Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Chennamma Devegowda | ಹರದನಹಳ್ಳಿಯಲ್ಲಿ ಚೆನ್ನಮ್ಮ ದೇವೇಗೌಡರಿಗೆ ಅಂತಿಮ ವಿದಾಯ: ರಾಜ್ಯ ಗೌರವದೊಂದಿಗೆ ಇಂದು ಅಂತ್ಯಕ್ರಿಯೆ
ಕರ್ನಾಟಕ

Chennamma Devegowda | ಹರದನಹಳ್ಳಿಯಲ್ಲಿ ಚೆನ್ನಮ್ಮ ದೇವೇಗೌಡರಿಗೆ ಅಂತಿಮ ವಿದಾಯ: ರಾಜ್ಯ ಗೌರವದೊಂದಿಗೆ ಇಂದು ಅಂತ್ಯಕ್ರಿಯೆ

Share
2 Min Read
SHARE

newsics.com| ನ್ಯೂಸಿಕ್ಸ್

ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ, ಸರಳತೆ ಮತ್ತು ತ್ಯಾಗದ ಪ್ರತಿರೂಪವಾಗಿದ್ದ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರಿಗೆ ಇಂದು (ಜುಲೈ 20) ಹಾಸನ ಜಿಲ್ಲೆಯ ಹರದನಹಳ್ಳಿ ಸಮೀಪದ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ರಾಜ್ಯ ಗೌರವದೊಂದಿಗೆ ಅಂತಿಮ ವಿದಾಯ ಸಲ್ಲಿಸಲಾಗುತ್ತಿದೆ. ಹಲವು ದಶಕಗಳ ಕಾಲ ದೇವೇಗೌಡ ಕುಟುಂಬದ ಬೆನ್ನೆಲುಬಾಗಿ ನಿಂತಿದ್ದ ಚೆನ್ನಮ್ಮ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಹಾಗೂ ಸಾವಿರಾರು ಅಭಿಮಾನಿಗಳಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

ಚೆನ್ನಮ್ಮ ದೇವೇಗೌಡ ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಬಳಿಕ ಅವರ ಪಾರ್ಥಿವ ಶರೀರವನ್ನು ಮೊದಲು ಬೆಂಗಳೂರಿನ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ನಂತರ ಹಾಸನ ಜಿಲ್ಲೆಯ ಹೊಳೆನರಸೀಪುರಕ್ಕೆ ಕರೆದೊಯ್ಯಲಾಯಿತು. ಮಾರ್ಗದುದ್ದಕ್ಕೂ ಸಾವಿರಾರು ಜನರು ಅಂತಿಮ ನಮನ ಸಲ್ಲಿಸಿದರು. ಹಿರಿಸಾವೆ, ಚೆನ್ನರಾಯಪಟ್ಟಣ, ಬೆಳ್ಳೂರು ಕ್ರಾಸ್ ಸೇರಿದಂತೆ ಅನೇಕ ಕಡೆಗಳಲ್ಲಿ ವಾಹನವನ್ನು ನಿಲ್ಲಿಸಿ ಸಾರ್ವಜನಿಕರಿಗೆ ಗೌರವ ಸಲ್ಲಿಸುವ ಅವಕಾಶ ಕಲ್ಪಿಸಲಾಯಿತು.

 

ಇಂದು ಬೆಳಿಗ್ಗೆಯವರೆಗೆ ಹೊಳೆನರಸೀಪುರದಲ್ಲಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಹರದನಹಳ್ಳಿಯ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿಗೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತದೆ. ಮಧ್ಯಾಹ್ನ ಸುಮಾರು 2.15 ರಿಂದ 4 ಗಂಟೆಯೊಳಗೆ ಒಕ್ಕಲಿಗ ಸಮುದಾಯದ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಲಿದೆ. ಮೇಳುಕೋಟೆಯ ಚೆಲುವನಾರಾಯಣಸ್ವಾಮಿ ದೇವಾಲಯದ ಅರ್ಚಕರ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ.

