Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > CM DK shivakumar ಬೇರೆ ರಾಜ್ಯದ ಮತದಾರರಿಗೆ ನಾವು ಯಾಕೆ ಗ್ಯಾರಂಟಿ ನೀಡಬೇಕು? – ಸಿಎಂ ಡಿಕೆಶಿ
ಕರ್ನಾಟಕದೇಶಪ್ರಮುಖ

CM DK shivakumar ಬೇರೆ ರಾಜ್ಯದ ಮತದಾರರಿಗೆ ನಾವು ಯಾಕೆ ಗ್ಯಾರಂಟಿ ನೀಡಬೇಕು? – ಸಿಎಂ ಡಿಕೆಶಿ

Share
2 Min Read
SHARE

newsics.com| ನ್ಯೂಸಿಕ್ಸ್
ತಮ್ಮ ಎನ್ಯುಮರೇಶನ್ ಫಾರಂ (ಗಣತಿ ನಮೂನೆ) ಭರ್ತಿ ಮಾಡುವ ಮೂಲಕ ಸಿಎಂ ಡಿ ಕೆ ಶಿವಕುಮಾರ್ ಅವರು ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಚಾಲನೆ ನೀಡಿದರು.

ಸದಾಶಿವನಗರ ನಿವಾಸದಲ್ಲಿ ಮಂಗಳವಾರ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಶಿವಕುಮಾರ್ ಅವರು ಗಣತಿ ನಮೂನೆ ತುಂಬಿದರು.

ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಆರಂಭವಾಗಿದ್ದು, ನನ್ನ ಮನೆಯಿಂದಲೇ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ನನ್ನ ಎನ್ಯುಮರೇಷನ್ ಅರ್ಜಿಯನ್ನು ಭರ್ತಿ ಮಾಡಿ ಸಹಿ ಮಾಡಿ ಸಲ್ಲಿಕೆ ಮಾಡಿರುವೆ. ನೀವು ನಿಮ್ಮ ಹೆಸರಿನ ಜೊತೆಗೆ ಈ ಹಿಂದೆ ಮತದಾರ ಪಟ್ಟಿ ಸಮಯದಲ್ಲಿ ನೀಡಲಾಗಿದ್ದ ದೂರವಾಣಿ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ. ಇಲ್ಲವಾದರೆ ಹೊಸ ಮೊಬೈಲ್ ಸಂಖ್ಯೆಯನ್ನು ಅಧಿಕಾರಿಗಳ ಮೂಲಕ ಸೇರ್ಪಡೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಯಾವ ಸಂಖ್ಯೆ ನೀಡಿರುತ್ತಿರೋ ಅದೇ ಸಂಖ್ಯೆಗೆ ಒಟಿಪಿ ಬರಲಿದೆ’ ಎಂದು ಮಾಹಿತಿ ನೀಡಿದರು.

