Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vaibhav ಮ್ಯಾಂಚೆಸ್ಟರ್‌ನಲ್ಲಿ ವೈಭವ್ ಸೂರ್ಯವಂಶಿ ಪದಾರ್ಪಣೆ: ಸಚಿನ್ ದಾಖಲೆ ಅಳಿಸಿದ ಬಾಲಕ!
ದೇಶಪ್ರಮುಖಮನರಂಜನೆವಿದೇಶ

Vaibhav ಮ್ಯಾಂಚೆಸ್ಟರ್‌ನಲ್ಲಿ ವೈಭವ್ ಸೂರ್ಯವಂಶಿ ಪದಾರ್ಪಣೆ: ಸಚಿನ್ ದಾಖಲೆ ಅಳಿಸಿದ ಬಾಲಕ!

Share
3 Min Read
SHARE

newsics.com | ನ್ಯೂಸಿಕ್ಸ್

ಭಾರತೀಯ ಕ್ರಿಕೆಟ್‌ನಲ್ಲಿ ನವ ಯುಗ ಶನಿವಾರ (ಜು.4) ರಿಂದ ಆರಂಭವಾಗಿದೆ. ಇಂಗ್ಲೆಂಡ್‌ ಪ್ರವಾಸದಲ್ಲಿ ಟೀಮ್ ಇಂಡಿಯಾ ಎರಡನೇ ಪಂದ್ಯವನ್ನು ಆಡಲು ಸಜ್ಜಾಗಿದೆ.

ಮಾರ್ಚ್ 27, 2011 ರಂದು ಬಿಹಾರದ ಸಮಸ್ತಿಪುರದಲ್ಲಿ ಜನಿಸಿದ 15 ವರ್ಷದ ಪೋರ ವೈಭವ್ ಸೂರ್ಯವಂಶಿ ಇಂಗ್ಲೆಂಡ್‌ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲಿದ್ದಾರೆ.ಈ ಮೂಲಕ ಭಾರತ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಅತ್ಯಂತ ಚಿಕ್ಕ ವಯಸ್ಸಿನಲ್ಲೇ ಕ್ರಿಕೆಟ್‌ನತ್ತ ಆಕರ್ಷಿತರಾದ ವೈಭವ್ ಕೇವಲ 9ನೇ ವಯಸ್ಸಿನಲ್ಲಿ ವೃತ್ತಿಪರ ಕ್ರಿಕೆಟ್ ತರಬೇತಿಯನ್ನು ಆರಂಭಿಸಿದರು. ಅವರ ಅಪ್ರತಿಮ ಬ್ಯಾಟಿಂಗ್ ಪ್ರತಿಭೆಯಿಂದಾಗಿ ಅವರಿಗೆ ಅವಕಾಶಗಳು ಸಿಗಲು ಆರಂಭವಾದವು. 2024ರ ಆರಂಭದಲ್ಲಿ ಕೇವಲ 12 ವರ್ಷ 284 ದಿನಗಳ ಪ್ರಾಯದಲ್ಲೇ ಬಿಹಾರ ತಂಡದ ಪರವಾಗಿ ರಣಜಿ ಟ್ರೋಫಿ ಆಡುವ ಮೂಲಕ ವೈಭವ್ ಈ ಮೊದಲೇ ಇತಿಹಾಸ ನಿರ್ಮಿಸಿದ್ದಾರೆ. ದೇಶಿ ಕ್ರಿಕೆಟ್ ಹಾಗೂ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕಿರಿಯ ವಯಸ್ಸಿಗೆ ಹರಾಜಾದ ಆಟಗಾರ ಎಂಬ ಹೆಗ್ಗಳಿಕೆ ಸಹ ಇವರ ಹೆಸರಿನಲ್ಲಿಯೇ ಇದೆ. ಈಗ ಇವರ ಮುಕುಟಕ್ಕೆ ಮತ್ತೊಂದು ಗರಿ ಸಂದಿದೆ.

ಚಿಕ್ಕವರಿದ್ದಾಗ ಬ್ಯಾಟ್ ಹಿಡಿದ ಕಂಡ ಕನಸು ಇಂದು ದೂರದ ಮ್ಯಾಂಚೆಸ್ಟರ್‌ನಲ್ಲಿ ಸಕಾರವಾಗಲಿದೆ. ವೈಭವ್ ಸೂರ್ಯವಂಶಿ ಈಗ ಅಂತಾರಾಷ್ಟ್ರೀಯ ಟಿ20 ಪಂದ್ಯಗಳಿಗೆ ಪದಾರ್ಪಣೆ ಮಾಡಿದ್ದಾರೆ. ಈ ಮೂಲಕ ಇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಬಿಹಾರದ ಎಡಗೈ ಬ್ಯಾಟರ್ ವೈಭವ್ ಸೂರ್ಯವಂಶಿ ಭಾರತೀಯ ಹಿರಿಯರ ಕ್ರಿಕೆಟ್ ತಂಡಕ್ಕೆ ಪದಾರ್ಪಣೆ ಮಾಡಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

