newsics.com | ನ್ಯೂಸಿಕ್ಸ್
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾನೂನು ರಕ್ಷಕನೇ ಭಕ್ಷಕನಾದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದಡಿ ಮಂಕಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (PSI) ಅಭಿನಂದನ್‌ನನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೂಲಗಳ ಪ್ರಕಾರ, ಯಲ್ಲಾಪುರ ಮೂಲದ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಪಿಎಸ್‌ಐ ಅಭಿನಂದನ್ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ಕುರಿತು ಸಂತ್ರಸ್ತ ಅಪ್ರಾಪ್ತ ಬಾಲಕಿಯು ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಿಸಿದ್ದರು.
ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು
ಬಾಲಕಿಯ ದೂರಿಗೆ ತಕ್ಷಣವೇ ಸ್ಪಂದಿಸಿದ ಭಟ್ಕಳ ನಗರ ಠಾಣೆಯ ಪೊಲೀಸರು ಆರೋಪಿ ಪಿಎಸ್‌ಐ ಅಭಿನಂದನ್ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು, ಸದ್ಯ ಬಂಧನ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ತನಿಖೆ ವೇಳೆ ಅಸಲಿ ಸತ್ಯ ಹೊರಗೆ ಬರಲಿದೆ.
ಬಂಧಿತ ಪಿಎಸ್‌ಅಭಿನಂದನ್‌ನನ್ನು ಮುಂದಿನ ಕಾನೂನು ಕ್ರಮಕ್ಕಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ಇಲಾಖೆಯ ಅಧಿಕಾರಿಯೊಬ್ಬರೇ ಇಂತಹ ಹೀನ ಕೃತ್ಯವೆಸಗಿ ಬಂಧನಕ್ಕೊಳಗಾಗಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬೇಲಿಯೇ ಎದ್ದು ಹೊಲ ಮೇಯ್ದ ಕತೆ ಇದಾಗಿದ್ದು, ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎಂಬ ಆಗ್ರಹ ಜೋರಾಗಿದೆ.
Misbehave in metro ಮೆಟ್ರೋದಲ್ಲಿ ಮಹಿಳೆ ಅಂಗಾಂಗ ಸ್ಪರ್ಶಿಸಿದ ಸಹಪ್ರಯಾಣಿಕ! ವಿಡಿಯೋ ನೋಡಿ