Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

Share
2 Min Read
SHARE

newsics.com | ನ್ಯೂಸಿಕ್ಸ್

ಭಾರತದ ಯಂಗ್‌ ಬ್ಯಾಟಿಂಗ್‌ ಸೆನ್ಸೇಷನ್‌ ವೈಭವ್ ಸೂರ್ಯವಂಶಿ (Vaibhav Sooryavanshi) ಗುರುವಾರ ಟಿ20 ಅಂತರರಾಷ್ಟ್ರೀಯ (T20I) ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ.

ಜಿಂಬಾಬ್ವೆ ವಿರುದ್ಧ ಹರಾರೆಯಲ್ಲಿ ನಡೆದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಕೇವಲ 15ನೇ ವಯಸ್ಸಿನಲ್ಲಿ ಸಿಡಿಲಬ್ಬರದ ಅರ್ಧಶತಕ ಸಿಡಿಸುವ ಮೂಲಕ, ಅಂತರರಾಷ್ಟ್ರೀಯ ಟಿ20ಯಲ್ಲಿ ಅರ್ಧಶತಕ ಬಾರಿಸಿದ ಜಗತ್ತಿನ ಅತ್ಯಂತ ಕಿರಿಯ ಆಟಗಾರ ಎಂಬ ವಿಶ್ವದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಹರಾರೆ ಸ್ಪೋರ್ಟ್ಸ್ ಕ್ಲಬ್ ಅಂಗಳದಲ್ಲಿ ಜಿಂಬಾಬ್ವೆ ನೀಡಿದ 126 ರನ್‌ಗಳ ಸರಳ ಗುರಿಯನ್ನು ಬೆನ್ನಟ್ಟಿದ ಭಾರತಕ್ಕೆ ವೈಭವ್ ಇನ್ನಿಂಗ್ಸ್‌ ಆಸರೆಯಾಯಿತು. ಇದರಿಂದಾಗಿ ಟೀಮ್‌ ಇಂಡಿಯಾ ಕೇವಲ 13.2 ಓವರ್‌ಗಳಲ್ಲಿ 3 ವಿಕೆಟ್‌ಗೆ 126 ರನ್‌ ಬಾರಿಸಿ ಗೆಲುವು ಕಂಡಿತು. ಈ ಜಯದೊಂದಿಗೆ ನಾಯಕ ಶ್ರೇಯಸ್‌ ಅಯ್ಯರ್‌ ಕೂಡ ನಿಟ್ಟುಸಿರು ಬಿಟ್ಟಿದ್ದಾರೆ. ಏಕೆಂದರೆ, ನಾಯಕನಾಗಿ ಆಡಿದ 8ನೇ ಪಂದ್ಯದಲ್ಲಿ ಅವರು ಮೊದಲ ಜಯ ದಾಖಲಿಸಿದ್ದಾರೆ.

ಚೇಸಿಂಗ್‌ ಮಾಡಿದ ಭಾರತಕ್ಕೆ 18 ಎಸೆತಗಳಲ್ಲಿ ಭರ್ಜರಿ ಅರ್ಧಶತಕ ಸಿಡಿಸಿ ವೈಭವ್‌ ಸೂರ್ಯವಂಶಿ ಮಹೋನ್ನತ ಆರಂಭ ನೀಡಿದ್ದರು. ಜಿಂಬಾಬ್ವೆ ಬೌಲರ್‌ಗಳನ್ನು ಅಕ್ಷರಶಃ ಕಂಗಾಲುಗೊಳಿಸಿದ ಈ 15 ವರ್ಷದ ಯುವ ಪ್ಲೇಯರ್‌, ತಮ್ಮ ಸ್ಪೋಟಕ ಇನಿಂಗ್ಸ್‌ನಲ್ಲಿ 4 ಭರ್ಜರಿ ಬೌಂಡರಿ ಹಾಗೂ 4 ಸಿಕ್ಸರ್‌ಗಳನ್ನು ಚಚ್ಚಿದರು.

ಸಚಿನ್, ಕುಶಾಲ್ ಮಲ್ಲಾ ಸಾರ್ವಕಾಲಿಕ ದಾಖಲೆ ಧೂಳೀಪಟ

15 ವರ್ಷ 118 ದಿನಗಳ ಹರಯದಲ್ಲಿ ಈ ಮೈಲಿಗಲ್ಲು ನೆಟ್ಟ ಸೂರ್ಯವಂಶಿ, ಈ ಹಿಂದೆ 15 ವರ್ಷ 340 ದಿನಗಳಲ್ಲಿ ಟಿ20I ಅರ್ಧಶತಕ ಬಾರಿಸಿ ದಾಖಲೆ ಬರೆದಿದ್ದ ನೇಪಾಳದ ಕುಶಾಲ್ ಮಲ್ಲಾ (Kushal Malla) ಅವರನ್ನು ಹಿಂದಿಕ್ಕಿದ್ದಾರೆ.