​ಕೇವಲ 15 ವರ್ಷ 99 ದಿನಗಳ ವಯಸ್ಸಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ವೈಭವ್, ಭಾರತದ ಪರ ಅತ್ಯಂತ ಕಿರಿಯ ವಯಸ್ಸಿನಲ್ಲಿ ಪದಾರ್ಪಣೆ ಮಾಡಿದ ಪುರುಷ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ 1989ರಲ್ಲಿ 16 ವರ್ಷ 205 ದಿನಗಳ ಪ್ರಾಯದಲ್ಲಿ ಪದಾರ್ಪಣೆ ಮಾಡಿದ್ದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ 37 ವರ್ಷಗಳ ಹಳೆಯ ದಾಖಲೆಯನ್ನು ಅವರು ಮುರಿದಿದ್ದಾರೆ.

​ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಸಂಜು ಸ್ಯಾಮ್ಸನ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ವೈಭವ್, ಅಭಿಷೇಕ್ ಶರ್ಮಾ ಅವರೊಂದಿಗೆ ಭಾರತದ ಇನ್ನಿಂಗ್ಸ್ ಆರಂಭಿಸಿದರು. ತಮ್ಮ ಚೊಚ್ಚಲ ಪಂದ್ಯದಲ್ಲೇ ಸ್ಫೋಟಕ ಆಟದ ಮುನ್ಸೂಚನೆ ನೀಡಿದ ವೈಭವ್, ಕೇವಲ 10 ಎಸೆತಗಳಲ್ಲಿ 2 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 14 ರನ್ ಗಳಿಸಿ ಸ್ಯಾಮ್ ಕರನ್ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.

ಸಚಿನ್ ದಾಖಲೆ ಅಳಿಸಿದ ವೈಭವ್

ಸಚಿನ್ ತೆಂಡೂಲ್ಕರ್ 1989 ರಲ್ಲಿ ಪಾಕಿಸ್ತಾನ ವಿರುದ್ಧ ತಮ್ಮ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದರು. ಆಗ ಅವರಿಗೆ ಕೇವಲ 16 ವರ್ಷ 205 ದಿನಗಳು. ಈಗ ಈ ದಾಖಲೆ ವೈಭವ್ ಸೂರ್ಯವಂಶಿ ಅವರ ಪಾಲಾಗಿದೆ. ವೈಭವ್ ಸೂರ್ಯವಂಶಿ 15 ವರ್ಷ 90 ದಿನಗಳಲ್ಲಿ ಬ್ಲ್ಯೂ ಜೆರ್ಸಿಯನ್ನು ತೊಟ್ಟು ಸಾಧನೆ ಮಾಡಿದ್ದಾರೆ.

ಇತ್ತೀಚೆಗೆ ಭಾರತದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ, ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಆಧಾರವಾಗಿದ್ದ ವೈಭವ್, ಇನ್ನು ಬ್ಲ್ಯೂ ಜೆರ್ಸಿಯಲ್ಲೂ ಮಿಂಚಲು ಸಿದ್ಧರಾಗಿದ್ದಾರೆ. ವೈಭವ್ ಸೂರ್ಯವಂಶಿ 19ನೇ ಆವೃತ್ತಿಯ ಐಪಿಎಲ್‌ ಅತಿ ಹೆಚ್ಚು ರನ್‌ ಬಾರಿಸಿದ ದಾಖಲೆಯನ್ನು ಸಹ ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ.

19ನೇ ಆವೃತ್ತಿಯ ಐಪಿಎಲ್‌ನಲ್ಲಿ ವೈಭವ್ ಆಡಿದ 16 ಪಂದ್ಯಗಳಲ್ಲಿ 48ರ ಸರಾಸರಿಯಲ್ಲಿ 776 ರನ್‌ ಕಲೆ ಹಾಕಿದ್ದಾರೆ. ಈ ವೇಳೆ ವೈಭವ್ ಸೂರ್ಯವಂಶಿ 1 ಶತಕ, 5 ಅರ್ಧಶತಕ ಸಹ ಸಿಡಿಸಿದ್ದಾರೆ. ಅಲ್ಲದೆ ಒಂದೇ ಐಪಿಎಲ್‌ ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ಸಹ ಇವರ ಹೆಸರಿನಲ್ಲಿಯೇ ಇದೆ. ಇವರು ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ 72 ಸಿಕ್ಸರ್ ಬಾರಿಸಿ, ಕ್ರಿಸ್‌ ಗೇಲ್‌ ಅವರ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಕ್ರಿಸ್‌ ಗೇಲ್‌ 2013ರಲ್ಲಿ 59 ಸಿಕ್ಸರ್ ಬಾರಿಸಿದ ಹೆಗ್ಗಳಿಕೆ ಹೊಂದಿದ್ದರು. ಈಗ ಈ ದಾಖಲೆ ವೈಭವ್ ಪಾಲಾಗಿದೆ.

