Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > High court| ಆದಾಯ ಮೀರಿ ಆಸ್ತಿ ಗಳಿಕೆ ಆರೋಪ – ಎಸ್.ಈಶ್ವರಪ್ಪ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಕೋರ್ಟ್
ಕರ್ನಾಟಕಪ್ರಮುಖ

High court| ಆದಾಯ ಮೀರಿ ಆಸ್ತಿ ಗಳಿಕೆ ಆರೋಪ – ಎಸ್.ಈಶ್ವರಪ್ಪ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಕೋರ್ಟ್

Share
1 Min Read
SHARE

newsics.com| ನ್ಯೂಸಿಕ್ಸ್

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪಗೆ ಸಂಕಷ್ಟ ಎದುರಾಗಿದೆ. ತಮ್ಮ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದು ಕೋರಿ ಕೆ.ಎಸ್.ಈಶ್ವರಪ್ಪ‌ ಸಲ್ಲಿಸಿದ್ದ ಅರ್ಜಿಯನ್ನು ಇಂದು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಕೆ.ಎಸ್.ಈಶ್ವರಪ್ಪ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಅವರು ಅರ್ಜಿ ಸಲ್ಲಿಸಿದ್ದು, ಲೋಕಾಯುಕ್ತ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆಗೆ ಮನವಿ ಮಾಡಿದರು. ಬಳಿಕ ಲೋಕಾಯುಕ್ತ ಎಸ್​ಪಿಪಿ ವೆಂಕಟೇಶ್ ಅರಬಟ್ಟಿ ಪ್ರತಿವಾದ ಮಂಡಿಸಿದ್ದು, ತನಿಖೆಗೆ ಸಹಕರಿಸಿದರೆ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಕೋರ್ಟ್​​ ಮುಂದೆ ಸ್ಪಷ್ಟಪಡಿಸಿದರು. ಈ ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಕೇಸ್ ರದ್ದು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ ಮೂಲದ ವಕೀಲ ಬಿ.ವಿನೋದ್‌, ಈಶ್ವರಪ್ಪ, ಅವರ ಪತ್ರ ಕೆ.ಇ.ಕಾಂತೇಶ್‌ ಹಾಗೂ ಕಾಂತೇಶ್‌ ಪತ್ನಿ ಶಾಲಿನಿ ವಿರುದ್ಧ ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಆರೋಪ ಮಾಡಿ ಲೋಕಾಯುಕ್ತ ಪೊಲೀಸರ ಮುಂದೆ ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ‘ಬಿ’ ರಿಪೋರ್ಟ್‌ ಸಲ್ಲಿಸಿದ್ದರು. ಆನಂತರ ವಿನೋದ್‌ ಆದನ್ನು ಪ್ರಶ್ನಿಸಿ ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದರು.

ತದನಂತರ ನ್ಯಾಯಾಲಯವು ಮರು ತನಿಖೆ ಮಾಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು. ಆ ಆದೇಶ ಆಧರಿಸಿ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಹೊಸದಾಗಿ ಎಫ್‌ಐಆರ್‌ ದಾಖಲಿಸಿದ್ದರು. ತದನಂತರ ಈಶ್ವರಪ್ಪನವರು ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸುವಂತೆ ಹೈಕೋರ್ಟ್‌ ಮೆಟ್ಟಿಲೇರಿದ್ದು, ಇದೀಗ ಹೈಕೋರ್ಟ್ ಅರ್ಜಿಯನ್ನು ವಜಾ ಮಾಡಿದೆ.

Share This Article
Facebook Twitter Copy Link Print
Previous Article Koppala ಅಂಜನಾದ್ರಿ ಬೆಟ್ಟಕ್ಕೆ ರಾಹುಲ್​ ದ್ರಾವಿಡ್​​ ದಂಪತಿ ಭೇಟಿ – ವಿಶೇಷ ಪೂಜೆ ಸಲ್ಲಿಕೆ
Next Article Instagram ‘ಪಡೆದುಕೊಂಡ ಮೇಲೆ ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ’ ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ವೈರಲ್

Popular Posts

Newdelhi| 36 ವರ್ಷಗಳಲ್ಲಿ 300ಕ್ಕೂ ಅಧಿಕ ಹೋಟೆಲ್‌ಗಳಿಗೆ ವಂಚಿಸಿದ್ದ ವೃದ್ಧ ಅರೆಸ್ಟ್

1 Min Read

Sucide| ಗೆಳೆಯನ ಜೊತೆ ವಿಡಿಯೋ ಕಾಲ್ ನಲ್ಲಿ ‘ನಿನಗೆ ನನ್ನ ಕಡೆಯಿಂದ ಇದೇ ಬರ್ತ್ ಡೇ ಗಿಫ್ಟ್’ ಎಂದು ದುರಂತ ಅಂತ್ಯ ಕಂಡ ಕ್ಲಬ್ ಡ್ಯಾನ್ಸರ್

2 Min Read

Instagram ‘ಪಡೆದುಕೊಂಡ ಮೇಲೆ ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ’ ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ವೈರಲ್

1 Min Read

High court| ಆದಾಯ ಮೀರಿ ಆಸ್ತಿ ಗಳಿಕೆ ಆರೋಪ – ಎಸ್.ಈಶ್ವರಪ್ಪ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಕೋರ್ಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Koppala ಅಂಜನಾದ್ರಿ ಬೆಟ್ಟಕ್ಕೆ ರಾಹುಲ್​ ದ್ರಾವಿಡ್​​ ದಂಪತಿ ಭೇಟಿ – ವಿಶೇಷ ಪೂಜೆ ಸಲ್ಲಿಕೆ

0 Min Read
filmಕರ್ನಾಟಕಪ್ರಮುಖಮನರಂಜನೆ

Realityshow| ಈ ಬಾರಿಯಾದರೂ ಬಿಗ್‌ ಬಾಸ್‌ ಮನೆಗೆ ಕಾಲಿಡುತ್ತಾರ ಮೇಘಾ ಶೆಟ್ಟಿ??ಇಲ್ಲಿದೆ ನೋಡಿ ಉತ್ತರ

2 Min Read
Crimeಕರ್ನಾಟಕಪ್ರಮುಖ

Actor ದರ್ಶನ್‌ಗೆ ಸುಪ್ರೀಂ ಕೋರ್ಟ್ ಮತ್ತೆ ಶಾಕ್‌ – 1 ವರ್ಷ ಜಾಮೀನಿಗೆ ಅರ್ಜಿ ಸಲ್ಲಿಸದ ಹಾಗೆ ತಡೆ

1 Min Read

Minister Shobha ರಾಜ್ಯ ಸರ್ಕಾರದಿಂದ ಅಕ್ರಮ ಬಾಂಗ್ಲಾ ಮತದಾರರನ್ನು ಸಕ್ರಮ ಮಾಡ್ತಿದೆ: ಶೋಭಾ ಕರಂದ್ಲಾಜೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?