newsics.com| ನ್ಯೂಸಿಕ್ಸ್
ರಾಜಕೀಯ ವಲಯದಲ್ಲಿ ಚುರುಕುಗೊಂಡ ಚಟುವಟಿಕೆ; ಹೊಸ ಮುಖಗಳಿಗೆ ಸಿಗಲಿದೆಯೇ ಅವಕಾಶ?
ರಾಜ್ಯಪಾಲರಿಂದ ಪ್ರಮಾಣವಚನ ಬೋಧನೆ; ಲೋಕಭವನದಲ್ಲಿ ಬಿರುಸಿನ ಸಿದ್ಧತೆ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಬುಧವಾರ (ಜುಲೈ 22) ಹೊಸ ಸಚಿವರು ಸಂಪುಟ ಸೇರ್ಪಡೆಯಾಗಲಿದ್ದಾರೆ.
ಈ ಸಂಬಂಧ ಸರ್ಕಾರದ ಕಾರ್ಯದರ್ಶಿ ಲೋಕೋಪಯೋಗಿ ಇಲಾಖೆ ಕಟ್ಟಡಗಳ ವಿಭಾಗದ ಕಾರ್ಯಪಾಲಕ ಅಭಿಯಂತರರಿಗೆ ಪತ್ರ ಬರೆದಿದ್ದು, ಹೊಸ ಸಚಿವರ ಪ್ರಮಾಣವಚನ ಸಮಾರಂಭಕ್ಕೆ ಅಗತ್ಯ ಸಿದ್ಧತೆ ಮಾಡುವಂತೆ ಸೂಚಿಸಲಾಗಿದೆ.
ಆದರೆ, ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂಪುಟ ಸೇರ್ಪಡೆ ವಿಚಾರವಾಗಿ ಹಗ್ಗಜಗ್ಗಾಟ ನಡೆದಿದ್ದು, ಹೈಕಮಾಂಡ್ ಮತ್ತೆ ಚರ್ಚೆಗೆ ಇಳಿದಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್‌ನಿಂದ ಸಿಎಂ ಶಿವಕುಮಾರ್ ಅವರಿಗೆ ಹೊಸ ಸೂಚನೆ ನೀಡಿದೆ ಎನ್ನಲಾಗಿದೆ. ಹೀಗಾಗಿ ಪ್ರಮಾಣವಚನ ಕಾರ್ಯಕ್ರಮ ನಾಳೆಯ ಬದಲು ಮುಂದೂಡಿಕೆಯಾಗುವ ಸಾಧ್ಯತೆಯೂ ಇದೆ.
ಬೆಂಗಳೂರಿನ ಕರ್ನಾಟಕ ಲೋಕಭವನದಲ್ಲಿ ಅದ್ಧೂರಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಹೈಕಮಾಂಡ್ ಹಸಿರು ನಿಶಾನೆ ತೋರಿದೆ ಎನ್ನಲಾಗಿದೆ. ಆದರೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರ್ಪಡೆ ವಿಚಾರ ಕಗ್ಗಂಟಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳಲ್ಲಿ ಚಟುವಟಿಕೆಗಳು ತೀವ್ರಗೊಂಡಿದ್ದು, ನೂತನ ಸಚಿವರ ಅಧಿಕೃತ ಪಟ್ಟಿ ಶೀಘ್ರದಲ್ಲೇ ಹೊರಬೀಳುವ ನಿರೀಕ್ಷೆಯಿದೆ.

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ
Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ
Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