newsics.com | ನ್ಯೂಸಿಕ್ಸ್
ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ (89) ಅವರ ಅಂತ್ಯಕ್ರಿಯೆಯು ಸೋಮವಾರ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಕುಟುಂಬದ ಸ್ವಂತ ಜಮೀನಿನಲ್ಲಿ ಒಕ್ಕಲಿಗ ಸಂಪ್ರದಾಯದಂತೆ ವಿಧಿವಿಧಾನಗಳು ನಡೆದವು. ಚೆನ್ನಮ್ಮ ಅವರ ಕಿರಿಯ ಪುತ್ರ ಹೆಚ್.ಡಿ. ರಮೇಶ್ ಅವರು ಅಂತಿಮ ಪ್ರಕ್ರಿಯೆಗಳನ್ನು ಪೂರೈಸಿದರು. ಇದಕ್ಕೂ ಮುನ್ನ ಸಶಸ್ತ್ರ ಪೊಲೀಸರು ಮೂರು ಸುತ್ತು ಕುಶಾಲತೋಪು ಹಾರಿಸಿ ಗೌರವ ಸಲ್ಲಿಸಿದರು.
ಪತ್ನಿಯ ಪಾರ್ಥಿವ ಶರೀರಕ್ಕೆ ಹೂಗುಚ್ಚ ಇಟ್ಟು ಮಾಜಿ ಪ್ರಧಾನಿ ದೇವೇಗೌಡರು ಕಣ್ಣೀರಿಟ್ಟರು. ಇತ್ತ ತಾಯಿಯ ಅಗಲಿಕೆಯಿಂದ ನೊಂದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಕೊನೆಯ ಬಾರಿ ತಾಯಿಯ ಕೆನ್ನೆಗೆ ಮುತ್ತಿಟ್ಟು ಭಾವುಕರಾದರು.
ಪಾರ್ಥಿವ ಶರೀರದ ಮೇಲಿದ್ದ ರಾಷ್ಟ್ರಧ್ವಜವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹಸ್ತಾಂತರಿಸಿದರು. ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ಹಲವು ರಾಜಕೀಯ ಮುಖಂಡರು ಮತ್ತು ಸಹಸ್ರಾರು ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು.
DGP found dead ಕಚೇರಿಯಲ್ಲೇ ಡಿಜಿಪಿ ನಿಗೂಢ ಸಾವು: ಇಲಾಖೆಯಲ್ಲಿ ತಲ್ಲಣ!