Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

Share
1 Min Read
SHARE

newsics.com| ನ್ಯೂಸಿಕ್ಸ್

ಬೆಂಗಳೂರು: ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕಡ್ಡಾಯವಾಗಿ ತೆರೆದಿರಬೇಕು ಹಾಗೂ ಈ ಅವಧಿಯಲ್ಲಿ ಪಡಿತರ ವಿತರಣೆ ನಡೆಸಬೇಕು ಎಂದು ಇಲಾಖೆಯ ಆಯುಕ್ತರು ನಿರ್ದೇಶನ ನೀಡಿದ್ದಾರೆ.

ಜುಲೈ-2026ರ ಅನ್ನಭಾಗ್ಯ ಅಕ್ಕಿ ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (NFSA) ಅಡಿ ವಿತರಿಸಲಾಗುವ ಅಕ್ಕಿಯನ್ನು ಫಲಾನುಭವಿಗಳಿಗೆ ಯಾವುದೇ ವಿಳಂಬವಿಲ್ಲದೆ ತಲುಪಿಸುವ ಉದ್ದೇಶದಿಂದ ಈ ಆದೇಶ ಹೊರಡಿಸಲಾಗಿದೆ.

ವಿಳಂಬಕ್ಕೆ ಬ್ರೇಕ್ ಹಾಕಿದ ಇಲಾಖೆ

ಕೆಲವು ಜಿಲ್ಲೆಗಳಲ್ಲಿ ನ್ಯಾಯಬೆಲೆ ಅಂಗಡಿ ಮಾಲೀಕರು ಸಗಟು ಮಳಿಗೆಗಳಿಂದ ಆಹಾರಧಾನ್ಯವನ್ನು ಸಂಪೂರ್ಣವಾಗಿ ಪಡೆದುಕೊಂಡಿದ್ದರೂ ಪಡಿತರ ವಿತರಣೆಯನ್ನು ತಕ್ಷಣ ಆರಂಭಿಸದೆ ವಿಳಂಬ ಮಾಡುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದೆ. ಕೆಲವು ಕಡೆ ಎಲ್ಲಾ ಆಹಾರಧಾನ್ಯ ಬಂದ ಬಳಿಕವೇ ವಿತರಣೆ ಆರಂಭಿಸುತ್ತಿರುವ ಪ್ರಕರಣಗಳೂ ವರದಿಯಾಗಿವೆ.

ಈ ಹಿನ್ನೆಲೆಯಲ್ಲಿ, ಯಾವ ಪ್ರಮಾಣದ ಆಹಾರಧಾನ್ಯ ಲಭ್ಯವಾಗುತ್ತದೆಯೋ ಅದನ್ನು ಕೂಡಲೇ ಫಲಾನುಭವಿಗಳಿಗೆ ವಿತರಿಸಬೇಕು. ಎಲ್ಲಾ ದಾಸ್ತಾನು ಬರುವವರೆಗೆ ಕಾಯಬಾರದು ಎಂದು ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಜುಲೈ ತಿಂಗಳ NFSA ಆಹಾರಧಾನ್ಯ ಹಾಗೂ ಅನ್ನಭಾಗ್ಯ ಅಕ್ಕಿಯ ವಿತರಣೆಯನ್ನು ಜುಲೈ 31ರೊಳಗೆ ಪೂರ್ಣಗೊಳಿಸಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಇದಕ್ಕಾಗಿ ಎಲ್ಲಾ ನ್ಯಾಯಬೆಲೆ ಅಂಗಡಿಗಳು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕಾರ್ಯನಿರ್ವಹಿಸುವುದು ಕಡ್ಡಾಯವಾಗಿದೆ.

ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ

ಜಿಲ್ಲೆಗಳ ಜಂಟಿ ಹಾಗೂ ಉಪನಿರ್ದೇಶಕರು ತಮ್ಮ ವ್ಯಾಪ್ತಿಯ ಎಲ್ಲಾ ನ್ಯಾಯಬೆಲೆ ಅಂಗಡಿಗಳು ನಿಗದಿತ ಸಮಯವನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿವೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಸೂಚಿಸಲಾಗಿದೆ. ಆಹಾರ ನಿರೀಕ್ಷಕರು ನಿಯಮಿತವಾಗಿ ಮೇಲ್ವಿಚಾರಣೆ ನಡೆಸಿ, ಅರ್ಹ ಪಡಿತರ ಚೀಟಿದಾರರಿಗೆ ಸಂಪೂರ್ಣ ಆಹಾರಧಾನ್ಯ ವಿತರಣೆ ಆಗುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಇಲಾಖೆ ಆದೇಶಿಸಿದೆ.

ಸರ್ಕಾರದ ಆದೇಶವನ್ನು ಉಲ್ಲಂಘಿಸಿ ನಿಗದಿತ ಸಮಯದಲ್ಲಿ ಅಂಗಡಿ ತೆರೆಯದಿದ್ದರೆ ಅಥವಾ ಪಡಿತರ ವಿತರಣೆಯಲ್ಲಿ ಅನಗತ್ಯ ವಿಳಂಬ ಮಾಡಿದರೆ, ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿ ವಿತರಕರ ವಿರುದ್ಧ ನಿಯಮಾನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಎಚ್ಚರಿಕೆ ನೀಡಿದೆ.

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

 

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

TAGGED:#ration #morningtonight #available #government #karbataka #kannadanews #news #newsics
Share This Article
Facebook Twitter Copy Link Print
Previous Article Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?
Next Article Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

Popular Posts

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?