newsics.com | ನ್ಯೂಸಿಕ್ಸ್
ನವದೆಹಲಿ: ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸುರಕ್ಷತಾ ಮುನ್ನೆಚ್ಚರಿಕೆಯಾಗಿ 16 ಪ್ರಮುಖ ಮೆಟ್ರೋ ನಿಲ್ದಾಣಗಳನ್ನು ಇಂದಿನಿಂದ ತಾತ್ಕಾಲಿಕವಾಗಿ ಮುಚ್ಚಲಾಗಿದೆ.
ಮುಂದಿನ ಆದೇಶ ಬರುವವರೆಗೆ ಈ ನಿಲ್ದಾಣಗಳ ಪ್ರವೇಶ (Entry) ಮತ್ತು ನಿರ್ಗಮನ (Exit) ದ್ವಾರಗಳು ಸಾರ್ವಜನಿಕರಿಗೆ ಬಂದ್ ಇರಲಿವೆ ಎಂದು ದೆಹಲಿ ಮೆಟ್ರೋ ರೈಲು ನಿಗಮ (DMRC) ಮಾಹಿತಿ ನೀಡಿದೆ.
ಬಂದ್ ಆಗಿರುವ ಪ್ರಮುಖ ಮೆಟ್ರೋ ನಿಲ್ದಾಣಗಳು
ಲೋಕ ಕಲ್ಯಾಣ ಮಾರ್ಗ, ರಾಜೀವ್ ಚೌಕ್, ಪಟೇಲ್ ಚೌಕ್, ರಾಮಕೃಷ್ಣ ಆಶ್ರಮ ಮಾರ್ಗ, ಬಾರಾಖಂಬಾ ರೋಡ್, ಸುಪ್ರೀಂ ಕೋರ್ಟ್, ಸೇವಾ ತೀರ್ಥ, ಜನಪಥ್, ಮಂಡಿ ಹೌಸ್, ಸೆಂಟ್ರಲ್ ಸೆಕ್ರೆಟರಿಯೇಟ್, ಐಟಿಒ, ದೆಹಲಿ ಗೇಟ್, ಇಂದ್ರಪ್ರಸ್ಥ, ಖಾನ್ ಮಾರ್ಕೆಟ್, ಜೋರ್ ಬಾಗ್ ಹಾಗೂ ಶಿವಾಜಿ ಸ್ಟೇಡಿಯಂ.
ನಿಲ್ದಾಣಗಳ ಪ್ರವೇಶ ದ್ವಾರಗಳನ್ನು ಮುಚ್ಚಲಾಗಿದ್ದರೂ, ದಿನನಿತ್ಯ ಸಂಚರಿಸುವ ಸಾವಿರಾರು ಪ್ರಯಾಣಿಕರಿಗೆ ತೊಂದರೆಯಾಗದಂತೆ ಕೆಲವು ವಿನಾಯಿತಿ ನೀಡಲಾಗಿದೆ. ರಾಜೀವ್ ಚೌಕ್, ಮಂಡಿ ಹೌಸ್ ಹಾಗೂ ಸೆಂಟ್ರಲ್ ಸೆಕ್ರೆಟರಿಯೇಟ್ ನಿಲ್ದಾಣಗಳಲ್ಲಿ ಬೇರೆ ಮಾರ್ಗಗಳಿಗೆ (Lines) ರೈಲು ಬದಲಾಯಿಸುವ (Interchange) ಸೌಲಭ್ಯವು ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ.
ನೀಟ್ ಅಕ್ರಮ ಖಂಡಿಸಿ ಭುಗಿಲೆದ್ದ ಪ್ರತಿಭಟನೆ
ನೀಟ್ (NEET) ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಖಂಡಿಸಿ ಸಿಜೆಪಿ ಜುಲೈ 20ರಂದು ‘ಸಂಸದ್ ಚಲೋ’ ಮೆರವಣಿಗೆಗೆ ಕರೆ ನೀಡಿತ್ತು. ಈ ವೇಳೆ ಸಾವಿರಾರು ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರು ನಗರದಲ್ಲಿ ಜಮಾಯಿಸಿದ್ದರಿಂದ ಸೋಮವಾರವೂ ಸಹ ಹಲವು ಮೆಟ್ರೋ ನಿಲ್ದಾಣಗಳನ್ನು ಮುಚ್ಚಿ ಭದ್ರತೆ ಹೆಚ್ಚಿಸಲಾಗಿತ್ತು. ಇದೀಗ ಬುಧವಾರವೂ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ DMRC ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಮೊಟ್ಟೆ ಏಟು