newsics.com | ನ್ಯೂಸಿಕ್ಸ್
ದಾವಣಗೆರೆ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ರೈತರೊಬ್ಬರ ಜಮೀನಿನಲ್ಲಿದ್ದ ನೂರಾರು ಅಡಿಕೆ ಮರಗಳನ್ನು ಕತ್ತರಿಸಿ ವಿಕೃತಿ ಮೆರೆದಿದ್ದ ಆರೋಪಿಯನ್ನು ದಾವಣಗೆರೆ ಜಿಲ್ಲೆಯ ಮಾಯಕೊಂಡ ಠಾಣಾ ವ್ಯಾಪ್ತಿಯ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಬುಳ್ಳಾಪುರ ಮೂಲದ ಕಿರಣ್.ಆರ್ (26) ಎಂದು ಗುರುತಿಸಲಾಗಿದೆ.
ಜುಲೈ 3 ರಂದು ಬುಳ್ಳಾಪುರ ತಾಂಡಾದ ನಿವಾಸಿಯಾದ ಸಿದ್ದೇಶ್ ನಾಯ್ಕ್ ಎಂಬುವವರ ಕೃಷಿ ಭೂಮಿಯಲ್ಲಿ ಈ ಅಮಾನವೀಯ ಕೃತ್ಯ ನಡೆದಿತ್ತು. ದೂರಿನ ಆಧಾರದ ಮೇಲೆ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಗ್ರಾಮದಲ್ಲಿನ ಹಳೆಯ ವೈಮನಸ್ಸಿನ ಕಾರಣಕ್ಕೆ ಈ ದಾಳಿ ನಡೆದಿರುವುದನ್ನು ಪತ್ತೆಹಚ್ಚಿದ ತನಿಖಾ ತಂಡ, ಅಂತಿಮವಾಗಿ ಕಿರಣ್ನನ್ನು ಬಂಧಿಸಿದೆ. ವಿಚಾರಣೆ ವೇಳೆ ಆರೋಪಿಯು ತನ್ನ ತಪ್ಪು ಒಪ್ಪಿಕೊಂಡಿದ್ದು, ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಮುಂದುವರಿಸಿದ್ದಾರೆ.
HD Devegowda Wife ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಆಸ್ಪತ್ರೆಗೆ ದಾಖಲು