Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

Share
1 Min Read
SHARE

newsics.com | ನ್ಯೂಸಿಕ್ಸ್

ನವದೆಹಲಿ: ದೇಶದಲ್ಲಿ ಪ್ರತಿ ವರ್ಷ ಲಕ್ಷಾಂತರ ಜನರನ್ನು ಕಾಡುವ ಡೆಂಗ್ಯೂ ಜ್ವರಕ್ಕೆ ಕೊನೆಗೂ ಬ್ರೇಕ್ ಬೀಳುವ ಸಮಯ ಹತ್ತಿರ ಬಂದಿದೆ. ಡೆಂಗ್ಯೂ ತಡೆಗಟ್ಟುವ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲಿಗಲ್ಲು ಸ್ಥಾಪಿಸಿದ್ದು, ದೇಶದ ಮೊದಲ ಡೆಂಗ್ಯೂ ಲಸಿಕೆ QDENGA ಬಳಕೆಗೆ ಭಾರತೀಯ ಔಷಧ ಮಹಾನಿಯಂತ್ರಕರು (DCGI) ಅಧಿಕೃತ ಅನುಮೋದನೆ ನೀಡಿದ್ದಾರೆ.

 

ಜಪಾನ್ ಮೂಲದ ಪ್ರಸಿದ್ಧ ಬಯೋಫಾರ್ಮಾ ಕಂಪನಿಯಾದ ‘ಟಕೇಡಾ’ ಈ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ. ಭಾರತದಲ್ಲಿ 4 ರಿಂದ 60 ವರ್ಷದೊಳಗಿನ ಯಾರು ಬೇಕಾದರೂ ಈ ಲಸಿಕೆಯನ್ನು ಪಡೆದುಕೊಳ್ಳಬಹುದು ಎಂದು ಹೆಲ್ತ್‌ ಅಥಾರಿಟಿ ತಿಳಿಸಿದೆ.

ಈ ಲಸಿಕೆಯ ಪ್ರಮುಖ ವಿಶೇಷತೆಯೆಂದರೆ, ಇದನ್ನು ಪಡೆಯುವ ಮುನ್ನ ವ್ಯಕ್ತಿಗೆ ಡೆಂಗ್ಯೂ ಪರೀಕ್ಷೆ ಮಾಡುವ ಅಗತ್ಯವಿರುವುದಿಲ್ಲ. ಈ ಹಿಂದೆ ಡೆಂಗ್ಯೂ ಬಂದಿರಲಿ ಅಥವಾ ಬಾರದಿರಲಿ, ಮುಂಜಾಗ್ರತಾ ಕ್ರಮವಾಗಿ ಲಸಿಕೆ ತೆಗೆದುಕೊಳ್ಳಬಹುದು. ಒಟ್ಟು ಎರಡು ಡೋಸ್‌ಗಳಲ್ಲಿ ಈ ವ್ಯಾಕ್ಸಿನ್ ನೀಡಲಾಗುತ್ತಿದ್ದು, ಮೊದಲ ಡೋಸ್ ಪಡೆದ ಮೂರು ತಿಂಗಳ ಬಳಿಕ ಎರಡನೇ ಡೋಸ್ ಪಡೆಯಬೇಕಾಗುತ್ತದೆ. ಡೆಂಗ್ಯೂ ವೈರಸ್‌ನ ಎಲ್ಲಾ ನಾಲ್ಕು ವಿಧದ ರೂಪಾಂತರಗಳ ವಿರುದ್ಧವೂ ಇದು ಪರಿಣಾಮಕಾರಿಯಾಗಿ ಹೋರಾಡಬಲ್ಲದು.

ಈ ಲಸಿಕೆಗೆ ಅನುಮೋದನೆ ನೀಡುವ ಮುನ್ನ ಸುಮಾರು 19 ಹಂತಗಳ ಕಠಿಣ ಕ್ಲಿನಿಕಲ್ ಪರೀಕ್ಷೆಗಳನ್ನು ನಡೆಸಲಾಗಿದೆ. ಜಾಗತಿಕವಾಗಿ 28 ಸಾವಿರಕ್ಕೂ ಹೆಚ್ಚು ಜನರು ಈ ಪ್ರಯೋಗದಲ್ಲಿ ಭಾಗಿಯಾಗಿದ್ದರು. ಭಾರತದಲ್ಲೂ 3ನೇ ಹಂತದ ಕ್ಲಿನಿಕಲ್ ಟ್ರಯಲ್ಸ್ ನಡೆಸಿ, ಸುರಕ್ಷತೆಯನ್ನು ಖಚಿತಪಡಿಸಿಕೊಂಡ ಬಳಿಕವೇ ಗ್ರೀನ್ ಸಿಗ್ನಲ್ ನೀಡಲಾಗಿದೆ.

ಈಗಾಗಲೇ ವಿಶ್ವದ 43 ದೇಶಗಳಲ್ಲಿ ಬಳಕೆಯಲ್ಲಿರುವ ಈ ಲಸಿಕೆಯನ್ನು ಇದುವರೆಗೆ 3.2 ಕೋಟಿಗೂ ಹೆಚ್ಚು ಜನರಿಗೆ ನೀಡಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಕೂಡ ಈ ಲಸಿಕೆಯ ಗುಣಮಟ್ಟ ಮತ್ತು ಸುರಕ್ಷತೆಯನ್ನು ಪರಿಶೀಲಿಸಿ, ಡೆಂಗ್ಯೂ ಪೀಡಿತ ಪ್ರದೇಶಗಳಲ್ಲಿ ಬಳಸಲು ಗ್ರೀನ್ ಸಿಗ್ನಲ್ ನೀಡಿದೆ. ಹವಾಮಾನ ಬದಲಾವಣೆ ಹಾಗೂ ಸೊಳ್ಳೆಗಳ ಕಾಟದಿಂದ ಡೆಂಗ್ಯೂ ಹೆಚ್ಚುತ್ತಿರುವ ಭಾರತದಲ್ಲಿ, ಈ ಲಸಿಕೆ ಆರೋಗ್ಯ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಸೃಷ್ಟಿಸಲಿದೆ ಎಂದು ತಜ್ಞರು ಆಶಿಸಿದ್ದಾರೆ.

 

Samsung Layoffs ಸ್ಯಾಮ್‌ಸಂಗ್ ಉದ್ಯೋಗಿಗಳಿಗೆ ಬಿಗ್ ಶಾಕ್; ಹೆಡ್‌ಕ್ವಾರ್ಟರ್ಸ್ ಶಿಫ್ಟ್ ನೆಪದಲ್ಲಿ 800 ನೌಕರರ ವಜಾ

TAGGED:#Dengue vaccine #India #QDENGA #news #newsics
Share This Article
Facebook Twitter Copy Link Print
Previous Article Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ
Next Article Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

Popular Posts

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read

You Might Also Like

ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?