Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Ram Mandir ಅಯೋಧ್ಯೆ ರಾಮಮಂದಿರ ಕಾಣಿಕೆ ಕಳ್ಳತನ ಪ್ರಕರಣ: ತನಿಖೆಯಲ್ಲಿ ಬಯಲಾಯ್ತು ಶೌಚಾಲಯದ ‘ಸೀಕ್ರೆಟ್’ ಪ್ಲಾನ್!
ಪ್ರಮುಖ

Ram Mandir ಅಯೋಧ್ಯೆ ರಾಮಮಂದಿರ ಕಾಣಿಕೆ ಕಳ್ಳತನ ಪ್ರಕರಣ: ತನಿಖೆಯಲ್ಲಿ ಬಯಲಾಯ್ತು ಶೌಚಾಲಯದ ‘ಸೀಕ್ರೆಟ್’ ಪ್ಲಾನ್!

Share
2 Min Read
SHARE

newsics.com| ನ್ಯೂಸಿಕ್ಸ್

ಲಖನೌ: ಅಯೋಧ್ಯೆಯ ಭವ್ಯ ರಾಮಮಂದಿರದ ಕಾಣಿಕೆ ಹಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಚಾರಣೆ ವೇಳೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಮಂದಿರದ ಹುಂಡಿಯಿಂದ ಕದಿಯುತ್ತಿದ್ದ ಕೋಟ್ಯಂತರ ರೂಪಾಯಿ ಹಣವನ್ನು ಆರೋಪಿಗಳು ಸಿಸಿಟಿವಿ ಕಣ್ಗಾವಲಿನಿಂದ ಬಚ್ಚಿಡಲು ಮೊದಲು ಮಂದಿರದ ಶೌಚಾಲಯಗಳಲ್ಲಿ (Toilets) ಅಡಗಿಸಿಡುತ್ತಿದ್ದರು. ಆ ಬಳಿಕ ಯಾರಿಗೂ ಅನುಮಾನ ಬಾರದಂತೆ ಸೂಕ್ತ ಸಮಯ ನೋಡಿಕೊಂಡು ಅಲ್ಲಿಂದ ಹೊರಗೆ ಸಾಗಿಸುತ್ತಿದ್ದರು ಎಂಬ ಆಘಾತಕಾರಿ ಸತ್ಯ ಬಯಲಾಗಿದೆ.

ನ್ಯಾಯಾಲಯದ ಅನುಮತಿಯ ಮೇರೆಗೆ ಪೊಲೀಸರು ಈ ಪ್ರಕರಣದ ಮುಖ್ಯ ಆರೋಪಿ ಅವಿನಾಶ್ ಶುಕ್ಲಾನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಆತ ಕಳ್ಳತನದ ಇಂಚಿಂಚೂ ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ.

ಟ್ರಸ್ಟಿಗಳ ಹೆಸರನ್ನೂ ಉಲ್ಲೇಖಿಸಿದ ಆರೋಪಿ!

