Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > CM DK warn ಅಮಲು ಪದಾರ್ಥ ಬೆರಕೆ ನಿಲ್ಲಿಸಿ, ಇಲ್ಲದಿದ್ದರೆ ರಾಜ್ಯದಲ್ಲಿ ಪಾನ್ ಮಸಾಲಾ, ಗುಟ್ಕಾ ನಿಷೇಧ- ಸಿಎಂ
ಕರ್ನಾಟಕಪ್ರಮುಖ

CM DK warn ಅಮಲು ಪದಾರ್ಥ ಬೆರಕೆ ನಿಲ್ಲಿಸಿ, ಇಲ್ಲದಿದ್ದರೆ ರಾಜ್ಯದಲ್ಲಿ ಪಾನ್ ಮಸಾಲಾ, ಗುಟ್ಕಾ ನಿಷೇಧ- ಸಿಎಂ

Share
3 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ಕರ್ನಾಟಕದ ವಿವಿಧ ಪ್ರದೇಶಗಲ್ಲಿ ಪಾನ್ ಮಸಾಲಾ – ಗುಟ್ಕಾದಲ್ಲಿ ಮತ್ತೇರಿಸುವ ವಸ್ತು ಅಥವಾ ಅಮಲು ಬರುವುದಕ್ಕೆ ಕೆಲವೊಂದು ವಸ್ತುಗಳನ್ನು ಬಳಕೆ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಈ ವಿಚಾರದಲ್ಲಿ ಗಂಭೀರ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

ವ್ಯಸನ ಮಸಣಕ್ಕೆ ದಾರಿಯಾಗುವ ಮುನ್ನ ಎಚ್ಚರವಿರಲಿ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನ ಹಾಗೂ ‘ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ’ದ ಅಂಗವಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ‘ನಶಾ ಮುಕ್ತ ಭಾರತ ಅಭಿಯಾನ’ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಪಾನ್ ಮಸಾಲಾ, ಗುಟ್ಕಾ ಹಾಗೂ ಅಡಿಕೆ ಪದಾರ್ಥಗಳಲ್ಲಿ ಸ್ವಲ್ಪ ಅಮಲು ಪದಾರ್ಥಗಳನ್ನು ಬೆರೆಸಿ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಇದು ತಕ್ಷಣವೇ ನಿಲ್ಲದಿದ್ದರೆ ರಾಜ್ಯದಲ್ಲಿ ಎಲ್ಲಾ ರೀತಿಯ ಪಾನ್ ಮಸಾಲಾ ಹಾಗೂ ಗುಟ್ಕಾಗಳನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಈ ವೇದಿಕೆಯ ಮೂಲಕ ಎಚ್ಚರಿಕೆ ನೀಡಿದ್ದಾರೆ. ವ್ಯಸನಮುಕ್ತ ನಾಳಿನ ಸುಂದರ ಕನಸನ್ನು ನನಸಾಗಿಸಲು ಶಿಕ್ಷಣ ಸಂಸ್ಥೆಗಳು, ಪೋಷಕರು ಮತ್ತು ನಾಗರಿಕರು ಒಟ್ಟಾಗಿ ಮುನ್ನಡೆಯಬೇಕಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಕಿಂಚಿತ್ ಅಮಲು ಪದಾರ್ಥ ಬೆರಕೆ ಮಾಡಿದರೂ ಕರ್ನಾಟಕದಲ್ಲಿ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ಮಾರಾಟ ನಿಷೇಧ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಪಾನ್ ಮಸಾಲಾ, ಗುಟ್ಕಾ, ಅಡಿಕೆ ಮತ್ತಿತರ ಪದಾರ್ಥಗಳಲ್ಲಿ ಅಮಲು ಬರುವ ವಸ್ತುಗಳನ್ನು ಬೆರಕೆ ಮಾಡಿ ಮಾರಾಟ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ನಿಜವೇ ಆಗಿದ್ದರೆ, ತಕ್ಷಣ ನಿಲ್ಲದಿದ್ದರೆ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ಪದಾರ್ಥಗಳ ಮಾರಾಟವನ್ನು ಕರ್ನಾಟಕದಲ್ಲಿ ನಿಷೇಧ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮಾದಕದ್ರವ್ಯ ಮುಕ್ತ ಕರ್ನಾಟಕ ರೂಪಿಸುವುದು ನಮ್ಮ ಗುರಿ. ಅದಕ್ಕಾಗಿ ನಾವು ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೇವೆ. ಇಂದು ನೀವೆಲ್ಲರೂ ಸೇರಿ ನಶೆ ಮುಕ್ತ ಭಾರತ ಸಮಾವೇಶ ಹಮ್ಮಿಕೊಂಡಿರುವುದನ್ನು ನಾನು ಸ್ವಾಗತಿಸುತ್ತೇನೆ. ನೀವೆಲ್ಲರೂ ಇದರ ರಾಯಭಾರಿಗಳು. ಮಾದಕ ವ್ಯಸನ ತಡೆಯುವಿಕೆ ದೊಡ್ಡ ಸವಾಲಾಗಿದ್ದು, ನಾವೆಲ್ಲರೂ ಒಂದಾಗಿ ಸೇರಿ, ಯುವ ಪೀಳಿಗೆ ಈ ವ್ಯಸನದ ಸುಳಿಗೆ ಸಿಲುಕದಂತೆ ತಡೆಯೋಣ. ಇದು ಎಲ್ಲರ ಕರ್ತವ್ಯವಾಗಿದೆ. ನೀವು ಜೀವ ರಕ್ಷಣೆಯ ವೃತ್ತಿ ಆಯ್ಕೆ ಮಾಡಿಕೊಂಡಿದ್ದು, ನಿಮಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಕರ್ನಾಟಕ ದೇಶದ ವೈದ್ಯಕೀಯ ರಾಜಧಾನಿ

