Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Telangana ವಿಡಿಯೋ ಕಾಲ್‌ನಲ್ಲಿ ಪತ್ನಿಗೆ ಸಾವು ತೋರಿಸಿದ ಪತಿ
ದೇಶಪ್ರಮುಖ

Telangana ವಿಡಿಯೋ ಕಾಲ್‌ನಲ್ಲಿ ಪತ್ನಿಗೆ ಸಾವು ತೋರಿಸಿದ ಪತಿ

Share
1 Min Read
SHARE

newsics.com| ನ್ಯೂಸಿಕ್ಸ್

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ರೈಲ್ವೆ ಹಳಿಗಳ ಮೇಲೆ ನಿಂತು, ತನ್ನ ಪತ್ನಿಗೆ ವಿಡಿಯೋ ಕಾಲ್ ಮಾಡುತ್ತಲೇ ರೈಲಿಗೆ ಸಿಲುಕಿ ಪ್ರಾಣ ಕಳೆದುಕೊಂಡಿರುವ ಘಟನೆ ತೆಲಂಗಾಣದ ವಾರಂಗಲ್ ಜಿಲ್ಲೆಯಲ್ಲಿ ನಡೆದಿದೆ.

ಹನುಮಕೊಂಡ ಜಿಲ್ಲೆಯ ಕಾಜಿಪೇಟೆ ದರ್ಗಾ ಸಮೀಪದ ನಿವಾಸಿ ಲಾವುಡ್ಯಾ ರಾಜೇಶ್ ನಾಯಕ್ (45) ದುಡುಕಿನ ನಿರ್ಧಾರ ತೆಗೆದುಕೊಂಡವರು. ರಾಜೇಶ್ ನಾಯಕ್ ಅವರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಡಾಕ್ಯುಮೆಂಟ್ ರೈಟರ್ ಆಗಿ ಕೆಲಸ ಮಾಡ್ತಿದ್ದರು. ಕಳೆದ ಕೆಲವು ಸಮಯದಿಂದ ಆಸ್ತಿ ಹಂಚಿಕೆ ವಿಚಾರವಾಗಿ ರಾಜೇಶ್ ಮತ್ತು ಅವರ ಪತ್ನಿಯ ನಡುವೆ ಗಲಾಟೆ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ರಾತ್ರಿ ದಂಪತಿ ನಡುವೆ ಆಸ್ತಿ ವಿಚಾರವಾಗಿ ಮತ್ತೆ ಜಗಳ ನಡೆದಿದೆ. ಇದರಿಂದ ಮನನೊಂದ ರಾಜೇಶ್ ರಾತ್ರಿ 10:30ರ ಸುಮಾರಿಗೆ ಮನೆಯಿಂದ ಹೊರಬಂದು ರೈಲ್ವೆ ಹಳಿಗಳ ಬಳಿ ಹೋಗಿದ್ದಾರೆ. ಅಲ್ಲಿಂದ ಪತ್ನಿಗೆ ವಿಡಿಯೋ ಕಾಲ್ ಮಾಡಿದ ರಾಜೇಶ್, ಎದುರುಗಡೆ ಬರುತ್ತಿದ್ದ ರೈಲನ್ನು ತೋರಿಸುತ್ತಾ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.

ಆದರೆ ಪತಿ ಮದ್ಯದ ಅಮಲಿನಲ್ಲಿ ಸುಮ್ಮನೆ ಬೆದರಿಸುತ್ತಿರಬಹುದು ಎಂದು ಭಾವಿಸಿದ ಪತ್ನಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಆದರೆ ರಾತ್ರಿಯಿಡೀ ರಾಜೇಶ್ ಮನೆಗೆ ಬಾರದಿದ್ದಾಗ ಕುಟುಂಬಸ್ಥರು ಆತಂಕಗೊಂಡಿದ್ದಾರೆ. ಸೋಮವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ರೈಲ್ವೆ ಹಳಿಗಳ ಮೇಲೆ ರಾಜೇಶ್ ಅವರ ಮೃತದೇಹ ಪತ್ತೆಯಾಗಿದೆ. ಇದನ್ನು ಕಂಡು ಪತ್ನಿ ಮತ್ತು ಕುಟುಂಬಸ್ಥರು ಗೋಳಾಡುತ್ತಿದ್ದಾರೆ.

