Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

Share
2 Min Read
SHARE

newsics.com | ನ್ಯೂಸಿಕ್ಸ್

ಚೆನ್ನೈ: ಕಾಲಿವುಡ್ ಸೂಪರ್‌ಸ್ಟಾರ್ ಹಾಗೂ ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಅಭಿನಯದ ಕೊನೆಯ ಚಿತ್ರ ‘ಜನ ನಾಯಗನ್’ ತೆರೆಗೆ ಬರಲು ಇನ್ನು ಕೇವಲ ಎರಡೇ ದಿನ ಬಾಕಿಯಿದೆ. ಬಹುನಿರೀಕ್ಷಿತ ಈ ಸಿನಿಮಾ ಜುಲೈ 23ರಂದು ಪ್ರಪಂಚದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದ್ದು, ನಟ ವಿಜಯ್ ಅವರ ಅಭಿಮಾನಿಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ.

 

 

ಸೆನ್ಸಾರ್ ಮಂಡಳಿಯೊಂದಿಗಿನ ಕಾನೂನು ಸಮರದ ಕಾರಣದಿಂದಾಗಿ ಚಿತ್ರ ಬಿಡುಗಡೆ ಸುಮಾರು 7 ತಿಂಗಳು ತಡವಾಗಿತ್ತು. ಆದರೆ, ಈ ಸಮಯವನ್ನು ಚಿತ್ರತಂಡ ಸೂಕ್ತವಾಗಿ ಬಳಸಿಕೊಂಡಿದ್ದು, ಸಿನಿಮಾದಲ್ಲಿ ಹಲವು ಹೊಸ ಹಾಗೂ ಆಕರ್ಷಕ ಮಾರ್ಪಾಡುಗಳನ್ನು ಮಾಡಿದೆ. ಚಿತ್ರದ ಆರಂಭಿಕ ಟೈಟಲ್ ಕಾರ್ಡ್‌ನಲ್ಲಿ ವಿಜಯ್ ಅವರನ್ನು ಕೇವಲ ನಟನಾಗಿ ಮಾತ್ರವಲ್ಲದೆ, ತಮಿಳುನಾಡಿನ ‘ಮುಖ್ಯಮಂತ್ರಿ’ ಎಂದೇ ಪರಿಚಯಿಸಲಾಗಿದೆ. ಜೊತೆಗೆ ಅವರ ರಾಜಕೀಯ ಪಕ್ಷ ‘ಟಿವಿಕೆ’ (TVK) ಕುರಿತಾದ ನೇರ ಉಲ್ಲೇಖವನ್ನೂ ನೀಡಲಾಗಿದೆ. ವಿಜಯ್ ಅವರ ಪ್ರಸಿದ್ಧ ಸಿಗ್ನೇಚರ್ ‘ಹ್ಯಾಂಡ್ ಫ್ಲಿಕ್’ ಶೈಲಿ ಹಾಗೂ ತಮಿಳುನಾಡು ವಿಧಾನಸಭೆಯಲ್ಲಿ ಅವರು ಪ್ರದರ್ಶಿಸಿದ ನೈಜ ಮ್ಯಾನರಿಸಂ ಅನ್ನು ನೆನಪಿಸುವ ಹೊಸ ದೃಶ್ಯಗಳನ್ನು ಸೇರಿಸಲಾಗಿದೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ, ವಿವೇಕ್ ಸಾಹಿತ್ಯದ 2 ನಿಮಿಷಗಳ ಹೈ-ಎನರ್ಜಿ ಹಾಡಿನಲ್ಲಿ ವಿಜಯ್ ಅವರ ವಿಶಿಷ್ಟ ಹಾವಭಾವಗಳ ದೃಶ್ಯಗಳನ್ನು ಮರುಜೋಡಿಸಲಾಗಿದೆ.

ಚಿತ್ರಕ್ಕೆ ಪ್ರಮಾಣಪತ್ರ ನೀಡುವ ವೇಳೆ ಸೆನ್ಸಾರ್ ಮಂಡಳಿಯು ಸುಮಾರು 20 ಸೆಕೆಂಡುಗಳ ದೃಶ್ಯಕ್ಕೆ ಕತ್ತರಿ ಹಾಕಿದ್ದು, 10 ಸೆಕೆಂಡುಗಳ ದೃಶ್ಯದಲ್ಲಿ ಮಾರ್ಪಾಡು ಮಾಡಲು ಸೂಚಿಸಿತ್ತು. ಅಲ್ಲದೆ, ಧಾರ್ಮಿಕ ಉಲ್ಲೇಖವಿದ್ದ ಕೆಲವು ಸಂಭಾಷಣೆಗಳನ್ನು ಮ್ಯೂಟ್ ಮಾಡಲು ನಿರ್ದೇಶಿಸಿದ್ದು, ಅದರಂತೆ ಚಿತ್ರತಂಡ ಬದಲಾವಣೆಗಳನ್ನು ಪೂರ್ಣಗೊಳಿಸಿದೆ.

ಚಿತ್ರದ ಒಟ್ಟು ಅವಧಿ 3 ಗಂಟೆ 3 ನಿಮಿಷ ಇರುತ್ತದೆ. 30ಕ್ಕೂ ಹೆಚ್ಚು ದೇಶಗಳು ಸೇರಿದಂತೆ ಭಾರತದ ವಿವಿಧ ರಾಜ್ಯಗಳ ಸುಮಾರು 8,000 ಪರದೆಗಳಲ್ಲಿ ಪ್ರದರ್ಶನಗೊಳ್ಳಲಿದೆ. ಇನ್ನು, ತಮಿಳುನಾಡ ಒಂದರಲ್ಲೇ ಈಗಾಗಲೇ 3,500ಕ್ಕೂ ಹೆಚ್ಚು ಪ್ರದರ್ಶನಗಳು (Shows) ಪ್ಲಾನ್ ಆಗಿದ್ದು, ಈ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ವಿಜಯ್ ಅವರ ಸಿನಿ ಪಯಣದ ಕೊನೆಯ ಚಿತ್ರ ಇದಾಗಿರುವುದರಿಂದ ಚಿತ್ರರಂಗದಲ್ಲಿ ಹಾಗೂ ರಾಜಕೀಯ ವಲಯದಲ್ಲಿ ಈ ಸಿನಿಮಾದ ಮೇಲೆ ಅಪಾರ ನಿರೀಕ್ಷೆಗಳು ಗರಿಗೆದರಿವೆ.

 

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

TAGGED:#Jana Nayagan #Thalapathy Vijay #Kollywood
Share This Article
Facebook Twitter Copy Link Print
Previous Article DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?
Next Article Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?