ವಿಚಾರಣೆಯ ವೇಳೆ ಅವಿನಾಶ್ ಶುಕ್ಲಾ, ಮಂದಿರದ ಟ್ರಸ್ಟಿ ಅನಿಲ್ ಮಿಶ್ರಾ ಅವರ ಹೆಸರನ್ನೂ ಪ್ರಸ್ತಾಪಿಸಿದ್ದು, ಕಾಣಿಕೆ ಹಣ ಎಣಿಕೆ ಪ್ರಕ್ರಿಯೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸುತ್ತಿದ್ದರು ಎಂದು ಹೇಳಿದ್ದಾನೆ. ಹಣ ಎಣಿಕೆ ಕೊಠಡಿಯ ಒಂದು ಕೀ ತಿನ್ನು ಯಾದವ್ ಎಂಬುವವರ ಬಳಿ ಇದ್ದರೆ, ಮತ್ತೊಂದು ಕೀ ಬ್ಯಾಂಕ್ ಸಿಬ್ಬಂದಿ ಬಳಿ ಇರುತ್ತಿತ್ತು. ಕಾಣಿಕೆ ಹಣ ಲೂಟಿ ಮಾಡುವಾಗ ಒಬ್ಬ ವ್ಯಕ್ತಿ ಹಣವನ್ನು ತೆಗೆದುಕೊಳ್ಳುತ್ತಿದ್ದರೆ, ಉಳಿದ ಆರೋಪಿಗಳು ಆತನ ಸುತ್ತ ನಿಂತು ಯಾರಿಗೂ ಅನುಮಾನ ಬಾರದಂತೆ ಕಾವಲು ಕಾಯುತ್ತಿದ್ದರು. ಸಿಸಿಟಿವಿ ಕ್ಯಾಮೆರಾಗಳು ಎಲ್ಲೆಲ್ಲಿವೆ ಎಂಬ ಸಂಪೂರ್ಣ ಮಾಹಿತಿ ಇದ್ದಿದ್ದರಿಂದ ಆರೋಪಿಗಳು ಕ್ಯಾಮೆರಾ ಕಣ್ಣಿಗೆ ಬೀಳದಂತೆ ಸ್ಕೆಚ್ ಹಾಕಿದ್ದರು.

ಕದ್ದ ಕಾಣಿಕೆ ಹಣದಿಂದ ಜಮೀನು, ಐಷಾರಾಮಿ ಮನೆ ಖರೀದಿ!

ದೇವರ ಹಣವನ್ನು ಕಳ್ಳತನ ಮಾಡಿ ಆರೋಪಿಗಳು ಕೋಟ್ಯಂತರ ರೂಪಾಯಿ ಬೆಲೆಬಾಳುವ ಆಸ್ತಿ ಮಾಡಿದ್ದಾರೆ. ಕದ್ದ ಹಣದಿಂದ ದೊಡ್ಡ ದೊಡ್ಡ ಭೂಮಿ ಹಾಗೂ ಮನೆಗಳನ್ನು ಖರೀದಿ ಮಾಡಿರುವುದಾಗಿ ಅವಿನಾಶ್ ಒಪ್ಪಿಕೊಂಡಿದ್ದಾನೆ. ಹೀಗಾಗಿ ಪೊಲೀಸರು ಈಗ ಆರೋಪಿಗಳ ಆಸ್ತಿ ಹಾಗೂ ಬ್ಯಾಂಕ್ ವಹಿವಾಟುಗಳ ಇತಿಹಾಸವನ್ನು ಜಾಲಾಡುತ್ತಿದ್ದಾರೆ.

ಎಫ್‌ಐಆರ್ ದಾಖಲಾಗುವ ಮುನ್ನವೇ 58 ಲಕ್ಷ ವಶ!

ದೇಗುಲದ ಹುಂಡಿ ಹಣದ ದುರ್ಬಳಕೆ ತಡೆಯಲು ಉತ್ತರ ಪ್ರದೇಶ ಸರ್ಕಾರ ಜೂನ್ 13 ರಂದು ವಿಶೇಷ ತನಿಖಾ ತಂಡವನ್ನು (SIT) ರಚಿಸಿತ್ತು. ಆದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕೃತ ಎಫ್‌ಐಆರ್ ದಾಖಲಾಗುವ ಮೊದಲೇ, ಜೂನ್ 5 ರಂದೇ ಅವಿನಾಶ್ ಶುಕ್ಲಾ ಮನೆಯಿಂದ 58 ಲಕ್ಷ ರೂಪಾಯಿ ನಗದನ್ನು ಟ್ರಸ್ಟ್ ವಶಪಡಿಸಿಕೊಂಡಿತ್ತು ಎಂಬ ಇಂಟರೆಸ್ಟಿಂಗ್ ಮಾಹಿತಿ ಬೆಳಕಿಗೆ ಬಂದಿದೆ. ಕಾನೂನು ಪ್ರಕ್ರಿಯೆ ಆರಂಭವಾಗುವ ಮುನ್ನವೇ ಹಣ ರಿಕವರಿ ಮಾಡುವ ಪ್ರಯತ್ನ ನಡೆದಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ.

