newsics.com | ನ್ಯೂಸಿಕ್ಸ್
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ತೀವ್ರಗೊಂಡಿದ್ದು, ಹವಾಮಾನ ಇಲಾಖೆಯು ಜುಲೈ 8 ರಂದು ಕರಾವಳಿ ಮತ್ತು ಮಲೆನಾಡಿನ 7 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ಬೆಳಗಾವಿ, ಧಾರವಾಡಕ್ಕೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಬೆಳಗಾವಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 50-60 ಕಿಲೋಮೀಟರ್ ತಲುಪಬಹುದು ಎಂದೂ ತಿಳಿಸಿದೆ.
ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲಾದ್ಯಂತ ಹಾಗೂ ಬೆಳಗಾವಿಯ ಎರಡು, ಚಿಕ್ಕಮಗಳೂರಿನ ಐದು, ಹಾಸನ, ಶಿವಮೊಗ್ಗದ ಎರಡು ತಾಲೂಕುಗಳಲ್ಲಿ ಬುಧವಾರ (ಜು.8) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇನ್ನೂ ಕೆಲವು ದಿನಗಳ ಕಾಲ ಮುಂಗಾರು ಮಳೆಯ ಆರ್ಭಟ ಮುಂದುವರಿಯುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಜುಲೈ 9 ಮತ್ತು 10ರಂದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 9ರಂದು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ 8 ಮತ್ತು 9ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಭಾರಿ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.
7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೊಷಿಸಲಾಗಿದ್ದು, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಹೆಚ್ಚಿನ ಪ್ರಮಾಣದ ವರ್ಷಧಾರೆಯನ್ನು ನಿರೀಕ್ಷಿಸಲಾಗಿದೆ.
ಬೆಳಗಾವಿ ಮತ್ತು ಧಾರವಾಡದಲ್ಲೂ ಉತ್ತಮ ಮಳೆಯ ನಿರೀಕ್ಷೆ ಇದ್ದು, ಈ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮೈಸೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ಕೋಲಾರ ಮತ್ತು ರಾಮನಗರದಲ್ಲಿ ಸಾಧಾರಣ ಮಳೆಯನ್ನು ಅಂದಾಜಿಸಲಾಗಿದೆ. ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
https://www.newsics.com/2026/07/07/i-will-never-forget-those-two-incidents-in-my-life-actress-radha-bhagavathi-opens-up-about-bitter-experiences/
Mallalli Falls ಮಲ್ಲಳ್ಳಿ ಫಾಲ್ಸ್‌ನಲ್ಲಿ ರೀಲ್ಸ್ ಹುಚ್ಚು: ಈ ಯುವಕರಿಬ್ಬರು ಬದುಕಿದ್ದೇ ಪವಾಡ, ವಿಡಿಯೋ ನೋಡಿ
Tiger family captured ಮೈಸೂರಲ್ಲಿ ಐದು ಮರಿಗಳ ಜತೆ ರಾಣಿ ಹುಲಿ ಸೆರೆ