Telegram| ಚಲನಚಿತ್ರ, ಒಟಿಟಿ ಪೈರಸಿ : ಟೆಲಿಗ್ರಾಂ ಸಂಸ್ಥೆಗೆ ಕೇಂದ್ರ ಸರ್ಕಾರದಿಂದ ನೋಟಿಸ್! 15ದಿನದೊಳಗೆ ಆ್ಯಕ್ಷನ್ ಟೇಕನ್ ರಿಪೋರ್ಟ್ ಸಲ್ಲಿಸುವಂತೆ ಗಡುವು

https://www.newsics.com/2026/07/04/shocking-family-members-strip-woman-naked-parade-her-wearing-a-garland-of-slipper

 

Rajasthan| ರಿಕ್ಷಾ ಹತ್ತಿದ 13ರ ಬಾಲಕಿಯನ್ನು ಮಾರಾಟ ಮಾಡಿದ ಡ್ರೈವರ್​ : 30 ಕಾಮುಕರ ಅಟ್ಟಹಾಸ: 4 ಹೋಟೆಲ್​ ನೆಲಸಮ

TAGGED:Vaibhav Suryavanshi makes his debut in Manchester: The boy who broke Sachin's record!
Share This Article
Facebook Twitter Copy Link Print
Previous Article Chikkamagaluru ಪ್ರೀತಿ ನಿರಾಕರಿಸಿದ ಅಪ್ರಾಪ್ತ ಬಾಲಕಿ ಮೇಲೆ ಹಲ್ಲೆ, ಯುವಕ ಪೊಲೀಸ್ ವಶಕ್ಕೆ
Next Article Actress Rambha ನಡೆದಾಡಲೂ ಕಷ್ಟಪಡ್ತಿರೋ ರವಿಚಂದ್ರನ್ ಸಿನಿಮಾ ನಾಯಕಿ! ಏನಾಯ್ತು ರಂಭಾಗೆ? ವಿಡಿಯೋ ನೋಡಿ

Popular Posts

Udupi 70 ಲಕ್ಷ ರೂ. ಪಡೆದು ಉದ್ಯಮಿಗೆ ವಂಚನೆ : ಮುಸ್ಲಿಂ ಮಹಿಳೆಯ ಬಂಧನ

1 Min Read

Dubai ಬುರ್ಜ್ ಖಲೀಫಾದಲ್ಲಿ AI ಕಂಪನಿ ಸ್ಥಾಪಿಸಿದ 14 ವರ್ಷದ ಹುಡುಗ!

2 Min Read

E20 ಪೆಟ್ರೋಲ್ ಬಳಸಿದರೆ ವಾಹನದ ಮೈಲೇಜ್ ಕಡಿಮೆಯಾಗುತ್ತಾ? ಸರ್ಕಾರ ಹೇಳಿದ್ದೇನು

2 Min Read

Actress Rambha ನಡೆದಾಡಲೂ ಕಷ್ಟಪಡ್ತಿರೋ ರವಿಚಂದ್ರನ್ ಸಿನಿಮಾ ನಾಯಕಿ! ಏನಾಯ್ತು ರಂಭಾಗೆ? ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

Chikkamagaluru ಪ್ರೀತಿ ನಿರಾಕರಿಸಿದ ಅಪ್ರಾಪ್ತ ಬಾಲಕಿ ಮೇಲೆ ಹಲ್ಲೆ, ಯುವಕ ಪೊಲೀಸ್ ವಶಕ್ಕೆ

2 Min Read
ಕರ್ನಾಟಕಪ್ರಮುಖ

Mass loss of life ಜ್ಯುವೆಲರಿ ಮಳಿಗೆ ಮಾಲೀಕನಿಗೆ ಆರ್ಥಿಕ ಸಂಕಷ್ಟ: ಮೂವರ ಸಾಮೂಹಿಕ ಆತ್ಮ*ಹ*ತ್ಯೆ

2 Min Read
Crimeದೇಶಪ್ರಮುಖ

SHOCKING| ಪತಿಯನ್ನು ಕೊಂದು ಮನೆಯೊಳಗಿನ ಬಾತ್‌ರೂಂ ನೆಲದಡಿ ಹೂತ ಪತ್ನಿ – 45 ದಿನಗಳ ಬಳಿಕ ಪ್ರಕರಣ ಬೆಳಕಿಗೆ

2 Min Read
ಪ್ರಮುಖವಿದೇಶ

Iran ಮಾಜಿ ಸುಪ್ರೀಂ ಲೀಡರ್ ಖಮೇನಿ ಮಹಾ ಅಂತ್ಯಕ್ರಿಯೆ : 14 ತಿಂಗಳ ಮೊಮ್ಮಗಳ ಶವಪೆಟ್ಟಿಗೆ ನೋಡಿ ಕಣ್ಣೀರಿಟ್ಟ ಇರಾನ್ ನಾಗರಿಕರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?