 

Gold Price ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ! ಇಲ್ಲಿದೆ ಇವತ್ತಿನ ಚಿನ್ನದ ಬೆಲೆ

TAGGED:#Ayodhya #Ram mandir #robbery #Uttar Pradesh#theft case
Share This Article
Facebook Twitter Copy Link Print
Previous Article Gold Price ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ! ಇಲ್ಲಿದೆ ಇವತ್ತಿನ ಚಿನ್ನದ ಬೆಲೆ
Next Article Wild elephant ರೈಲ್ವೆ ಬ್ಯಾರಿಕೇಡ್‌ ಕಂಬಿಗಳ ನಡುವೆ ಸಿಲುಕಿದ ಕಾಡಾನೆ – ರಕ್ಷಣಾ ಸಿಬ್ಬಂದಿ ಗಳಿಂದ ಕಾರ್ಯಾಚರಣೆ

Popular Posts

Highcourt Order ಶಾಲಾ ಬಸ್‌ನಲ್ಲಿ ಮಗು ಪೋಷಕರ ಕೈಸೇರುವವರೆಗೂ ಶಾಲೆಯದ್ದೇ ಜವಾಬ್ದಾರಿ: ಹೈಕೋರ್ಟ್ ಆದೇಶ

3 Min Read

Robbery attempt ಮೈಸೂರು‌- ಬೆಂಗಳೂರು ಹೆದ್ದಾರಿಯಲ್ಲಿ ದರೋಡೆಗೆ ಯತ್ನ, ಗುಂಡು ಹಾರಿಸಿದ ಮುಸುಕುಧಾರಿಗಳು: ಕೂದಲೆಳೆ ಅಂತರದಲ್ಲಿ ಟ್ರಕ್ ಚಾಲಕ‌ ಪಾರು

1 Min Read

Youtuber Dhanya ನಾನೇನೂ ಜೈಲಿಗೆ ಹೋಗಿಲ್ಲ, ತಂದೆ- ತಾಯಿಗೆ‌ ಕಾಟ ಕೊಡಬೇಡಿ ಎಂದ ಕಾಸರಗೋಡು ಯೂಟ್ಯೂಬರ್ ಧನ್ಯ!

1 Min Read

Life saver nurses ಕಾರಿನಲ್ಲೇ ಹೃದಯಾಘಾತ: ಚಲಿಸುತ್ತಿದ್ದ ಬಸ್‌ನಿಂದ ಜಿಗಿದು ಜೀವ ಉಳಿಸಿದ ಇಬ್ಬರು ನರ್ಸ್‌ಗಳಿಗೆ ಭಾರೀ ಶ್ಲಾಘನೆ!

1 Min Read

You Might Also Like

ಕರ್ನಾಟಕಪ್ರಮುಖ

Bellary ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ: ಕಾಮುಕ ಉಪನ್ಯಾಸಕನ ಬಂಧನ

1 Min Read
ದೇಶಪ್ರಮುಖವಿದೇಶವೈರಲ್

Stress job ಕಾರ್ಪೊರೇಟ್ ಕಂಪನಿ‌ ಸ್ಟ್ರೆಸ್ ತಾಳಲಾರದೆ ದೊಡ್ಡ ಸ್ಯಾಲರಿಯ ಜಾಬ್ ಬಿಟ್ಟು ವೇಟ್ರಸ್ ಆದ ಯುವತಿ! ವಿಡಿಯೋ ನೋಡಿ

3 Min Read
ಕರ್ನಾಟಕಪ್ರಮುಖ

Karnataka government| ಪ್ರಜಾಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಹರ್ಷಗುಪ್ತ ನೇಮಕ

1 Min Read
ಕರ್ನಾಟಕದೇಶಪ್ರಮುಖ

Youtuber| ಕುಡಿದು ಕಾರ್ ಚಲಾಯಿಸಿದ ಖ್ಯಾತ ಯೂಟ್ಯೂಬರ್ – ಪ್ರಕರಣ ದಾಖಲು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?