newsics.com| ನ್ಯೂಸಿಕ್ಸ್.
ಪತ್ನಿ ಹಾಗೂ ಆಕೆಯ ತಂದೆಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಸೋಮವಾರ ಸಂಜೆ ಬಳ್ಳಾರಿಯ ಗುಗ್ಗರಹಟ್ಟಿ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ನಾಗಲಕ್ಷ್ಮೀ (24) ಹಾಗೂ ಆಕೆಯ ತಂದೆ ಶ್ರೀನಿವಾಸ್ (48) ಎಂದು ಗುರುತಿಸಲಾಗಿದೆ.
ಆರೋಪಿಗಳಾದ ಪತಿ ತೇಜಾ (29) ಮತ್ತು ಆತನ ತಂದೆ ಗುರುಶಂಕರ್ (50). ಇಬ್ಬರೂ ದೋಬಿ (ಇಸ್ತ್ರಿ) ಕೆಲಸ ಮಾಡಿಕೊಂಡಿದ್ದು, ಘಟನೆಯ ಬಳಿಕ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಪತ್ನಿಯ ಮೇಲೆ ಅನುಮಾನ ಹೊಂದಿದ್ದ ತೇಜಾ ಆಗಾಗ್ಗೆ ಆಕೆಯೊಂದಿಗೆ ಜಗಳವಾಡುತ್ತಿದ್ದ. ದಂಪತಿ ನಡುವಿನ ಕಲಹವನ್ನು ಬಗೆಹರಿಸಲು ರಾಜಿ ಪಂಚಾಯಿತಿ ನಡೆಸಲು ಬಂದಿದ್ದ ಮಾವ ಶ್ರೀನಿವಾಸ್ ಅವರ ಮೇಲೆಯೂ ಆರೋಪಿ ಹಲ್ಲೆ ನಡೆಸಿದ್ದಾನೆ. ಈ ವೇಳೆ ಪತ್ನಿ ನಾಗಲಕ್ಷ್ಮೀ ಹಾಗೂ ಆಕೆಯ ತಂದೆ ಶ್ರೀನಿವಾಸ್ ಇಬ್ಬರಿಗೂ ಚಾಕುವಿನಿಂದ ಇರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಎಪಿಎಂಸಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯ ನಿಖರ ಕಾರಣ ಹಾಗೂ ಘಟನೆಗೆ ಸಂಬಂಧಿಸಿದ ಇತರೆ ಅಂಶಗಳ ಕುರಿತು ತನಿಖೆ ಮುಂದುವರೆಸಿದ್ದಾರೆ.
https://www.newsics.com/2026/07/07/i-will-never-forget-those-two-incidents-in-my-life-actress-radha-bhagavathi-opens-up-about-bitter-experiences/