ಇದಲ್ಲದೆ, ಐಸಿಸಿ ಪೂರ್ಣಪ್ರಮಾಣದ ಸದಸ್ಯತ್ವ ಹೊಂದಿರುವ (Full-Member Nations) ದೇಶಗಳ ಪೈಕಿ ಅತಿ ಕಿರಿಯ ವಯಸ್ಸಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ (ಟೆಸ್ಟ್) ಅರ್ಧಶತಕ (16 ವರ್ಷ 213 ದಿನ) ಬಾರಿಸಿದ್ದ ಕ್ರಿಕೆಟ್ ದಿಗ್ಗಜ ‘ಮಾಸ್ಟರ್ ಬ್ಲಾಸ್ಟರ್’ ಸಚಿನ್ ತೆಂಡೂಲ್ಕರ್ ಅವರ ದಶಕಗಳ ಕಾಲದ ದಾಖಲೆಯನ್ನು ಸೂರ್ಯವಂಶಿ ಈಗ ಧೂಳೀಪಟ ಮಾಡಿದ್ದಾರೆ.

ದೇಶೀಯ ಹಾಗೂ ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಈಗಾಗಲೇ ತಮ್ಮ ಆಕ್ರಮಣಕಾರಿ ಬ್ಯಾಟಿಂಗ್‌ನಿಂದ ಸದ್ದು ಮಾಡಿದ್ದ ಈ ಎಡಗೈ ಬ್ಯಾಟರ್, ಅಂತರರಾಷ್ಟ್ರೀಯ ರಂಗದಲ್ಲೂ ಅದೇ ಬಿರುಸಿನ ಆಟವನ್ನು ಮುಂದುವರಿಸಿದ್ದಾರೆ. ವೇಗ ಮತ್ತು ಸ್ಪಿನ್ ಎರಡನ್ನೂ ಅತ್ಯಂತ ನಿರಾಯಾಸವಾಗಿ ಎದುರಿಸಿದ ಇವರ ಬ್ಯಾಟಿಂಗ್, ಪುರುಷರ ಟಿ20I ನಲ್ಲಿ ಭಾರತದ ಪರ ದಾಖಲಾದ ವೇಗದ ಅರ್ಧಶತಕಗಳ ಪಟ್ಟಿಯಲ್ಲೂ ಸ್ಥಾನ ಪಡೆದುಕೊಂಡಿದೆ.

ಇದಕ್ಕೂ ಮುನ್ನ, ಭಾರತದ ಪರ ಟಿ20I ಪಂದ್ಯವಾಡಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ವೈಭವ್, ಇದೀಗ ಜಾಗತಿಕ ಮಟ್ಟದ ಮತ್ತೊಂದು ಬೃಹತ್ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಸರಣಿಯಲ್ಲಿ ಭಾರತಕ್ಕೆ ಶುಭಾರಂಭ

ಇದಕ್ಕೂ ಮುನ್ನ, ಶಿಸ್ತುಬದ್ಧ ಬೌಲಿಂಗ್ ಪ್ರದರ್ಶಿಸಿದ ಭಾರತೀಯ ಬೌಲರ್‌ಗಳು ಜಿಂಬಾಬ್ವೆ ಪಡೆಯನ್ನು 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 125 ರನ್‌ಗಳಿಗೆ ನಿಯಂತ್ರಿಸಿದರು. ಸಾಧಾರಣ ಮೊತ್ತದ ಗುರಿ ಬೆನ್ನಟ್ಟಿದ ಭಾರತಕ್ಕೆ ಸೂರ್ಯವಂಶಿ ನೀಡಿದ ಅದ್ಭುತ ಆಕ್ರಮಣಕಾರಿ ಆರಂಭದಿಂದಾಗಿ ಯಾವುದೇ ಆತಂಕವಿಲ್ಲದೆ ಜಯದ ಗಡಿ ತಲುಪಲು ಸಾಧ್ಯವಾಯಿತು. ಈ ಮೂಲಕ ಭಾರತ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಕಂಡಿದೆ.

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

 

TAGGED:Sachin's record broken Vaibhav Suryavanshi! Shreyas sighs with victory against Zimbabwe
Share This Article
Facebook Twitter Copy Link Print
Previous Article Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!
Next Article Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?