newsics.com| ನ್ಯೂಸಿಕ್ಸ್
ಬೆಂಗಳೂರು: ಇನ್ಮುಂದೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಗುಟ್ಕಾ, ತಂಬಾಕು ಸೇವನೆ ಹಾಗೂ ಧೂಮಪಾನ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಿದೆ. ಈ ಕುರಿತು ಸಾರಿಗೆ ಸಚಿವ ಬೈರತಿ ಸುರೇಶ್ ಇಲಾಖೆಯ ಉನ್ನತಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಸಾರ್ವಜನಿಕ ಬಸ್‌ಗಳಲ್ಲಿ ಕೆಲವರು ಜಗಿಯುವ ಗುಟ್ಕಾ ಮತ್ತು ಧೂಮಪಾನದ ಅಸಹನೀಯ ವಾಸನೆಯಿಂದಾಗಿ ಸಹ ಪ್ರಯಾಣಿಕರು ತೀವ್ರ ಅಸ್ವಸ್ಥತೆ ಎದುರಿಸುತ್ತಿದ್ದಾರೆ. ಮುಖ್ಯವಾಗಿ ಮಕ್ಕಳು, ವೃದ್ಧರು ಹಾಗೂ ಅಸ್ತಮಾದಂತಹ ಉಸಿರಾಟದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಇದರಿಂದ ಭಾರೀ ತೊಂದರೆಯಾಗುತ್ತಿದೆ. ಈ ಗಂಭೀರ ಸಮಸ್ಯೆಯನ್ನು ಮನಗಂಡು, ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪ ಅವರು ಸಾರಿಗೆ ಇಲಾಖೆಗೆ ವಿಶೇಷ ಮನವಿ ಸಲ್ಲಿಸಿದ್ದರು.
ಈ ಮನವಿಗೆ ತಕ್ಷಣ ಸ್ಪಂದಿಸಿರುವ ಸಾರಿಗೆ ಸಚಿವರು, ಸಚಿವರ ಆಪ್ತ ಕಾರ್ಯದರ್ಶಿ ಡಾ. ದೇವರಾಜ ಬಿ. ಅವರ ಮೂಲಕ ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದು ತಕ್ಷಣವೇ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆದೇಶಿಸಿದ್ದಾರೆ.
ಹೊಸ ನಿರ್ದೇಶನದನ್ವಯ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾಯವ್ಯ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ತಂಬಾಕು ನಿಷೇಧ ನಿಯಮಗಳನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತದೆ. ಬಸ್‌ಗಳಲ್ಲಿ ನಿಯಮ ಉಲ್ಲಂಘಿಸುವವರಿಗೆ ಬಸ್‌ನಲ್ಲೇ ದಂಡ ವಿಧಿಸುವ ಪ್ರಕ್ರಿಯೆ ಚುರುಕುಗೊಳ್ಳಲಿದೆ.
Medical seat fraud ಮೆಡಿಕಲ್ ಸೀಟ್ ವಂಚನೆ: ಮಾಜಿ ಸಚಿವ ಆರ್.ಎಲ್.ಜಾಲಪ್ಪ ಸೊಸೆಗೆ 5 ವರ್ಷ ಕಠಿಣ ಜೈಲು ಶಿಕ್ಷೆ
Actress Swati’s second marriage ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸ್ವಾತಿ ರೆಡ್ಡಿ