ಅಂತ್ಯಕ್ರಿಯೆಗೆ ಲಕ್ಷಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆಯಿದ್ದು, ಜಿಲ್ಲಾಡಳಿತ ಭಾರಿ ಮಟ್ಟದ ಸಿದ್ಧತೆ ನಡೆಸಿದೆ. ಸುಮಾರು 20 ಎಕರೆ ಪ್ರದೇಶವನ್ನು ಸಮತಟ್ಟು ಮಾಡಿ ಸಾರ್ವಜನಿಕರಿಗಾಗಿ ಆಸನ ವ್ಯವಸ್ಥೆ ಮಾಡಲಾಗಿದೆ. 1,500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಪ್ರಮುಖ ಗಣ್ಯರ ಸಂಚಾರಕ್ಕಾಗಿ ಐದು ಹೆಲಿಪ್ಯಾಡ್‌ಗಳನ್ನೂ ಸಿದ್ಧಪಡಿಸಲಾಗಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ಗೌರವ ಸೂಚಕವಾಗಿ ರಜೆ ಘೋಷಿಸಲಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ರಾಜಕೀಯ ನಾಯಕರು ಅಂತಿಮ ವಿಧಿವಿಧಾನದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ದೇವೇಗೌಡ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಕರ್ನಾಟಕ ಸರ್ಕಾರ ಚೆನ್ನಮ್ಮ ದೇವೇಗೌಡ ಅವರಿಗೆ ಪೂರ್ಣ ರಾಜ್ಯ ಗೌರವದೊಂದಿಗೆ ಅಂತಿಮ ವಿದಾಯ ನೀಡಲು ನಿರ್ಧರಿಸಿದೆ.

ಚೆನ್ನಮ್ಮ ದೇವೇಗೌಡ ಅವರು ಸಾರ್ವಜನಿಕ ಜೀವನದಿಂದ ದೂರವಿದ್ದರೂ, ದೇವೇಗೌಡ ಅವರ ದೀರ್ಘ ರಾಜಕೀಯ ಪಯಣದಲ್ಲಿ ಮೌನ ಶಕ್ತಿಯಾಗಿ ಗುರುತಿಸಿಕೊಂಡಿದ್ದರು. ಕುಟುಂಬದ ಜವಾಬ್ದಾರಿಯನ್ನು ಸಂಪೂರ್ಣವಾಗಿ ಹೊತ್ತುಕೊಂಡ ಅವರು ಸರಳ ಜೀವನ, ಧಾರ್ಮಿಕ ನಿಷ್ಠೆ ಮತ್ತು ಆತಿಥ್ಯಕ್ಕಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ದೇವೇಗೌಡ ಕುಟುಂಬದ ಪ್ರತಿಯೊಬ್ಬರಿಗೂ ಮಾರ್ಗದರ್ಶಕರಾಗಿದ್ದ ಅವರ ಅಗಲಿಕೆ ವೈಯಕ್ತಿಕ ನಷ್ಟ ಮಾತ್ರವಲ್ಲ, ಕರ್ನಾಟಕ ರಾಜಕೀಯ ಇತಿಹಾಸದ ಒಂದು ಅಧ್ಯಾಯದ ಅಂತ್ಯವೆಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

Today Gold Rate | 22 ಕ್ಯಾರೆಟ್ ಮತ್ತು 24 ಕ್ಯಾರೆಟ್ ದರ ಎಷ್ಟು? ಖರೀದಿಗೆ ಇದು ಸೂಕ್ತ ಸಮಯವೇ

TAGGED:#chennammadevegowda #hdkumarswamy #news #newsics
Share This Article
Facebook Twitter Copy Link Print
Previous Article Today Gold Rate | 22 ಕ್ಯಾರೆಟ್ ಮತ್ತು 24 ಕ್ಯಾರೆಟ್ ದರ ಎಷ್ಟು? ಖರೀದಿಗೆ ಇದು ಸೂಕ್ತ ಸಮಯವೇ
Next Article ASI Monument Case | ಎಎಸ್‌ಐ ಸಂರಕ್ಷಿತ ದೇವಾಲಯದ ಬಾವಿಗೆ ಬಿದ್ದು ಬಾಲಕ ಸಾವು: ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರ ಆಕ್ರೋಶ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?