newsics.com | ನ್ಯೂಸಿಕ್ಸ್
ಬೆಳಗಾವಿ: ಕೃಷ್ಣ, ಕಾವೇರಿ ಹಾಗೂ ಗೋದಾವರಿ ನದಿ ಜೋಡಣೆಗೆ ತೀರ್ಮಾನಿಸಲಾಗಿದ್ದು, ಕೇಂದ್ರ ಸರಕಾರಕ್ಕೆ ನಮ್ಮ ಸಮ್ಮತಿ ಸೂಚಿಸಿದ್ದೇವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಗುರುವಾರ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರವು ಇದನ್ನು ರಾಷ್ಟ್ರೀಯ ಯೋಜನೆಯಾಗಿ ಮಾಡಿ, 1 ಲಕ್ಷ ಕೋಟಿ ರೂ.ಯೋಜನೆ ಮಾಡಲಿದೆ.
ಇದರಲ್ಲಿ ಶೇ.10ರಷ್ಟು ರಾಜ್ಯ ಸರಕಾರದ ಪಾಲು, ಶೇ.90ರಷ್ಟು ಕೇಂದ್ರ ಸರಕಾರ ಭರಿಸಲಿದೆ ಎಂದು ಹೇಳಿದರು.
ಕಳೆದ ವರ್ಷ ತುಂಗಭದ್ರಾ ಅಣೆಕಟ್ಟಿನ ಗೇಟ್ ತುಂಡರಿಸಿತ್ತು. ಆಗ ನಾವು ಒಂದೇ ವಾರದಲ್ಲಿ ಪರಿಸ್ಥಿತಿ ನಿಭಾಯಿಸಿದೆವು. ನಂತರ ನಾವು ಎಲ್ಲ 33 ಗೇಟ್ ಬದಲಾವಣೆ ಮಾಡಿದ್ದೇವೆ. ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿರುವುದರಿಂದ 33 ಟಿಎಂಸಿ ನೀರು ನಷ್ಟವಾಗುತ್ತಿದೆ ಎಂದು ಅವರು ತಿಳಿಸಿದರು.
ಹೀಗಾಗಿ ಈ ಸಮಸ್ಯೆಗೆ ಪರಿಹಾರ ನೀಡಲು, ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ನೇತೃತ್ವದಲ್ಲಿ ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ ಮುಖ್ಯಮಂತ್ರಿಗಳು ಮೊದಲ ಬಾರಿಗೆ ಸಭೆ ಮಾಡಿ ಒಮ್ಮತದ ತೀರ್ಮಾನಕ್ಕೆ ಬರಲಾಗಿದೆ. ನಾವು ಪರಸ್ಪರ ಕಿತ್ತಾಡದೆ ರೈತರ ಬದುಕು ರಕ್ಷಣೆಗೆ ಕೇಂದ್ರದ ತಾಂತ್ರಿಕ ಸಮಿತಿ ಅಧ್ಯಯನ ಮಾಡಿ ವರದಿ ಸಲ್ಲಿಸಲಿದ್ದು, ನಂತರ ನಾವು ಏನು ಮಾಡಬೇಕು ಎಂಬುದನ್ನು ತೀರ್ಮಾನ ಮಾಡಲಾಗುವುದು. ಈ ಮಧ್ಯೆ ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಶಿವಕುಮಾರ್ ವಿವರಿಸಿದರು.
Rain Alert ರಾಜ್ಯದ ಇನ್ನೆರಡು ದಿನ ಮಾತ್ರ ಭಾರೀ ಮಳೆ: ಮುಂದೇನು? ಹವಾಮಾನ ತಜ್ಞೆ ಹೇಳಿದ್ದೇನು?
Snakes escaped ಹಾವು ಸಾಕಾಣಿಕಾ ಕೇಂದ್ರಕ್ಕೆ ನುಗ್ಗಿದ ಮಳೆ ನೀರು, 900 ಹಾವುಗಳು ಎಸ್ಕೇಪ್! ವೈರಲ್ ವಿಡಿಯೋ ನೋಡಿ