ರವಾದ ಗುಡುಗು, ಸಿಡಿಲು ಹಾಗೂ ಮೇಲ್ಮೈ ಗಾಳಿ ಬೀಸಲಿದೆ. ಜೂ.30 ರಿಂದ ಜು.3ರವರೆಗೆ ಭಾರಿ ಮಳೆಯ ಎಚ್ಚರಿಕೆ ಇಲ್ಲದಿದ್ದರೂ, ಸತತವಾಗಿ ಗುಡುಗು, ಸಿಡಿಲು ಮತ್ತು ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.
ದಕ್ಷಿಣ ಒಳನಾಡಿನಲ್ಲಿ ಜೂ.30 ರಿಂದ ಜು.3ರವರೆಗೆ ದಕ್ಷಿಣ ಒಳನಾಡಿನ ಹಲವೆಡೆ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಸತತವಾಗಿ ಭಾರಿ ಮಳೆಯಾಗಲಿದೆ. ಮಳೆ ಹಾಗೂ ಸಿಡಿಲಿನ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಹಾಗೂ ವಿಶೇಷವಾಗಿ ರೈತರು ಮತ್ತು ಮೀನುಗಾರರು ಜಾಗರೂಕರಾಗಿರಬೇಕು. ಗುಡುಗು ಸಿಡಿಲಿನ ಸಂದರ್ಭದಲ್ಲಿ ಮರಗಳ ಕೆಳಗೆ ನಿಲ್ಲದಂತೆ ಹಾಗೂ ಹಳೆಯ ಕಟ್ಟಡಗಳ ಆಶ್ರಯ ಪಡೆಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಭಾನುವಾರದಿಂದ ಜು.1ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 40-50 ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗಬಾರದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Strawberry Moon ಆಕಾಶದಲ್ಲಿ ಜೂನ್ ಅಂತ್ಯದ ವಿಸ್ಮಯ, ಶೀಘ್ರದಲ್ಲೇ ಕಣ್ಮನ ಸೆಳೆಯಲಿದೆ ಅಪರೂಪದ ‘ಸ್ಟ್ರಾಬೆರಿ ಮೂನ್’!