newsics.com | ನ್ಯೂಸಿಕ್ಸ್
ಚಿಕ್ಕಬಳ್ಳಾಪುರ: ಅತಿ ವೇಗವಾಗಿ ಬಂದ ಪೆಟ್ರೋಲ್ ಟ್ಯಾಂಕರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲೇ ಹೊತ್ತಿ ಉರಿದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ 11ನೇ ಮೈಲಿ ಬಳಿ ಸಂಭವಿಸಿದೆ. ಅತಿಯಾದ ವೇಗವೇ ಈ ಭೀಕರ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಪೆಟ್ರೋಲ್ ಟ್ಯಾಂಕರ್ಗೆ ಡಿಕ್ಕಿಯಾಗುತ್ತಿದ್ದಂತೆ ಇಂಧನ ಸೋರಿಕೆಯಾಗಿ ಭಾರಿ ಪ್ರಮಾಣದ ಅಗ್ನಿ ಜ್ವಾಲೆ ಸೃಷ್ಟಿಯಾಗಿದೆ. ಇದೇ ವೇಳೆ ಅದರ ಪಕ್ಕದಲ್ಲೇ ರಿವರ್ಸ್ ತೆಗೆದುಕೊಳ್ಳುತ್ತಿದ್ದ ಹಾಲಿನ ಟ್ಯಾಂಕರ್ ಲಾರಿಗೂ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದೆ. ಬೆಂಕಿಯ ತೀವ್ರತೆಗೆ ಎರಡೂ ಟ್ಯಾಂಕರ್ ಲಾರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.
ಲಾರಿಗೆ ಬೆಂಕಿ ತಗುಲುತ್ತಿದ್ದಂತೆ ಇಬ್ಬರೂ ಲಾರಿಗಳ ಚಾಲಕರು ಸಮಯಪ್ರಜ್ಞೆ ಮೆರೆದು, ವಾಹನದಿಂದ ಹೊರಕ್ಕೆ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ. ಘಟನೆಯ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ನಿರಂತರ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಈ ದುರ್ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Namma Metro ಮೆಟ್ರೋ ಪ್ರಯಾಣಿಕರೇ ಗಮನಿಸಿ: ಹಸಿರು ಮಾರ್ಗದಲ್ಲಿ ತಾಂತ್ರಿಕ ದೋಷ, ರೈಲು ಸಂಚಾರ ವಿಳಂಬ