newsics.com
ನವದೆಹಲಿ: ಸೆಲ್ಫಿ ತೆಗೆಯಲು ಹೋಗಿ ಹಲವಾರು ಮಂದಿ ಸಾವನ್ನಪ್ಪುತ್ತಿದ್ದಾರೆ ಎಂಬ ಶಾಕಿಂಗ್ ವರದಿಯೊಂದು ಹೊರಬಿದ್ದಿದೆ.
ರೈಲಿನ ಮುಂದೆ ಸೆಲ್ಫಿ ತೆಗೆಯಲು ಹೋಗಿ ಒಬ್ಬರು ಪ್ರಾಣ ಕಳೆದುಕೊಂಡರೆ, ಇನ್ನೊಬ್ಬರು ಸೆಲ್ಫಿ ತೆಗೆಯಲು ಹೋಗಿ ಪ್ರವಾಹದ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.
ಜರ್ನಲ್ ಆಫ್ ಟ್ರಾವೆಲ್ ಮೆಡಿಸಿನ್‌ನಲ್ಲಿ 2022 ರಲ್ಲಿ ಪ್ರಕಟವಾದ ಅಧ್ಯಯನವು ಕಳೆದ 13 ವರ್ಷಗಳಲ್ಲಿ 379 ಸೆಲ್ಫಿ ಸಂಬಂಧಿತ ಸಾವುಗಳು ಸಂಭವಿಸಿವೆ ಎಂದು ಆಘಾತಕಾರಿ ವರದಿಯೊಂದನ್ನು ಬಹಿರಂಗ ಮಾಡಿದೆ.
140 ಪ್ರವಾಸಿಗರು ಸೆಲ್ಫಿ ತೆಗೆಯಲು ಯತ್ನಿಸಿ ಪ್ರಾಣ ಕಳೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಈ ಪ್ರಕರಣದಲ್ಲಿ ವಿಶ್ವದಲ್ಲಿಯೇ ಭಾರತದಲ್ಲಿ ಅತಿ ಹೆಚ್ಚು ಸೆಲ್ಫಿಯಿಂದ ಸಾವು ಸಂಭವಿಸುತ್ತಿದೆ ಎಂದು ಬಹಿರಂಗವಾಗಿದೆ.
ವರ್ಲ್ಡ್ ಆಫ್ ಸ್ಟ್ಯಾಟಿಸ್ಟಿಕ್ಸ್‌ನ 2024 ರ ವರದಿಯ ಪ್ರಕಾರ, ಭಾರತದಲ್ಲಿ 190 ಜನರು ಸೆಲ್ಫಿ ತೆಗೆಯಲು ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಅದಲ್ಲದೇ ಸೆಲ್ಫಿ ತೆಗೆಯಲು ಹೋಗಿ 55 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