newsics.com | ನ್ಯೂಸಿಕ್ಸ್
ದೆಹಲಿ ನಗರದಲ್ಲಿ ನಡೆಯುತ್ತಿರುವ ಪ್ರತಿಭಟನೆಯ ನೇತೃತ್ವ ವಹಿಸಿರುವ ಕಾಕ್ರೋಚ್ ಜನತಾ ಪಕ್ಷ (CJP) ಸಂಸ್ಥಾಪಕ ಹಾಗೂ ಮುಖ್ಯಸ್ಥ ಅಭಿಜಿತ್ ದೀಪ್ಕೆ ಅವರು ದಿಢೀರ್ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರಿಗೆ ಟೈಫಾಯ್ಡ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಅವರು ಸ್ವತಃ ವಿಡಿಯೋ ಸಂದೇಶದ ಮೂಲಕ ಮಾಹಿತಿ ನೀಡಿದ್ದಾರೆ.
ತಮ್ಮ ಆರೋಗ್ಯದ ಕುರಿತು ಮಾತನಾಡಿದ ಅಭಿಜಿತ್ ದೀಪ್ಕೆ, ಕಳೆದ ಕೆಲವು ದಿನಗಳಿಂದ ಜ್ವರ, ದೌರ್ಬಲ್ಯ ಹಾಗೂ ದೈಹಿಕ ಅಸ್ವಸ್ಥತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರನ್ನು ಸಂಪರ್ಕಿಸಿದ್ದಾಗಿ ತಿಳಿಸಿದ್ದಾರೆ. ಬಳಿಕ ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿ ಟೈಫಾಯ್ಡ್ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿದ್ದಾರೆ.
ಈ ಬೆಳವಣಿಗೆ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ತಾತ್ಕಾಲಿಕ ಹಿನ್ನಡೆಯಾಗಿ ಪರಿಣಮಿಸಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿರುವ ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರು ಅವರ ಶೀಘ್ರ ಚೇತರಿಕೆಗೆ ಹಾರೈಸಿದ್ದಾರೆ. ನಾಯಕನ ಆರೋಗ್ಯ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಮುಂದಿನ ಪ್ರತಿಭಟನಾ ಕಾರ್ಯಕ್ರಮಗಳ ಬಗ್ಗೆ ಕುತೂಹಲ ಮೂಡಿದೆ.
ಇದೀಗ ವೈದ್ಯರ ಸಲಹೆಯಂತೆ ಅಭಿಜಿತ್ ದೀಪ್ಕೆ ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದು, ಆರೋಗ್ಯದಲ್ಲಿ ಸುಧಾರಣೆ ಕಂಡ ಬಳಿಕ ಮತ್ತೆ ಪ್ರತಿಭಟನೆಯ ನೇತೃತ್ವ ವಹಿಸುವುದಾಗಿ ತಿಳಿಸಿದ್ದಾರೆ. ಈ ನಡುವೆ ಪಕ್ಷದ ಇತರ ಮುಖಂಡರು ಪ್ರತಿಭಟನೆಯನ್ನು ಮುಂದುವರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಭಿಜಿತ್ ದೀಪ್ಕೆ ಅವರ ಅನಾರೋಗ್ಯದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದ್ದು, ಅವರ ಆರೋಗ್ಯ ಶೀಘ್ರ ಸುಧಾರಿಸಲಿ ಎಂದು ಹಲವರು ಶುಭ ಹಾರೈಕೆಗಳನ್ನು ವ್ಯಕ್ತಪಡಿಸಿದ್ದಾರೆ. ವೈದ್ಯರು ಸಂಪೂರ್ಣ ವಿಶ್ರಾಂತಿ ಮತ್ತು ಅಗತ್ಯ ಚಿಕಿತ್ಸೆ ಪಡೆಯುವಂತೆ ಸೂಚಿಸಿರುವುದಾಗಿ ತಿಳಿದುಬಂದಿದೆ.
BPL Card Update | ಕರ್ನಾಟಕದಲ್ಲಿ BPL ಕಾರ್ಡ್‌ಗೆ ಆದಾಯ ಮಿತಿ ₹3 ಲಕ್ಷಕ್ಕೆ ಏರಿಕೆ?