ವೈದ್ಯಕೀಯ ಶಿಕ್ಷಣ ಎಲ್ಲರಿಗೂ ಸಿಗುವಂತೆ ಆಗಬೇಕು. ಬೆಂಗಳೂರಿನ ಹವಾಮಾನ ದೇಶದ ಬೇರೆ ಯಾವುದೇ ಭಾಗದಲ್ಲಿ ಇಲ್ಲ. ಹೀಗಾಗಿ ಇದನ್ನು ಹವಾನಿಯಂತ್ರಿತ ನಗರ ಎಂದು ಕರೆಯುತ್ತಾರೆ. ಕರ್ನಾಟಕದಲ್ಲಿ ಇರುವಷ್ಟು ಆಸ್ಪತ್ರೆ ಬೇರೆ ಯಾವ ರಾಜ್ಯದಲ್ಲೂ ಇಲ್ಲ. ಕರ್ನಾಟಕ ದೇಶದಲ್ಲಿ ವೈದ್ಯಕೀಯ ರಾಜಧಾನಿಯೂ ಆಗಿದೆ. ಈ ವಿವಿ ಬೆಂಗಳೂರು ದಕ್ಷಿಣ ಜಿಲ್ಲೆಯ ನೂತನ ಕ್ಯಾಂಪಸ್‌ಗೆ ಸ್ಥಳಾಂತರವಾಗಲಿದೆ ಎಂದು ಹೇಳಿದರು.

ಬೆಂಗಳೂರಿನ ಹಸಿರು ಅಭಿಯಾನಕ್ಕೆ ಜಾಗತಿಕ ಗಿನ್ನಿಸ್ ಮನ್ನಣೆ!

ಇನ್ನು ಜೂನ್ 27ರಂದು ಕೆಂಪೇಗೌಡ ಜಯಂತಿಯ ಕಾರ್ಯಕ್ರಮ ಸಂದರ್ಭದಲ್ಲಿ ನಡೆದ ಬೃಹತ್ ಹಸಿರು ಅಭಿಯಾನದಲ್ಲಿ, “ಅತಿ ಕಡಿಮೆ ಅವಧಿಯಲ್ಲಿ (12 ಗಂಟೆಗಳಲ್ಲಿ) ವಿವಿಧ ಸ್ಥಳಗಳಲ್ಲಿ ತಂಡವೊಂದರಿಂದ ಅತಿ ಹೆಚ್ಚು ಸಸಿಗಳನ್ನು ನೆಟ್ಟ” ಐತಿಹಾಸಿಕ ಸಾಧನೆಗಾಗಿ ಜಾಗತಿಕ ಮನ್ನಣೆಯ ‘ಗಿನ್ನಿಸ್ ವರ್ಲ್ಡ್ ರೆಕಾರ್ಡ್ಸ್’ ಪ್ರಮಾಣಪತ್ರವನ್ನು ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಅವರೊಂದಿಗೆ ಡಿ.ಕೆ ಶಿವಕುಮಾರ್ ಅವರು ಸ್ವೀಕರಿಸಿದ್ದಾರೆ.

ಬಿಡಿಎ ಹಾಗೂ 50,000ಕ್ಕೂ ಹೆಚ್ಚು ಪರಿಸರ ಪ್ರೇಮಿಗಳ ಸಂಕಲ್ಪಕ್ಕೆ ಸಂದ ಜಯ ಇದು. ಈ ಐತಿಹಾಸಿಕ ಮಹತ್ಕಾರ್ಯದಲ್ಲಿ ಹಗಲಿರುಳು ಶ್ರಮಿಸಿದ ಪ್ರತಿಯೊಬ್ಬ ಅಧಿಕಾರಿಗಳಿಗೆ, ಸಿಬ್ಬಂದಿಗೆ ಹಾಗೂ ಕೈಜೋಡಿಸಿದ ಪ್ರತಿಯೊಬ್ಬ ನಾಗರಿಕರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆಗಳು. ನಮ್ಮ ಬೆಂಗಳೂರು ಸದಾ ಹಸಿರಾಗಿರಲಿ, ಉಸಿರಾಗಿರಲಿ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಶುಭಕೋರಿದ್ದಾರೆ.

