newsics.com| ನ್ಯೂಸಿಕ್ಸ್
ಆಷಾಢ ಮಾಸ ಅಂದ್ರೆ ಚಾಮುಂಡಿ ಬೆಟ್ಟದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿರುತ್ತೆ. ಜುಲೈ 17 ಆಷಾಢ ಶುಕ್ರವಾರದ ಮೊದಲ ವಾರವಾಗಿದ್ದು,. ಆಷಾಢದ ನಾಲ್ಕು ವಾರಗಳು ಕೂಡ ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬರುತ್ತದೆ.
ಹೀಗಾಗಿ ಇದರ ಸಿದ್ಧತೆ ಕುರಿತು ಸಚಿವ ಯತೀಂದ್ರ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ಬೆಟ್ಟಕ್ಕೆ ಬರುವ ಭಕ್ತರಿಗೆ ಅನುಕೂಲವಾಗುವಂತೆ ಟಿಕೆಟ್ ವ್ಯವಸ್ಥೆ, ಪಾರ್ಕಿಂಗ್ ಹಾಗೂ ಬಸ್ ವ್ಯವಸ್ಥೆ ಬಗ್ಗೆ ಕೆಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಸಚಿವರು, ಆಷಾಢ ಶುಕ್ರವಾರಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತ ಸಾಗರವೇ ಹರಿದು ಬರುತ್ತದೆ. ಹೀಗಾಗಿ ಅಧಿಕಾರಿಗಳ ಜೊತೆ ಸಭೆ ಮಾಡಿದ್ದು, ಕಳೆದ ಬಾರಿ ಕೆಲವು ಸಮಸ್ಯೆ ಉಂಟಾಗಿತ್ತು. ಈ ಬಾರಿ ಯಾವುದೇ ಸಮಸ್ಯೆ ಆಗದಂತೆ ಸಕಲ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು.
ಆಷಾಢ ಮಾಸದಲ್ಲಿ ಶುಕ್ರವಾರ, ಶನಿವಾರ ಹಾಗೂ ಭಾನುವಾರದ ಸಮಯದಲ್ಲಿ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ನಿಷೇಧ ಹೇರಲಾಗಿದೆ. 2 ಸಾವಿರ ಟಿಕೆಟ್ ಪಡೆದವರಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು.
ಭಕ್ತರ ಸುರಕ್ಷತೆಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಂಚಾರ ದಟ್ಟಣೆ ನಿಯಂತ್ರಣದ ಜೊತೆಗೆ ಸೂಕ್ತ ಭದ್ರತೆ ಕಲ್ಪಿಸಲಾಗುವುದು. ವಿಐಪಿಗಳಿಗೆ ಬೆಳಿಗ್ಗೆ 5.30ರಿಂದ 9.30ರವರೆಗೆ ಮಾತ್ರ ಪ್ರವೇಶಾವಕಾಶ ಇರಲಿದೆ ಎಂದು ಸಚಿವ ಯತೀಂದ್ರ ತಿಳಿಸಿದ್ದಾರೆ.