newsics.com | ನ್ಯೂಸಿಕ್ಸ್
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟ ಮತ್ತೆ ಶುರುವಾಗಿದೆ. ಕರಾವಳಿ ಭಾಗದಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ನಿರೀಕ್ಷೆ ಹಿನ್ನೆಲೆಯಲ್ಲಿ ಗುರುವಾರ (ಜುಲೈ 23) ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶೈಕ್ಷಣಿಕ ಸಂಸ್ಥೆಗಳಿಗೂ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕರಾವಳಿ ಮೂರು ಜಿಲ್ಲೆಗಳಲ್ಲಿ ಕೆಲವು ದಿನಗಳಲ್ಲಿ ಭಾರೀ ಮಳೆ ಆಗುತ್ತಿದೆ. ನಾಳೆ ಜುಲೈ 23ರಂದು ಗುರುವಾರ ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಕನಿಷ್ಠ 115 ರಿಂದ 200 ಮಿಲಿ ಮೀಟರ್ ವರೆಗೆ ಅತ್ಯಧಿಕ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ವಸತಿ ಶಾಲೆಗಳಿಗೆ ಮತ್ತು ಪದವಿ ಪೂರ್ವ ಹಾಗೂ ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಯಾವುದೇ ತರಗತಿಗಳನ್ನು ನಡೆಸದಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿ ಆದೇಶದಲ್ಲಿ ಏನೇನಿದೆ?
ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ನೀಡುವ ಜೊತೆಗೆ ಆದೇಶದಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ನೀಡಿದ್ದಾರೆ. ಅದೇನೆಂದರೆ ‘ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚಿಸಿದ್ದು, ಉಲ್ಲಂಘಿಸಬಾರದು.
ಭಾರೀ ಮಳೆ: ಆರೆಂಜ್ & ಯೆಲ್ಲೋ ಅಲರ್ಟ್
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ಪ್ರಕಾರ, ಕರಾವಳಿ ಭಾಗದಲ್ಲಿ ಸಾಧಾರಣದಿಂದ ಭಾರೀ ಮಳೆ, ಕೆಲವೆಡ ಅತ್ಯಧಿಕ ಧಾರಕಾರ ಮಳೆ ಆಗಲಿದೆ. ಈ ಪೈಕಿ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಉಳಿದಂತೆ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ‘ಯೆಲ್ಲೋ ಅಲರ್ಟ್’ ಕೊಡಲಾಗಿದೆ ಎಂದು ಐಎಂಡಿ ತಿಳಿಸಿದೆ.
ಮುಂದಿನ 48 ಗಂಟೆಗಳ ಕಾಲ ಕರಾವಳಿ ಒಳಗೊಂಡಂತೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ, ಮುಂದಿನ 24 ಗಂಟೆ ವಿಜಯಪುರ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಸಾಧಾರಣದಿಂದ ಭಾರೀ ಮಳೆ ಸಂಭವ ಹಿನ್ನೆಲೆಯಲ್ಲಿ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ ಎಂದು ಐಎಂಡಿ ವರದಿ ತಿಳಿಸಿದೆ.
AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!
Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್, ಯಾರೆಲ್ಲ ಸೇರಿದ್ರು?