newsics.com| ನ್ಯೂಸಿಕ್ಸ್
ಬೆಳಗಾವಿ: ಜಿಲ್ಲೆಯ ಗೋಕಾಕ್ ಪಟ್ಟಣದ ಖಾಸಗಿ ಕೋಚಿಂಗ್ ಸೆಂಟರ್ ಒಂದರಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಗಂಭೀರ ಆರೋಪ ಕೇಳಿಬಂದಿದೆ.
ಸಂಸ್ಥೆಯ ಶಿಕ್ಷಕನೇ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಿ ಬಾಲಕಿಯರ ಪೋಷಕರು ಹಾಗೂ ಸ್ಥಳೀಯರು ಕೋಚಿಂಗ್ ಸೆಂಟರ್ ಮುಂದೆ ಭಾರೀ ಪ್ರತಿಭಟನೆ ನಡೆಸಿದರು.
ಕೋಚಿಂಗ್ ಸೆಂಟರ್‌ನ ಶಿಕ್ಷಕ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತರ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಗೋಕಾಕ್ ನಗರ ಪೊಲೀಸರು ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ, ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಆರೋಪಿ ಶಿಕ್ಷಕನನ್ನು ವಶಕ್ಕೆ ಪಡೆದಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!