newsics.com
ಎಂಎಸ್ ಧೋನಿ ನಾಯಕತ್ವದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಟೀಂ ಇಂಡಿಯಾದ ಎಡಗೈ ವೇಗದ ಬೌಲರ್ ಬರೀಂದರ್ ಸಿಂಗ್ ಸ್ರಾನ್ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.
ಬಹಳ ವರ್ಷಗಳಿಂದ ಟೀಂ ಇಂಡಿಯಾದಿಂದ ಹೊರಗಿದ್ದ ಬರೀಂದರ್, ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ ಕ್ರಿಕೆಟ್ ಜೀವನಕ್ಕೆ ಅಂತ್ಯ ಹಾಡಿದ್ದಾರೆ. ಈ ಮೂಲಕ ಇಂದು ಒಂದೇ ದಿನ ಮೂವರು ಕ್ರಿಕೆಟಿಗರು ವೃತ್ತಿಜೀವನಕ್ಕೆ ವಿದಾಯ ಹೇಳಿದಂತ್ತಾಗಿದೆ. ಬರೀಂದರ್ ಸಿಂಗ್ ಸ್ರಾನ್ ಅವರಿಗೂ ಮೊದಲು ಆಸ್ಟ್ರೇಲಿಯಾದ ಯುವ ಬ್ಯಾಟ್ಸ್‌ಮನ್ ವಿಲ್ ಪುಕೊವ್ಸ್ಕಿ ಮತ್ತು ವೆಸ್ಟ್ ಇಂಡೀಸ್ ತಂಡದ ಶಾನನ್ ಗೇಬ್ರಿಯಲ್ ಕೂಡ ನಿವೃತ್ತಿ ಘೋಷಿಸಿದ್ದರು.
2016 ರಲ್ಲಿ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದ್ದ ವೇಗದ ಬೌಲರ್ ಬರೀಂದರ್ ಸ್ರಾನ್, ಕಳೆದ 8 ವರ್ಷಗಳಿಂದ ಟೀಂ ಇಂಡಿಯಾದಿಂದ ಹೊರಗಿದ್ದರು. ಈಗ ತಮ್ಮ ಕೆಲವು ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಅವರು ತಮ್ಮ ನಿವೃತ್ತಿಯ ನಿರ್ಧಾರದ ಬಗ್ಗೆ ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಬರೀಂದರ್, ತಮ್ಮ ಕೊನೆಯ ಅಂತರಾಷ್ಟ್ರೀಯ ಪಂದ್ಯವನ್ನು 22 ಜೂನ್ 2016 ರಂದು ಜಿಂಬಾಬ್ವೆ ವಿರುದ್ಧ ಟಿ20 ಸರಣಿಯಲ್ಲಿ ಆಡಿದ್ದರು.