newsics.com | ನ್ಯೂಸಿಕ್ಸ್
ಬೆಂಗಳೂರು: ಜ್ಯೋತಿಷಿ ಆರ್ಯವರ್ಧನ್ ಗುರೂಜಿ (Aryavardhan Guruji) ಇದೀಗ ಮತ್ತೊಮ್ಮೆ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ.
ಸಂದರ್ಶನವೊಂದರಲ್ಲಿ ಲಕ್ಷ್ಮೀ ದೇವಿ ಕುರಿತು ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ, ಅವರ ವಿರುದ್ಧ ಬೆಂಗಳೂರಿನ ಶಂಕರಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಹೇಳಿಕೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದು, ಮಹಿಳೆಯರ ಗೌರವಕ್ಕೂ ಅವಮಾನವಾಗಿದೆ ಎಂದು ಆರೋಪಿಸಿ ಕರ್ನಾಟಕ ಗೋವು ರಕ್ಷಕರ ಸೇನೆ ಕ್ರಮಕ್ಕೆ ಆಗ್ರಹಿಸಿದೆ.
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಸಂದರ್ಶನದ ವಿಡಿಯೊದಲ್ಲಿ, ಆರ್ಯವರ್ಧನ್ ಗುರೂಜಿ ಲಕ್ಷ್ಮೀ ದೇವಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಅವರು ಮಾನವ ದೇಹದ ಒಂದು ಅಂಗವನ್ನು ಉಲ್ಲೇಖಿಸಿ ಪೂಜೆ ಮಾಡಬೇಕು ಎಂಬ ಅರ್ಥ ಬರುವಂತೆ ಮಾತನಾಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
ಗೋವು ರಕ್ಷಕರ ಸೇನೆಯಿಂದ ಪೊಲೀಸ್ ದೂರು
ಕರ್ನಾಟಕ ಗೋವು ರಕ್ಷಕರ ಸೇನೆ ಪರ ಸುಮನ್ ಎಂಬವರು ಬೆಂಗಳೂರಿನ ಶಂಕರಪುರಂ ಪೊಲೀಸ್ ಠಾಣೆಗೆ ಲಿಖಿತ ದೂರು ಸಲ್ಲಿಸಿದ್ದಾರೆ.
ಜತೆಗೆ ಆರ್ಯವರ್ಧನ್ ಗುರೂಜಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ದೂರು ಸ್ವೀಕರಿಸಿರುವ ಶಂಕರಪುರಂ ಪೊಲೀಸರು ಆರ್ಯವರ್ಧನ್ ಗುರೂಜಿಗೆ ವಿಚಾರಣೆಗೆ ಹಾಜರಾಗುವಂತೆ ಮೌಖಿಕವಾಗಿ ಸೂಚನೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಈ ವಿವಾದಕ್ಕೆ ಸಂಬಂಧಿಸಿದಂತೆ ಆರ್ಯವರ್ಧನ್ ಗುರೂಜಿ ಕಡೆಯಿಂದ ಯಾವುದೇ ಸ್ಪಷ್ಟನೆ ಬಂದಿಲ್ಲ.
ASTRO ಇಂದು ಶನಿವಾರ ಪ್ರೀತಿ ಯೋಗ, ಆಯುಷ್ಮಾನ್ ಯೋಗ: ಈ ಐದು ರಾಶಿಗಳ ಜನ ಅದೃಷ್ಟವಂತರು