ಸ್ಥಳಕ್ಕೆ ಧಾವಿಸಿದ ರೈಲ್ವೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂಜಿಎಂ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Road Mishap ಕಾರು, ಟ್ರಕ್ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾ*ವು

Share This Article
Facebook Twitter Copy Link Print
Previous Article Landslide ವಯನಾಡ್ ಭಾರಿ ಮಳೆಗೆ ಸುರಂಗ ಮಾರ್ಗ ನಿರ್ಮಾಣ ಸ್ಥಳದಲ್ಲಿ ಭೂಕುಸಿತ: ಹಲವರು ಮಣ್ಣಿನಡಿ ಸಿಲುಕಿರುವ ಶಂಕೆ
Next Article Mysore dasara ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ: ಆನೆಗಳ ಹೃದಯದ ಆರೋಗ್ಯ ಪರಿಶೀಲನೆಗಾಗಿ ನಡೆದ ಇಸಿಜಿ ಪರೀಕ್ಷೆ

Popular Posts

Tiger family captured ಮೈಸೂರಲ್ಲಿ ಐದು ಮರಿಗಳ ಜತೆ ರಾಣಿ ಹುಲಿ ಸೆರೆ

1 Min Read

Newdelhi ಮೊಬೈಲ್ ಗ್ರಾಹಕರಿಗೆ ಟೆಲಿಕಾಂ ಕಂಪೆನಿಯಿಂದ ಮತ್ತೆ ಶಾಕ್: ರೀಚಾರ್ಜ್ ದರ ಶೇ.12-15 ಏರಿಕೆ ಸಾಧ್ಯತೆ!

2 Min Read

Ballari ಡಬಲ್ ಮರ್ಡರ್: ಪತ್ನಿ ಮಾವನನ್ನು ಚಾಕುವಿನಿಂದ ಇರಿದು ಕೊಂದ ಪತಿರಾಯ

1 Min Read

Lorry Strike ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 1ರಿಂದ ದಕ್ಷಿಣ ಭಾರತದಾದ್ಯಂತ ಲಾರಿ ಮುಷ್ಕರ

1 Min Read

You Might Also Like

ಕರ್ನಾಟಕದೇಶಪ್ರಮುಖ

Voter List Revision SIR ಪ್ರಕ್ರಿಯೆ​ ವೇಳೆ ಕರ್ನಾಟಕದಲ್ಲಿ ಭಾರಿ ಲೋಪ ಆರೋಪ : ಮೈತ್ರಿ ನಾಯಕರಿಂದ ದೂರು

2 Min Read
ಕರ್ನಾಟಕಪ್ರಮುಖವೈರಲ್

Mallalli Falls ಮಲ್ಲಳ್ಳಿ ಫಾಲ್ಸ್‌ನಲ್ಲಿ ರೀಲ್ಸ್ ಹುಚ್ಚು: ಈ ಯುವಕರಿಬ್ಬರು ಬದುಕಿದ್ದೇ ಪವಾಡ, ವಿಡಿಯೋ ನೋಡಿ

2 Min Read
ದೇಶಪ್ರಮುಖವೈರಲ್

Water bottle ನೀತಾ ಅಂಬಾನಿಯ ಈ ವಾಟರ್ ಬಾಟಲ್ ಬೆಲೆ ಎಷ್ಟು?

1 Min Read
Sportsದೇಶಪ್ರಮುಖ

Sports news ಅಫ್ಘಾನಿಸ್ತಾನದ ಮಾಜಿ ಕ್ರಿಕೆಟಿಗ ಶಪೂರ್ ಜದ್ರಾನ್ ನಿಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?