Modi cabinet reshuffle ಮುಂಗಾರು ಅಧಿವೇಶನಕ್ಕೂ ಮುನ್ನ ಮೋದಿ ಸಂಪುಟ ಸರ್ಜರಿ, ಬಿಜೆಪಿಯಲ್ಲೂ ಬದಲಾವಣೆ

Sharmila Mandre Engagement ಖ್ಯಾತ ನಿರ್ಮಾಪಕ ಸುಧನ್ ಸುಂದರಂ ಜತೆ ಉಂಗುರ ಬದಲಿಸಿಕೊಂಡ ನಟಿ ಶರ್ಮಿಳಾ ಮಾಂಡ್ರೆ, ಮದುವೆ ಯಾವಾಗ?

TAGGED:gutka will be banned in the state - CMotherwise pan masalaStop mixing intoxicants
Share This Article
Facebook Twitter Copy Link Print
Previous Article Sharmila Mandre Engagement ಖ್ಯಾತ ನಿರ್ಮಾಪಕ ಸುಧನ್ ಸುಂದರಂ ಜತೆ ಉಂಗುರ ಬದಲಿಸಿಕೊಂಡ ನಟಿ ಶರ್ಮಿಳಾ ಮಾಂಡ್ರೆ, ಮದುವೆ ಯಾವಾಗ?
Next Article Reels incident ರೀಲ್ಸ್ ಹುಚ್ಚು – ದೇವರಾಯನದುರ್ಗ ಬೆಟ್ಟದಿಂದ ಬಿದ್ದ ಉಪನ್ಯಾಸಕ!

Popular Posts

Ben stokes| ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್ ಸ್ಟೋಕ್ಸ್

1 Min Read

Helicopter crash| ಸೌದಿ ಅರೇಬಿಯಾದ ಅರಾಮ್ಕೋ ಹೆಲಿಕಾಪ್ಟರ್ ಪತನ; 14 ಮಂದಿ ಸಾವು

1 Min Read

One rupee Offer ಮಾಲ್‌ನಲ್ಲಿ 1 ರೂಪಾಯಿ ಆಫರ್ ಸೃಷ್ಟಿಸಿದ ಹಂಗಾಮಾ: ಭಾರೀ ನೂಕುನುಗ್ಗಲು, ಸುಸ್ತಾದ ಪೊಲೀಸರು!

1 Min Read

Anant Ambani: ತಿರುಪತಿ ತಿಮ್ಮಪ್ಪನಿಗೆ ಮುಡಿಕೊಟ್ಟ ಅನಂತ ಅಂಬಾನಿ

1 Min Read

You Might Also Like

ದೇಶಪ್ರಮುಖಮನರಂಜನೆವೈರಲ್

Divorce on reality show ರಿಯಾಲಿಟಿ ಶೋನಲ್ಲೇ ಡಿವೋರ್ಸ್ ಘೋಷಿಸಿದ ನಟಿ! ಆಕಾಂಕ್ಷಾ ಹೇಳಿದ್ದೇನು? ವಿಡಿಯೋ ನೋಡಿ

3 Min Read
ವಿದೇಶದೇಶಪ್ರಮುಖ

Award to PM Modi ಮೋದಿಗೆ ಮತ್ತೊಂದು ಜಾಗತಿಕ ಗೌರವ; ಸೆಶೆಲ್ಸ್​ನಲ್ಲಿ ‘ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್’ ಪ್ರಶಸ್ತಿ ಪ್ರದಾನ, ವಿಡಿಯೋ ನೋಡಿ

2 Min Read
ಕರ್ನಾಟಕಪ್ರಮುಖ

Reels incident ರೀಲ್ಸ್ ಹುಚ್ಚು – ದೇವರಾಯನದುರ್ಗ ಬೆಟ್ಟದಿಂದ ಬಿದ್ದ ಉಪನ್ಯಾಸಕ!

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Sharmila Mandre Engagement ಖ್ಯಾತ ನಿರ್ಮಾಪಕ ಸುಧನ್ ಸುಂದರಂ ಜತೆ ಉಂಗುರ ಬದಲಿಸಿಕೊಂಡ ನಟಿ ಶರ್ಮಿಳಾ ಮಾಂಡ್ರೆ, ಮದುವೆ ಯಾವಾಗ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?