newsics.com
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ಶಂಕಿತ ಉಗ್ರನನ್ನು ಬಂಧಿಸಿದ್ದಾರೆ.
ಅಜೀಜ್ ಅಹ್ಮದ್ ಬಂಧಿತ ಶಂಕಿತ ಉಗ್ರ. ಹಿಜ್ಬ್ ಉಲ್ ತಹ್ರೀರ್ ಭಯೋತ್ಪಾದಕ ಸಂಘಟನೆಯ ಅಜೀಜ್ ಅಹ್ಮದ್ ಶನಿವಾರ ಬೆಳಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಸೌದಿಯ ಜಿದ್ದಾಗೆ ಪರಾರಿಯಾಗುತ್ತಿದ್ದಾಗ ಇಮಿಗ್ರೇಷನ್ ಅಧಿಕಾರಿಗಳು ಎನ್ಐಎಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧರಿಸಿ ಕೂಡಲೆ ಸ್ಥಳಕ್ಕೆ ತೆರಳಿದ ಎನ್ಐಎ ಅಧಿಕಾರಿಗಳು ಶಂಕಿತ ಉಗ್ರ ಅಜೀಜ್ ಅಹ್ಮದ್‌ನನ್ನು ಬಂಧಿಸಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಎನ್ಐಎ ಅಧಿಕಾರಿಗಳು ನೌಕಾನೆಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದ ಮೂವರನ್ನು ವಶಕ್ಕೆ ಪಡೆದಿದ್ದರು. ಆರೋಪಿಗಳು ಹನಿಟ್ರ್ಯಾಪ್ಗೆ ಒಳಗಾಗಿ, ಹಣಕ್ಕಾಗಿ ಸೀಬರ್ಡ್ ನೌಕಾನೆಲೆ ಫೋಟೋ, ಇತರೆ ಮಾಹಿತಿಯನ್ನು ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ನೀಡಿದ್ದರು. ಈ ಮಾಹಿತಿ ಆಧಾರದ ಮೇಲೆ ಎನ್ಐಎ ಅಧಿಕಾರಿಗಳು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
ತೋಡೂರಿನ ಸುನೀಲ್ ನಾಯ್ಕ್, ಮುದುಗಾದ ವೇತನ್ ತಾಂಡೇಲ್ ಮತ್ತು ಹಳವಳ್ಳಿಯ ಅಕ್ಷಯ್ ರವಿ ನಾಯ್ಕ್ ವಶಕ್ಕೆ ಪಡೆದು ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದರು.
ಒಂದು ಪ್ಯಾಂಟ್ ₹1 ಲಕ್ಷ.. ಜಾಕೆಟ್ ರೇಟ್ ಲಕ್ಷ, ಲಕ್ಷ..; ದರ್ಶನ್ ದಿಲ್ದಾರ್ ದುನಿಯಾ