‘ನೀವು ನಿಮ್ಮ ಹೆಸರಿನಲ್ಲಿ ತಿದ್ದುಪಡಿ ಮಾಡಿಕೊಳ್ಳಲು ಅವಕಾಶವಿದೆ. ಬಿಎಲ್‌ಎ, ಬಿಎಲ್‌ಓ ಹಾಗೂ ಮೇಲ್ವಿಚಾರಕರು ಈಗಾಗಲೇ ವಾಟ್ಸಪ್ ಗ್ರೂಪ್ ಮಾಡಿಕೊಂಡಿದ್ದಾರೆ. ಕುಟುಂಬದ ಸದಸ್ಯರ ಪೈಕಿ ಒಬ್ಬರು ಸಹಿ ಮಾಡಿದರೂ ಸಾಕು. ಕುಟುಂಬದವರ ಪರವಾಗಿ ಒಬ್ಬರೇ ಎಲ್ಲರ ಅರ್ಜಿ ತುಂಬಬಹುದು. ಅದನ್ನು ಸ್ವೀಕಾರ ಮಾಡಿಕೊಳ್ಳಲಾಗುವುದು. ನಿಮ್ಮ ಫೋಟೋ ಬದಲಾಯಿಸಿಕೊಳ್ಳಬೇಕಾದರೆ ಅರ್ಜಿಯಲ್ಲಿ ಹೊಸ ಫೋಟೋ ನೀಡಬಹುದು. ಹೊಸ ಮತದಾರರು ನಿವಾಸ ದೃಢೀಕರಣ ಪತ್ರ ನೀಡಬೇಕು. ಕರ್ನಾಟಕ ಸರ್ಕಾರ ರಾಜ್ಯದ ಜನರಿಗೆ ಅಗತ್ಯ ಪ್ರಮಾಣಪತ್ರ ನೀಡಲು ಮುಂದಾಗಿದೆ. ಎಲ್ಲರೂ ತಮ್ಮ ಮತದಾನದ ಹಕ್ಕು ಉಳಿಸಿಕೊಳ್ಳಬೇಕು. ಉಳಿಸಿಕೊಳ್ಳದಿದ್ದರೆ ಸರ್ಕಾರ ಸೌಲಭ್ಯ, ಕಾರ್ಯಕ್ರಮಗಳನ್ನು ಪಡೆಯುವುದು ಕಷ್ಟವಾಗಲಿದೆ’ ಎಂದು ಮಾಹಿತಿ ನೀಡಿದರು.

ಕೆಲವು ಅನಕ್ಷರಸ್ಥರಿಗೆ ‍ಆಪ್ ಬಳಸುವುದರ ಬಗ್ಗೆ ಮಾಹಿತಿ ಇರುವುದಿಲ್ಲ ಎಂದು ಕೇಳಿದಾಗ, ‘ಆಪ್‌ ಬಳಸುವ ವಿಚಾರದಲ್ಲಿ ನನಗೂ ಮಾಹಿತಿ ಇಲ್ಲ. ನಾನು ಬೇರೆಯವರ ಸಹಾಯ ಪಡೆದೆ. ಈ ಕಾರಣಕ್ಕೆ ಬಿಎಲ್‌ಓಗಳ ಮೂಲಕ ಅರ್ಜಿ ಪಡೆದು ಆಫ್‌ ಲೈನ್ ಮೂಲಕವೇ ಅರ್ಜಿ ತುಂಬಬಹುದು’ ಎಂದು ತಿಳಿಸಿದರು.
ಕರ್ನಾಟಕದ ವಿಚಾರದಲ್ಲಿ ಈ ಪ್ರಕ್ರಿಯೆ ಬಹಳ ಪ್ರಮುಖವಾಗಿದೆ ಎಂದು ಕೇಳಿದಾಗ, ‘ಬೇರೆ ರಾಜ್ಯಗಳಲ್ಲಿ ಸರ್ಕಾರದ ಸೌಲಭ್ಯಗಳನ್ನು ಕೇವಲ ಮತದಾರರಿಗೆ ಮಾತ್ರ ನೀಡುತ್ತಿದ್ದು, ಮತದಾನ ಹಕ್ಕು ಇಲ್ಲದವರಿಗೆ ಸೌಲಭ್ಯ ಹಿಂಪಡೆಯಲಾಗುತ್ತಿದೆ. ಅದೇ ವ್ಯವಸ್ಥೆ ರಾಜ್ಯದಲ್ಲೂ ಬರಬಹುದು’ ಎಂದು ತಿಳಿಸಿದರು. ‘ಇಲ್ಲಿನ ಮತದಾರರಿಗೆ ನಾವು ಗ್ಯಾರಂಟಿ ನೀಡಬಹುದು. ಬೇರೆ ರಾಜ್ಯದ ಮತದಾರರಿಗೆ ನಾವು ಯಾಕೆ ಗ್ಯಾರಂಟಿ ನೀಡಬೇಕು? ನಮ್ಮ ರಾಜ್ಯದವರಿಗೆ ಮಾತ್ರ ಗ್ಯಾರಂಟಿ ನೀಡಬೇಕು ಎಂಬುದು ನಮ್ಮ ಆಲೋಚನೆ’ ಎಂದು ತಿಳಿಸಿದರು.

Share This Article
Facebook Twitter Copy Link Print
Previous Article Viral story ಆಟೋ ಚಾಲಕನ ‘ಕಾರ್ಪೊರೇಟ್’ ಸ್ಟೈಲ್‌ ರಿಪ್ಲೈಗೆ ದಂಗಾದ ಯುವತಿ: ವಿಡಿಯೋ ವೈರಲ್!!
Next Article Tamil Nadu ಯೂಟ್ಯೂಬ್ ನೋಡಿ ತನಗೆ ತಾನೇ ಹೆರಿಗೆ ಮಾಡಿಕೊಂಡ ಮಹಿಳೆ ಸಾವು

Popular Posts

ಬಿಜೆಪಿಯಲ್ಲಿ ‘ಆಡಿಯೋ’ ಬಾಂಬ್: ಬಿ. ವೈ. ವಿಜಯೇಂದ್ರ ಕೆಳಗಿಳಿಸಲು ಪ್ರಹ್ಲಾದ್ ಜೋಷಿ, ಬಿ.ಎಲ್. ಸಂತೋಷ್ ಗೇಮ್? ಸದ್ದು ಮಾಡ್ತಿದೆ ವೈರಲ್ ಕ್ಲಿಪ್!

1 Min Read

Chikkaballapura ಹೋಂಸ್ಟೇನಲ್ಲಿ ಯುವತಿ ಸಾವು ಪ್ರಕರಣ – ಮೃತ ಸುರಭಿಯ ಗ್ರಾಟಿಟ್ಯೂಡ್ ಜರ್ನಲ್ ಬಹಿರಂಗ

1 Min Read

Ketan agarwal ಕೇತನ್​ ಸಾವಿಗೆ ಅಪಹಾಸ್ಯ:​ ವೈದ್ಯೆಯ ಲೈಸೆನ್ಸ್ 5 ವರ್ಷ ಸಸ್ಪೆಂಡ್!

1 Min Read

Ksrtc ರಾಜ್ಯದಲ್ಲಿ ಮತ್ತೆ ಸಾರಿಗೆ ಬಸ್ ಟಿಕೆಟ್ ದರ ಏರಿಕೆ??

1 Min Read

You Might Also Like

ಕರ್ನಾಟಕದೇಶಪ್ರಮುಖ

Mumbai ಶಾಲಾ ಬಸ್‌ ಮೇಲೆ ಬಿದ್ದ ಮರ – ಓರ್ವ ವಿದ್ಯಾರ್ಥಿ ಸಾವು, 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

1 Min Read
Sportsಕರ್ನಾಟಕದೇಶಪ್ರಮುಖ

Hardik pandya ಮುಂಬೈ ಬಿಟ್ಟು ಬೆಂಗಳೂರಿಗೆ ಶಿಫ್ಟ್ ಆದ ಹಾರ್ದಿಕ್ ಪಾಂಡ್ಯ

1 Min Read
ದೇಶಪ್ರಮುಖವಿದೇಶ

AI ನಂಬಿ‌ ಕೆಟ್ಟ ಫೋರ್ಡ್! 350 ಅನುಭವಿ ಟೆಕ್ಕಿಗಳ ಮರುನೇಮಕ

2 Min Read
ಕರ್ನಾಟಕದೇಶಪ್ರಮುಖವಿದೇಶ

Whatsapp Username ವಾಟ್ಸ್ಯಾಪ್‌ನಲ್ಲಿ ಯೂಸರ್‌ನೇಮ್ ಫೀಚರ್: ನಿಮ್ಮ ಹೆಸರು ಈಗಲೇ ಕಾಯ್ದಿರಿಸಿಕೊಳ್ಳಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?